Heavy rain yellow alert announced ಇಂದಿನಿಂದ ಮತ್ತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಯೆಲ್ಲೋ ಅಲರ್ಟ್ ಎಚ್ಚರಿಕೆ

Written by Admin

Published on:

Spread the love

Heavy rain yellow alert announced : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರವಾಗಿ ಶುರುವಾಗಿದೆ. ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅದರಲ್ಲಿ ಕಲಬುರಗಿ ಜಿಲ್ಲೆಯಲ್ಲಿಕಳೆದ ಎರಡು ದಿನಗಳಿಂದ ಭರ್ಜರಿಮಳೆಯಾಗುತ್ತಿದೆ.

ಭಾನುವಾರ ರಾತ್ರಿ ಮತ್ತು ಸೋಮವಾರ ರಾತ್ರಿ ಮಳೆಯ ಆರ್ಭಟ ಜೋರಾಗಿತ್ತು. ಗುಡುಗು ಸಿಡಿಲಿನೊಂದಿಗೆ ಮಳೆ ಸುರಿಯುತ್ತಿದೆ.ಇದರಿಂದಾಗಿಕಲಬುರಗಿ ನಗರದ ಇಳೆ ತಂಪಾಗಿದೆ. ಬಿಸಿಲಿನಿಂದ ತತ್ತರಿಸಿದ ಜನ ಈಗ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದಲ್ಲಿ ಮಳೆ ಮತ್ತೆ ತೀವ್ರವಾಗಿದ್ದು, ಆರು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬೆಳಗ್ಗೆಯೇ ಮಳೆಯಾಗುವ ಸಾಧ್ಯತೆ ಇದೆ. ಮೇ 13 ರಿಂದ 19 ರವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಮೇ 15 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ

ಇದನ್ನೂ ಓದಿ Red gram purchase date extended ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಮೇ 31ರ ವರೆಗೆ ಕಾಲಾವಕಾಶ

ಪೂರ್ವ ಮುಂಗಾರು ಮಳೆಯಲ್ಲಿ ಗುಡುಗು-ಸಿಡಿಲಿನ ಆರ್ಭಟ ಜೋರಾಗಿರುತ್ತದೆ. ಅಲ್ಲದೆ ಬಿರುಗಾಳಿ ಮಳೆ ಆಗಲಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಈ ವಾರ ಭಾರಿ ಹೆಚ್ಚಾಗಲಿದೆ. ಇಂದು ಬೆಳಂಬೆಳಗ್ಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಸಫಮವಾರ ಬೆಳಗ್ಗೆಯೂ ದಕ್ಷಿಣ ಕನ್ನಡದ ಹಲವೆಡೆ ಮಳೆಯಾಗಿತ್ತು.

Heavy rain yellow alert announced ಎಲ್ಲೆಲ್ಲಿ ಮಳೆ

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ , ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮಳೆಯಾಗಲಿದೆ.

Heavy rain yellow alert announced ಎಲ್ಲೆಲ್ಲಿ ಯೆಲ್ಲೋ ಅಲರ್ಟ್?

ಮೇ 13 ರಿಂದ 19 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಮೇ 15ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಮೇ 15, 16, 18 ಮತ್ತು 19ರಂದು ಮಳೆಯ ಪ್ರಮಾಣ ಹೆಚ್ಚಿರಲಿದೆ. ಮೇ 14 ರಂದು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹಾಗೂ ಮೇ 15ರಂದು ವಿಜಯಪುರ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

Heavy rain yellow alert announced ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment