Hen goat training ಕೋಳಿ ಕುರಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ 2024

Written by Admin

Published on:

Spread the love

Hen goat training : ರೈತಾಪಿ ವರ್ಗದವರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲಾ ರೈತರಿಗೆ ಪಶುಪಾಲನಾ ಇಲಾಖೆಯ ವತಿಯಿಂದ ಪಶುಪಾಲನೆ ಕುರಿತು ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Hen goat training ಹೌದು, ಹಾಸನ ಜಿಲ್ಲೆಯ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜನವರಿ 6 ರಿಂದ 7 ರವರೆಗೆ ನೀಡಲಾಗುವುದು. ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಜನವರಿ 9 ರಿಂದ10ರವರೆಗೆ ನೀಡಲಾಗುವುದು.

ಜನವರಿ 13 ರಿಂದ 14 ರವರೆಗೆ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದು. ಜನವರಿ 20 ರಿಂದ 21 ರವರೆಗೆ ರೈತರಿಗೆ ಹಂದಿ ಸಾಕಾಣಿಕೆ ತರಬೇತಿನೀಡಲಾಗುವುದು.

Hen goat training ತರಬೇತಿಗೆ ಯಾವ ಯಾವ ದಾಖಲೆ ಬೇಕು?

ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್  ನೀಡಲಾಗುವುದಿಲ್ಲ. ಆಸಕ್ತಿಯುಳ್ಳವರು ಆಧಾರ್ ಕಾರ್ಡ್  ಝರಾಕ್ಸ್ ಪ್ರತಿಯೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಗ್ಗೆ 10.30 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಸಂತೇಪೇಟೆ, ಹಾಸನದಲ್ಲಿ ಹಾಜರಾಗಬೇಕು.

Hen goat training

ಹೆಚ್ಚಿನ ಮಾಹಿತಿಗಾಗಿ 08172 235226 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hen goat training and mobile repairing ಮೊಬೈಲ್ ರಿಪೇರಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 30 ದಿನಗಳ ಉಚಿತ ಮೊಬೈಲ್ ರಿಪೇರಿ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ Grahalakshmi 15th installment amount credit ಗೃಹಲಕ್ಷ್ಮೀ ಯೋಜನೆಯ 15ನೇ ಕಂತಿನ ಹಣ ಜಮೆ

ತರಬೇತಿ ಸಂದರ್ಭದಲ್ಲಿಉಚಿತ ಊಟ ಮತ್ತು ವಸತಿ ನೀಡಲಾಗುವುದು.  ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18 ರಿಂದ 45 ವಯೋಮಿತಿಯೊಳಗಿರುವ ಹಾಗೂ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಜನವರಿ 5 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 0816 2243386 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hen goat training and job for various post 255 ಸ್ವಯಂ ಸೇವಾ ಗೃಹ ರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಜಿಲ್ಲಾ ಗೃಹ ರಕ್ಷಕ ದಳದ ವಿವಿಧ ಘಟಕಗಳಲ್ಲಿ ಖಾಲಿಯಿರುವ 255 ಸ್ವಯಂ ಸೇವಾ ಗೃಹ ರಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಿಂದ ಡಿಸೆಂಬರ್ 27 ರೊಳಗಾಗಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜನವರಿ 2 ರೊಳಗಾಗಿ ಜಿಲ್ಲಾ ಗೃಹ ರಕ್ಷಕ ದಳ ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು.

ತುರ್ತು ಸಂದರ್ಭದಲ್ಲಿ ಕರ್ತವ್ಯ ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸಿದ ದಿನದಂದು ಗೌರವ ಧನ ಸೌಲಭ್ಯವನ್ನು ನೀಡಲಾಗುವುದು.

ಗೌರವಧನವನ್ನು ಬ್ಯಾಂಕ್ ಉಳಿತಾಯ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಅಭ್ಯರ್ಥಿಗಳು 19 ರಿಂದ 40 ವಯೋಮಾನದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ 10 ನೇ ತರಗತಿ ಅಂಕಪಟ್ಟಿ, ಜನ್ಮ ದಿನಾಂಕ ದೃಢೀಕರಣ (ಟಿ.ಸಿ) ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ವೋಟರ್ ಐಡಿ, ರೇಶನ್ ಕಾರ್ಡ್ , 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ದೈಹಿಕ ಸದೃಡತಾ ಪ್ರಮಾಣ ಪತ್ರ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 08162009116 ನ್ನು ಸಂಪರ್ಕಿಸಬಹುದು ಎಂದು ಗೃಹರಕ್ಷಕದಳದಜಿಲ್ಲಾಸಮಾದೇಸ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hen goat training ಕುರಿ, ಕೋಳಿ ತರಬೇತಿ ನಿಮ್ಮ ಜಿಲ್ಲೆಯಲ್ಲಿ ಯಾವಾಗ ನಡೆಯುತ್ತದೆ ಎಂಬುದನ್ನು ತಿಳಿಯಲು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು.

Leave a Comment