Hingaru bele parihara : ಹಿಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಅತೀ ಶೀಘ್ರದಲ್ಲಿ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.
ಹೌದು, ಹಿಂಗಾರು ಹಂಗಾಮಿನ ಅಕ್ಟೋಬರ್ ನಲ್ಲಿ ಈವರೆಗೆ ವಾಡಿಕೆಗಿಂತ ಶೇ 66 ರಷ್ಟು ಅಧಿಕ ಅತೀವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ. ಮೂರು ದಿನದಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಮೂರು ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಿ, 15 ದಿನದೊಳಗೆ ನೇರ ನಗದು ವರ್ಗ (ಡಿಬಿಟಿ) ಮೂಲಕ ರೈತರಿಗೆ ಪರಿಹಾರ ನೀಡುವುದಾಗಿ ಕಂದಾಯಸಚಿವ ಕೃಷಿಭೈರೇಗೌಡ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಸಂಗೇನಹಳ್ಳಿಯಲ್ಲಿ ಶುಕ್ರವಾರ ಕೆರೆಕೋಡಿ ವೀಕ್ಷಣೆ, ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮನೆ ಹಾನಿ, ಬೆಳೆ ಹಾನಿ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
Hingaru bele parihara ಹಿಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರ ಜಮೆ
ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 15 ದಿನಗಳೊಳಗೆ ಬೆಳೆ ಹಾನಿ ನೀಡಬೇಕು ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿಅತೀ ಹೆಚ್ಚು ಮಳೆಯಾಗಿದ್ದು, ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತಲೂ ಹೆಚ್ಚು ನಷ್ಟ ಆಗಿರುವ ನಿರೀಕ್ಷೆ ಇದೆ. ಮೂರು ದಿನದಲ್ಲಿ ಜಂಟಿ ಸಮೀಕ್ಷೆ ಮುಗಿಸಲಿದ್ದು, ಆಘ ಬೆಳೆ ನಷ್ಟದ ಬಗ್ಗೆ ನಿಖರ ಅಂಕಿ-ಅಂಶ ಮಾಹಿತಿ ಲಭ್ಯವಾಗಲಿದೆ. ಇದೇ ವಿಚಾರಕ್ಕೆ ಮುಖ್ಯಮಂತ್ರಿ ಜತೆ ಅತೀವೃಷ್ಟಿಗೆ ತುತ್ತಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅಕ್ಟೋಬರ್ 26 ರಂದು ವೀಡಿಯೋ ಕಾನ್ಫರೆನ್ಸ್ ಮಾಡಿ, ಮಳೆ ಹಾನಿ ಪರಿಶೀಲನೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
Hingaru bele parihara
ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 21 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ 9 ಜನ ಸಿಡಿಲುಬಡಿದು ಮೃತಪಟ್ಟಿದ್ದಾರೆ. 3 ರಿಂದ 4 ಜನ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿ ಈವರೆಗೆ 121 ಮಂದಿ ರಾಜ್ಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದಿವೆ. ಸಂತ್ರಸ್ತರಿಗೆ ಪರಿಹಾರದ ಜೊತೆ ಮನೆಗಳಲ್ಲೂ ನಿರ್ಮಿಸಿ ಕೊಡಲಾಗವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಸರ್ಕಾರಿ ಜಾಗದಲ್ಲಿ ಅನಿಧಕೃತವಾಗಿ ಕಟ್ಟಿದ ಮನೆಗಳುಬಿದ್ದು ಹೋಗಿದ್ದರೆ ಎಸ್.ಡಿ.ಆರ್.ಎಫ್ ಅಡಿಯಲ್ಲಿ 1ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಈಗಾಗಲೇ ಪರಿಹಾರ ನೀಡಿದ್ದು, ಕೆಲವೇ ದಿನಗಳಲ್ಲಿ ಮುಂಗಾರು ಬೆಳೆ ನಷ್ಟ ಪರಿಹಾರ ಪಾವತಿಯೂ ಪೂರ್ಣಗೊಳ್ಳಲಿದೆ.
ಹಿಂಗಾರು ಬೆಳೆ ನಷ್ಟದಸಮೀಕ್ಷೆ ಮುಗಿಸಿದ 15 ದಿನಗಳೊಳಗೆ ಬೆಳೆ ನಷ್ಟಕ್ಕೀಡಾದ ರೈತರ ಖಾತೆಗೆ ಪರಿಹಾರದ ಹಣ ಜಮೆ ಮಾಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : Ganga Kalyana subsidy facility ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವಲ್ ಕೊರೆಯಲು ಸಬ್ಸಿಡಿಗೆ ಅರ್ಜಿ ಆಹ್ವಾನ 2024
ಜೀವಹಾನಿ, ಬೆಳೆ ಹಾನಿ, ಮನೆಗಳು ಬಿದ್ದು ಹೋಗಿದ್ದರೆ ತಕ್ಷಣವೇ ಪರಿಹಾರ ನೀಡಲು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರ ಖಾತೆಗಳಲ್ಲಿ ಒಟ್ಟು 666 ಕೋಟಿಯಷ್ಟು ಹಣ ಲಭ್ಯವಿದೆ. ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇಲ್ಲ. ಕಷ್ಟದಲ್ಲಿ ಪರಿಹಾರ ನೀಡಿದಲ್ಲಿ ಸಂತ್ರಸ್ತರು, ರೈತರಿಗೆ ಉಪಯುಕ್ತವಾಗುತ್ತದೆ. ಈ ಹಿನ್ನೆಲೆಯಲ್ಲಿ ತ್ವರಿತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದ ಎಂದು ಮಾಹಿತಿ ನೀಡಿದರು.
Hingaru bele parihara ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲು ನಿಮ್ಮ ಹೆಸರಿಗೆ ಎಫ್ಐಡಿ ಇರುವುದು ಕಡ್ಡಾಯ
ರೈತರಿಗೆ ಬೆಳೆ ಹಾನಿ ಪರಿಹಾರ ಜಮೆಯಾಗಬೇಕಾದರೆ ಅವರ ಹೆಸರಿನಲ್ಲಿ ಫ್ರೂಟ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಅವರ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫಾರ್ಮರ್ಸ್ ಡಿಟೇಲ್ ಕೆಳಗಡೆ ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಫ್ರೂಟ್ಸ್ ಐಡಿ ನಂಬರ್ ಕಾಣಿಸುತ್ತದೆ.ಈ ಫ್ರೂಟ್ಸ್ ಐಡಿ ನಂಬರ್ ಸಹಾಯದಿಂದ ನೀವು ಸರ್ಕಾರಿ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆಯಬಹುದು.