Hotel subsidy ಹೋಟೆಲ್ ಖಾನಾವಳಿ ಆರಂಭಕ್ಕೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ 2024

Written by Admin

Updated on:

Spread the love

Hotel subsidy ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಆಸಕ್ತ ಫಲಾನುಭವಿಗಳಿಗೆ ಸಾಲ ಸೌಲಭ್ಯ ಹಾಗೂ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಖಾನಾವಳಿ ಆರಂಭಿಸಲು ಯಾರು ಯಾರಿಗೆ ಸಬ್ಸಿಡಿ ನೀಡಲಾಗುವುದು. ಅರ್ಜಿ ಎಲ್ಲಿ ಸಲ್ಲಿಸಬೇಕು?  ಎಷ್ಟು ಸಾಲ ಎಷ್ಟು ಸಬ್ಸಿಡಿ ನೀಡಲಾಗುವುದು? ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವುದು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Hotel subsidy ಭೋಜನಾಲಯ ಕೇಂದ್ರ ಆರಂಭ

ವೀರಶೈವ ಲಿಂಗಾಯತ ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು  ಸಾಲ ಮತ್ತು ಸಹಾಯಧನ ನೀಡಲಾಗುವದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂಪಾಯಿ 5 ಲಕ್ಷ ರೂಪಾಯಿ ಇರಲಿದೆ.ಇದರಲ್ಲಿ 4.60,000 ರೂಪಾಯಿ ಬ್ಯಾಂಕ್ ಸಾಲ ಪಡೆದಿದ್ದಲ್ಲಿ ಅದರಲ್ಲಿ ನಿಮಗೆ 40 ಸಾವಿರ ರೂಪಾಯಿ ಸಬ್ಸಿಡಿ ನೀಡಲಾಗುವುದು.ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20 * 30 ಅಳತೆಯುಳ್ಳ ನಿವೇಶನ ಹೊಂದಿರಬೇಕು.

Hotel subsidy ಯಾರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ?

ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ – III ಬಿ) ಅಭಿವೃದ್ಧಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.  ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

Hotel subsidy

Hotel subsidy ಸೌಲಭ್ಯ ಪಡೆಯಲು ಇರಬೇಕಾದ ಸೌಲಭ್ಯಗಳು

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.

ಇದನ್ನೂ ಓದಿ akarband ನಿಮ್ಮ ಜಮೀನಿನ ಆಕಾರಬಂದ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ 2024

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

Hotel subsidy ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.  ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ಇರಬೇಕು

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ  ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸಬಹುದು.

ವಿಭೂತಿ ನಿರ್ಮಾಣಕ್ಕೂ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ವೀರಶೈವ ಲಿಂಗಾಯತ ಸಮುದಾಯದವರು ವಿಭೀತಿಯನ್ನು ತಯಾರಿಸುವವರಿಗೆ ಸಾಲ ಮತ್ತುಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂಪಾಯಿ 3.50 ಲಕ್ಷ ರೂಪಾಯಿಗಳು ಇದೆ. 18 ರಿಂದ 55 ವಯೋಮಾನದವರು ಅರ್ಜಿ ಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂಪಾಯಿ 5 ಲಕ್ಷ ಇರಲಿದೆ. ಇದರಲ್ಲಿ 3,60,000 ನಿಗಮದಿಂದ ಸಾಲ ನೀಡಲಾಗುವುದು. ಇದರಲ್ಲಿ 40 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ವಾರ್ಷಿಕ ಶೇ. 3 ರ ಬಡ್ಡಿ ದರದಲ್ಲಿ ನೆರವು ನೀಡಲಾಗುವುದು.

ಆಸಕ್ತ ವೀರಶೈವ ಲಿಂಗಾಯ ಅಭಿವೃದ್ಧಿ ನಿಮಗದಡಿಯಲ್ಲಿ ಬರುವವರು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ.  ಇನ್ನೇಕ ತಡ ಅರ್ಜಿ ಸಲ್ಲಿಸಲು ಆಘಸ್ಟ್ 31 ಕೊನೆಯ ದಿನಾಂಕವಾಗಿದೆ. ಹಾಗಾಗಿ ಕೊನೆಯ ದಿನಾಂಕದವರೆಗೆ ಕಾಯದೆ ಈಗಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು.

Leave a Comment