How to use fertilizer ರೈತರಿಗೆ ಸಲಹೆಗಳು ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರವನ್ನು ಹೀಗೆ ಬಳಸಿ

Written by Admin

Published on:

Spread the love

How to use fertilizer : ತೊಗರಿ, ಹತ್ತಿ, ಹೆಸರು, ಉದ್ದು ಹಾಗೂ ಕಬ್ಬು ಬೆಳೆಗಳಿಗೆ ಶಿಫಾರಸ್ಸು ಮಾಡಿದ ಪೋಶಕಾಂಶಗಳನ್ನು ಗಮನಿಸಿದಾಗ ಸಮತೋಲನವಾದ ಸಾರಜನಕ, ರಂಜಕ ಹಾಗೂ ಪೋಟಾಷ ಪೋಷಕಾಂಶಗಳ ಜೊತೆಗೆ ಲಘು ಪೋಷಕಾಂಶಗಳಾದ ಜಿಂಕ್, ಬೋರಾನ್, ಕ್ಯಾಲ್ಸಿಯಂ ಹಾಗೂ ಮ್ಯಾಗ್ನೇಷಿಯಂ ಕೂಡ ಬಳಸುವ ಅವಶ್ಯಕತೆ ಇದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ ಅವರು ತಿಳಿಸಿದ್ದಾರೆ.

ಈಗಾಗಲೇ ಸುಮಾರು ವರ್ಷಗಳಿಂದ ಆಂP ರಸಗೊಬ್ಬರ ಬಳಸುತ್ತಿರುವುದರಿಂದ ಹೇರಳವಾಗಿ ರಂಜಕ ಪೋಷಕಾಂಶ ಭೂಮಿಯಲ್ಲಿ ಈIಘಿಇಆ ಈಔಖಒನಲ್ಲಿ ಇದ್ದು,  DAP ರಸಗೊಬ್ಬರ ಬದಲಾಗಿ ಸಂಯುಕ್ತ ರಸಗೊಬ್ಬರಗಳಾದ 20:20:0:13 ಹಾಗೂ 14:35:14 ಬಳಕೆ ಮಾಡಬಹುದಾಗಿದೆ. ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10, 15:15:15, 15:15:15:9(S) ಇತ್ಯಾದಿ ರಸಗೊಬ್ಬರಗಳನ್ನು ಬಳಸುವುದರಿಂದ ಭೂಮಿಗೆ ಸಮತೋಲನ ಪೋಶಕಾಂಶಗಳನ್ನು ನೀಡಿದಂತಾಗುತ್ತದೆ.

ತಾಂತ್ರಿಕವಾಗಿ ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ: ರಂಜಕ: ಪೊಟ್ಯಾಷ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಚವಾಗಿ ಸಾರಜನಕ ಹಾಗೂ ರಂಜಕ ಹೋಂದಿರುವ (DAP) ಹಾಗೂ  UREA ರಸಗೊಬ್ಬರವನ್ನು ಮಾತ್ರ ಬಳಸುತ್ತಿರುವ ಕಾರಣ ಸದರಿ ರಸಗೊಬ್ಬರಗಳ ಜಿಲ್ಲೆಯ ಅನುಪಾತವು 5.08:2.83:1 ಆಗಿರುತ್ತದೆ. ಇದನ್ನು ಸರಿಪಡಿಸಲು ಹಾಗೂ ಭೂಮಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲನಾತ್ಮ ಕರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಇದನ್ನೂ ಓದಿ : Gruhalakshmi helpline number ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವೇ ಇಲ್ಲಿ ನೀಡಲಾದ ನಂಬರಿಗೆ ಸಂಪರ್ಕಿಸಿ

DAP ರಸಗೊಬ್ಬರಕ್ಕೆ ಪರ್ಯಾಯವಾಗಿ ರೈತರು ತೊಗರಿ, ಉದ್ದು, ಹೆಸರು, ಹತ್ತಿ ಮತ್ತು ಕಬ್ಬು ಬೆಳೆಗೆ ಗಂಧಕ ಅಂಶ ಒದಗಿಸುವ ಸಂಯುಕ್ತ ರಸಗೊಬ್ಬರಗಳಾದ 20:20:0:13 ಹಾಗೂ ಸಮತೋಲನ ಪೋಷಕಾಂಶ ನೀಡುವ ಮತ್ತು ಭೂಮಿಯ ಆರೋಗ್ಯಕ್ಕೆ ಹಿತವಾದ ಸಂಯುಕ್ತಗೊಬ್ಬರಗಳಾದ 14:35:14, 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10, 15:15:15, 15:15:15:9(S) ಇತ್ಯಾದಿ ರಸಗೊಬ್ಬರಗಳನ್ನು ಬಳಸಬಹುದಾಗಿದೆ. ಇದರಿಂದ ಮಣ್ಣಿನ ಆರೋಗ್ಯದಲ್ಲಿ ಸ್ಮಧಾರಣೆ ಮತ್ತು ಬೆಳೆಗಳ ಆರೋಗ್ಯ ಕಾಪಾಡಲು ರೈತಬಾಂದವರು DAP ಮತ್ತು UREA ರಸಗೊಬ್ಬರಗಳ ಜೊತೆಗೆ ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಉತ್ತಮ ಇಳುವರಿ ಪಡೆಯಲು ಜೊತೆಗೆ ಭೂಮಿಯ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆಯರ ಖಾತೆಗೆ  ಜಮೆಯಾಯಿತು ಗೃಹಲಕ್ಷ್ಮೀ ಹಣ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್. ಹೌದು, ,  ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಯಾಗಿದೆ. ಯಾವ ಯಾವ ಮಹಿಳೆಯರ ಖಾತೆಗೆ ಜಮೆಯಾಗಿದೆ? ಯಾವ ಜಿಲ್ಲೆಯ ಮಹಿಳೆಯರಖಾತೆಗೆ ಹಣ ಜಮೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

ಮೂರು ಕಂತಿನ ಪೆಂಡಿಂಗ್ ಹಣವನ್ನು ಇದೇ ಮೇ ತಿಂಗಳಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಈಗಾಗಲೇಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದರು. ಮೇ ತಿಂಗಳ ಮೊದಲ ವಾರದಿಂದ ಜಮೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಎರಡು ವಾರ ತಡವಾದರೂ ಹಣ ಜಮೆಯಾಗಿದ್ದಕ್ಕೆ ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸೋಮವಾರ ಕಲಬುರಗಿ ಜಿಲ್ಲೆಯ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆ. ಅತೀ ಶೀಘ್ರದಲ್ಲಿ ಇತರ ಜಿಲ್ಲೆಯ ಮಹಿಳೆಯರ ಖಾತೆಗೂ ಹಣ ಜಮೆಯಾಗಲಿದೆ. ಹಾಗಾಗಿ ಮಹಿಳೆಯರು ಆತಂಕಪಡಬೇಕಿಲ್ಲ. ಅತೀ ಶೀಘ್ರದಲ್ಲಿಉಳಿದ ಕಂತಿನ ಹಣವೂ ಜಮೆಯಾಗಲಿದೆ.

ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಈಗ ಕೆಲವು ಕಾರಣಗಳಿಂದ ಪ್ರತಿ ತಿಂಗಳು ಜಮೆಯಾಗುತ್ತಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತಡವಾಗುತ್ತಿರುವ ಹಣವನ್ನು ಮೇ ತಿಂಗಳಿನಲ್ಲಿ  ಉಳಿದ ಮೂರು ಕಂತಿನ ಹಣವನ್ನು ಜಮೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

 ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ

ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ

DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

Leave a Comment