kharif Crop survey check in mobile : ಪ್ರಸಕ್ತ2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ವಿವರಗಳನ್ನು ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆಯಾಗಿದೆ.
ರೈತರು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಮತ್ತು ಯೋಜನೆಗಳ ಹಣವನ್ನು ಪಡೆಯಲು, ಬೆಳೆಯ ವಿವರಗಳನ್ನು ಈ ಆ್ಯಪ್ ಮೂಲಕ ದಾಖಲಿಸಬಹುದು. ರೈತರು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಬೆಳೆಯನ್ನು ದಾಖಲಿಸಿ ವಿವಿಧ ಸೌಲಭ್ಯಗಳು, ಯೋಜನೆಗಳ ಲಾಭವನ್ನು ಪಡೆಯಬಹುದು. ಆ್ಯಪ್ ಬಗ್ಗೆ ತಾಂತ್ರಿಕ ಮಾಹಿತಿಗಾಗಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
kharif Crop survey check in mobile ರೈತರು ನನ್ನ ಬೆಳೆ ನನ್ನ ಸಮೀಕ್ಷೆ ಧ್ಯೇಯದೊಂದಿಗೆ ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಬೆಳೆ ಸಮೀಕ್ಷೆ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಮಾಹಿತಿ.
ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಪರಿಹಾರ, ಬೆಳೆ ಸಾಲ ಹಾಗೂ ಬೆಂಬಲ ಬೆಲೆ ಯೋಜನೆ ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆ ಮಾಡಿಸಲು ಎಲ್ಲಿಯೂ ಹೋಗಬೇಕಿಲ್ಲ. ರೈತರೇ ಇಲ್ಲಿ ನೀಡಲಾದ ಮಾಹಿತಿಗಳ ಪ್ರಕಾರ ಸ್ಟೆಪ್ ಬೈ ಸ್ಟೆಪ್ ನೀವೇ ಸ್ವತಃ ಬೆಳೆ ಸಮೀಕ್ಷೆ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
kharif Crop survey check in mobile ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಹೇಗೆ ಮಾಡಬೇಕು? ಇಲ್ಲಿದೆ ಮಾಹಿತಿ
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಲು ಈ
https://play.google.com/store/apps/details?id=com.csk.farmer23_24.cropsurvey&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಮುಂಗಾರು ರೈತರ ಬೆಳೆ ಸಮೀಕ್ಷೆ 2024 ಆ್ಯಪ್ ಕಾಣಿಸುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.
ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ Agree ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ರೈತರ ಬೆಳೆ ಸಮೀಕ್ಷೆ 2024-25 ಕೆಳಗಡೆ ಋತು ಮುಂಗಾರು ಕಾಣಿಸುತ್ತದೆ. ಅದರ ಕೆಳಗಡ ನಿಮಗೆ ಬೆಳೆ ಸಮೀಕ್ಷೆಯಲ್ಲಿ ತೊಂದರೆಯಾದರೆ ಅಲ್ಲಿ ಕಾಣುವ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು. ರೈತರು ಬೆಳೆ ಸಮೀಕ್ಷೆಯ ಉಚಿತ ಸಹಾವಾಣಿ ನಂಬರ್ 18004253553 ಗೆ ಸಂಪರ್ಕಿಸಬಹುದು.
kharif Crop survey check in mobile ಬೆಳೆ ಸಮೀಕ್ಷೆ ಮಾಡುವಾಗ ಏನೇನು ಮಾಡಬೇಕು?
ಇಕೆವೈಸಿ ಮೂಲಕ ಆಧಾರ್ ದೃಢೀಕರಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳು ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಪಡೆಯಿರಿ / Generate OTP ಮೇಲೆ ಕ್ಲಿಕ್ಮಾಡಬೇಕು.
ಇದನ್ನೂ ಓದಿ : land mutation ಸರ್ವೆ ನಂಬರ್ ಹಾಕಿ ಜಮೀನಿನ ಮುಟೇಶನ್ ಚೆಕ್ ಮಾಡಿ 2024
ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ಪೇಸ್ಟ್ ಮಾಡಿ ಸೆಂಡ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಮೊಬೈಲಿಗೆ ಓಟಿಪಿ ಬರದಿದ್ದರೆ Face Capture ಮೇಲೆ ಕ್ಲಿಕ್ ಮಾಡಿ ನಿಮ್ಮ ಫೋಟೋದೊಂದಿಗೆ ಬೆಳೆ ಸಮೀಕ್ಷೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.ಇನ್ನೂ ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು.