Krishi Bhagya yojane subsidy ಯನ್ನು ಮತ್ತೇ ಜಾರಿ ಮಾಡಲು ಈಗಾಗಲೇ ಕರ್ನಾಟಕದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣದಲ್ಲಿ ನೀಡಿದ ಭರವಸೆಯಂತೆ ಕೃಷಿ ಭಾಗ್ಯ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಅವರು ಸಚಿವ ಸಂಪುಟ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯವರು ಈ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಕೃಷಿ ಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದರು. ಆದರೆ ನಂತರ ಬಂದ ಸರ್ಕಾರಗಳು ಈ ಯೋಜನೆಯನ್ನು ಕೈಬಿಟ್ಟಿದ್ದವು. ಇದರಿಂದಾಗಿ ರಾಜ್ಯದ ರೈತರಿಗೆ ಕೃಷಿ ಭಾಗ್ಯ ಯೋಜನೆಯ ಯ ಲಾಭ ಸಿಗುತ್ತಿರಲಿಲ್ಲ. ಇದರಿಂದಾಗಿ ರೈತರು ನಿರಾಶೆಗೊಂಡಿದ್ದರು. ರೈತರ ಅಭಿವೃದ್ಧಿಗಾಗಿ ಮತ್ತೆ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
2023-24ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಮಳೆ ಆಧಾರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ಮಾರ್ಪಡಿಸುವುದು ಯೋಜನೆಯ ಉದ್ದೇಶವಾಗಿದೆ. ಮಳೆ ನೀರಿನ ಸಮರ್ಪಕ ಸಂಗ್ರಹಣೆ ಹಾಗೂ ಉಪಯುಕ್ತಬಳಕೆ ಮೂಲಕ ಉತ್ಪಾದಕತೆ ವೃದ್ಧಿಸಲಾಗುವುದು. ಕೃಷಿ ಆದಾಯ ಹೆಚ್ಚಳ ಹಾಗೂ ಮಳೆ ನೀರು ವ್ಯರ್ಥವಾಗದಂತೆ ಆಯ್ದ ಸ್ಥಳಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಪ್ರಮುಖ ಅಂಶವಾಗಿದೆ ಎಂದು ಹೇಳಿದರು.
ಇದನ್ನೂ ಓದಿ : Baragala parihara hana bidugade 2023-24 ನಿಮಗೆಷ್ಟು ಜಮೆ? ಚೆಕ್ ಮಾಡಿ
ಕೃಷಿ ಭಾಗ್ಯ ಯೋಜನೆ ಪ್ರಸಕ್ತ ವರ್ಷ 200 ಕೋಟಿ ಅನುದಾನ ನೀಡಲಾಗುವುದು. ಪೂರಕ ಅಂದಾಜಿನಲ್ಲಿ100 ಕೋಟಿ ಒದಗಿಸಲಾಗಿದೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯಿಂದ ಉಳಿದ100 ಕೋಟಿ ಪಡೆಯಲಾಗುವುದು. ಮಳೆಯಾಶ್ರಿತ ಪ್ರದೇಶಗಳಲ್ಲಿಈ ಯೋಜನೆ ಜಾರಿ ಮಾಡಲಾಗುವುದು. ಇದಕ್ಕಾಗಿ 5 ಒಣ ಹವೆ ಹವಾಮಾನದ ಜಿಲ್ಲೆಗಳನ್ನೇ ಆಯ್ಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
Krishi Bhagya yojane ಯ ಉದ್ದೇಶ
ಮಳೆ ನೀರಿನ ಸಂಗ್ರಹ ಸಮರ್ಪಕವಾಗಿ ಮಾಡುವುದು. ಶೇಖರಣೆಯಾದ ನೀರನ್ನು ಉಪಯುಕ್ತವಾಗಿ ಬಳಕೆ ಮಾಡಿ ಕೃಷಿ ಉತ್ಪಾದಕೆಯನ್ನು ಉತ್ತಮ ಪಡಿಸಿ ಆದಾಯ ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜನ ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
Krishi Bhagya yojane subsidyಯಡಿ ರೈತರಿಗೆ ಏನೇನು ನೀಡಲಾಗುವುದು?
ಮಳೆ ನೀರಿನ ಸಮರ್ಥ ಬಳಕೆ ಮತ್ತು ಸಂರಕ್ಷಿತ ನೀರಾವರಿಗೆ ತನ್ಮೂಲಕ ಸುಧಾರಿತ ಬೆಳೆ ಉತ್ಪಾದನಾ ಪದ್ದತಿ ಅಳವಡಿಸಲು ರೈತರನ್ನು ಪ್ರೋತ್ಸಾಹಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಪ್ಯಾಕೇಜ್ ರೂಪದಲ್ಲಿ ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಪಂಪ್ ಸೆಟ್, ಲಘು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲು ನೆರಳು ಪರದೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.
Krishi Bhagya yojane Subsidy ಗಳ ಮಾಹಿತಿ
ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ಇತರ ಘಟಕಗಳ ಅನುಷ್ಠಾನಕ್ಕೆ ಸಬ್ಸಿಡಿ ನೀಡಲಾಗುವುದು. ಹೌದು, ಕೃಷಿ ಹೊಂಡ ನಿರ್ಮಾಣಕ್ಕೆ ಸಾಮಾನ್ಯ ಜನರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು.
ಇದನ್ನೂ ಓದಿ : Crop loan waive money: ಸಾಲ ಮನ್ನಾ ಹಣ ಬಿಡುಗಡೆ 2024
ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ / ಪರ್ಯಾ ಮಾದರಿಗಳಿಗೆ ಗರಿಷ್ಠ 50 ಸಾವಿರರೂಪಾಯಿ ನೀಡಲಾಗುವುದು. ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ ಸೆಟ್ 3 ರಿಂದ 5 ಹೆಚ್ ಪಿ ಗೆ ಸಾಮಾನ್ಯ ಜನರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ. ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ (ತುಂತುರು ಅಥವಾ ಹನಿ ನೀರಾವರಿ)ಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಕೃಷಿ ಹೊಂಡದಸುತತ್ಲೂ ನೆರಳು ಪರದೆ ನಿರ್ಮಿಸಲು ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
Krishi Bhagya yojane subsidyಗೆ ಯಾರು ಅರ್ಜಿ ಸಲ್ಲಿಸಬಹುದು?
ಕೃಷಿ ಭಾಗ್ಯ ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗುವುದು. ಕೃಷಿ ಭಾಗ್ಯ ಯೋಜನೆಯಡಿ ಸವಲತ್ತು ಪಡೆದಿರುವ ರೈತರು ಹಾಗೂ ನರೇಗಾ ಯೋಜನೆಯಡಿ ಸವಲತ್ತು ಪಡೆದಿರುವ ರೈತರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತ ಬಾಂಧವರು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹಬುದು.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?
ಕೃಷಿ ಭಾಗ್ಯ ಯೋಜನೆ ಯಡಿಯಲ್ಲಿ ಸೌಲಭ್ಯ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ರೈತರ ಎಫ್ಐಡಿ ಇರುವುದು ಕಡ್ಡಾಯವಾಗಿದೆ. ಇದರೊಂದಿಗೆ ಇತ್ತೀಚನ ಭಾವಚಿತ್ರಇರಬೇಕು. ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು.
ಕೃಷಿ ಹೊಂಡ ಕುರಿತಂತೆ ಹಾಗೂ ಸಬ್ಸಿಡಿಗಳ ಕುರಿತು ಹೆಚ್ಚಿನ ಮಾಹಿತಿಗೆ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಲು ಕೋರಲಾಗಿದೆ.