Krishi Sinchayi scheme subsidy ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಗೆ ಶೇ.90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Admin

Published on:

Spread the love

Krishi Sinchayi scheme subsidy : ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ರೈತರು ಹನಿ ನೀರಾವರಿ ಸೌಲಭ್ಯ ಒದಗಿಸಿಕೊಳ್ಳಲು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಹನಿ ನೀರಾವರಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಅರ್ಜಿ ಎಲ್ಲಿ ಸಲ್ಲಿಸಬೇಕು ಇದಕ್ಕೆ ಬೇಕಾಗುವ ದಾಖಲೆಗಳು ಏನೇನು ಎಂಬುದು ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ರಾಜ್ಯದ 31 ಜಿಲ್ಲೆಗಳಲ್ಲಿ ತೋಟಗಾರಿಕೆ ಬೆಳೆಗಳಿಗೆ ಈ ಸೌಲಭ್ಯ ಲಭ್ಯವಿದೆ ಗರಿಷ್ಠ 5 ಹೆಕ್ಟೇರ್ ವರೆಗೆ ಅನ್ವಯಿಸುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಪ್ರೋತ್ಸಾಹ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ತೋಟಗಾರಿಕೆ ಇಲಾಖೆಯಿಂದ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕಿನಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ( ಹನಿ ನೀರಾವರಿ ) ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಸಹಾಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅವರ ಕಚೇರಿಗೆ ಸಂಪರ್ಕಿಸಲು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Krishi Sinchayi scheme subsidy ರೈತರಿಗೆ ಎಷ್ಟು ಸಬ್ಸಿಡಿ ಸಿಗಲಿದೆ

ಹನಿ ನೀರಾವರಿ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಶೇ. 90 ರವರೆಗೆ (ಇತರರಿಗೆ ಶೇ. 45 ರಿಂದ 55 ರವರೆಗೆ) ಸಹಾಯಧನ ನೀಡಲಾಗುವುದು.

Krishi Sinchayi scheme subsidy ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು

ರೈತರ ಹೆಸರಿನಲ್ಲಿ ರೈತರು ಜಮೀನು ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಯ ರೈತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ  ಆರ್.ಡಿ. ಸಂಖ್ಯೆ ಹೊಂದಿರುವ  ಜಾತಿ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಇರಬೇಕು. ಇತ್ತೀಚಿನ ಫೋಟೋ ಇರಬೇಕು, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಅಕೌಂಟ್ ಚಾಲ್ತಿಯಲ್ಲಿರಬೇಕು. ಫ್ರೂಟ್ಸ್ ಐಡಿ ಹೊಂದಿರಬೇಕು. ಫಲಾನುಭವಿಗಳು ರೈತರಾಗಿದ್ದು, ಜಮೀನು ಅವರ ಹೆಸರಿನಲ್ಲಿರಬೇಕು. ಜಂಟಿ ಖಾತೆಯಲ್ಲಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ತರ ಪಡೆದಿರಬೇಕು.

ರೈತರು ಅರ್ಜಿಯನ್ನು ಸಲ್ಲಿಸಿ ಅದು ಅನುಮೋದನೆಯಾದ ನಂತರ ರೈತರು ತೋಟಗಾರಿಕೆ ಇಲಾಖೆ ವತಿಯಿಂದ ಅನುಮೋದನೆಗೊಂಡ ಕಂಪನಿ ಅಥವಾ ಡೀಲರ್ ಅವರಿಂದ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬಹುದು.

Krishi Sinchayi scheme subsidy ಎರಡು ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಬ್ಸಿಡಿ 5 ಹೆಕ್ಟೇರ್ ವರೆಗೆ ಶೇ. 45 ರಷ್ಟು ಸಬ್ಸಿಡಿ ನೀಡಲಾಗುವುದು. ಎಸ್.ಸಿ ಎಸ್ ಟಿ ವರ್ಗದವರಿಗೆ ಶೇ. 90 ರಷ್ಟು ಸಬ್ಸಿಡಿ ಇತರ ವರ್ಗದವರಿಗೆ ಶೇ. 75 ರಷ್ಟು ಸಬ್ಸಿಡಿ ನೀಡಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ತಾಲೂಕು ತೋಟಗಾರಿಕೆ ಇಲಾಖೆ ಅಥವಾ ಹೋಬಳಿ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇಧದ್ಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ Bara parihara 1st installment released ಬರ ಪರಿಹಾರ ಮೊದಲ ಕಂತಿನ ಹಣ 2500 ರೈತರ ಖಾತೆಗೆ ಜಮೆ ಇಲ್ಲೇ ಚೆಕ್ ಮಾಡಿ

ಮಳೆಗಾಲದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಬರಗಾಲದಲ್ಲಿ ಉಪಯೋಗಿಸುವುದು. ಯೋಜನೆಗಳು ಕಾಲಕಾಲಕ್ಕೆ ಬದಲಾಗುವುದು. ಆದ್ದರಿಂದ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಿ ನಿಖರ ಮಾಹಿತಿ ಪಡೆಯಬಹುದು.

Leave a Comment