Krishimela three days : ವಿಜಯಪುರ ನಗರದ ಹೊರವಲಯದಲ್ಲಿರುವ ಹಿಟ್ನಳ್ಳಿ ಫಾರ್ಮ್ ನಲ್ಲಿ ಕೃಷಿ ವಿಶ್ವವಿದ್ಯಾಲಯ ಆವರಣ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ 11 ರಿಂದ 13 ರವರೆಗೆ ಬೃಹತ್ ಕೃಷಿಮೇಳ ಆಯೋಜಿಸಲಾಗಿದೆ.
Krishimela three days ದಲ್ಲಿ ಏನೇನಿರಲಿದೆ?
ಆಧುನಿಕ ಕೃಷಿ ತಂತ್ರಜ್ಞಾನ ಮಾಹಿತಿಯ ಜೊತೆಗೆ ಬೃಹತ್ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ರೈತರಿಗೆ ಆಧುನಿಕ ಬೇಸಾಯ ಕ್ರಮಗಳ ಕುರಿತಂತೆ ಕಾಲ ಕಾಲಕ್ಕೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಆಗುತ್ತಿರುವ ನಿರಂತರ ಸಂಶೋಧನೆಗಳ ಫಲಿತಾಂಶಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳಗಳಂತಹ ಬೃಹತ್ ವಿಸ್ತರಣಾ ಕಾರ್ಯಕ್ರಮಗಳು ಬಹಳ ಮಹತ್ವವನ್ನುಪಡೆದಿವೆ. ರೈತರಿಗೆ ಆಶಾಕಿರಣವಾಗಿರುವ ಈ ಸಲದ ಕೃಷಿ ಮೇಳದ ಸಮಿತಿ ಅಧ್ಯಕ್ಷ ಹಾಗೂ ಡೀನ್ ಡಾ ಅಶೋಕ ಸಜ್ಜನ, ಸಹ ಸಂಶೋಧನಾ ನಿರ್ದೇಶಕಡಾ. ಎಸ್.ಬಿ. ಜಗ್ಗಿನವರ, ಜಂಟಿ ಕೃಷಿ ನಿರ್ದೇಶಕಿ ಡಾ. ರೂಪಾ ಎಲ್. ಸಹ ವಿಸ್ತರಣಾ ನಿರ್ದೇಶಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಆರ್.ಬಿ. ಬೆಳ್ಳಿ ಕೋರಿದ್ದಾರೆ.
Krishimela three days ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ
ಕಾರವಾರ ಜಿಲ್ಲೆಯ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ 5 ವಾರದ ಕೋಳಿ ಮರಿಗಳನ್ನುಉತ್ಪಾದಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತ ಮಹಿಳೆಯರು ಜನವರಿ 8 ರೊಳಗೆ ಪಶುಪಾಲನಾ ಇಲಾಖೆಯ ಆಯಾ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗೆ (ಆಡಳಿತ) ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗೆ ಆಯಾ ತಾಲೂಕು ಆಸ್ಪತ್ರೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Krishimela three days ಕುರಿ ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
: ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರ್ ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ Gruhalakshmi helpline ಗೃಹಲಕ್ಷ್ಮೀ ಹಣ ನಿಮಗೆ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ 2024
ಜನವರಿ 16 ರಿಂದ 25 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 13 ಕೊನೆಯ ದಿನವಾಗಿದೆ. ಜನವರಿ 21 ರಿಂದ 30 ರವರೆಗೆ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 19 ಕೊನೆಯ ದಿನವಾಗಿದೆ
Krishimela three days ತರಬೇತಿಗೆ ಯಾವ ದಾಖಲೆ ಸಲ್ಲಿಸಬೇಕು?
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತಿದೆ. ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್ ಅಂತ್ಯೋದಯ, ರೇಶನ್ ಎಮ್.ಜಿ. ಎನ್.ಆರ್. ಇ.ಜಿ.ಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಕೊನಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕಚೇರಿಯನ್ನು ಪ್ರತಿದಿನ ಬೆಳಗ್ಗೆ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಸಂಪರ್ಕಿಸಲು ಹಾಗೂ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585,9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
Krishimela three days ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಮತ್ತು ಫೆಬ್ರವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೊಲಿಗೆ) ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು ವಿಳಾಸಗಳನ್ನು ನೋಂದಾಯಿಸಲು ಜನವರಿ 10 ಕೊನೆಯ ದಿನವಾಗಿದೆ. ಮೊದಲು ಬಂದವರಿಗೆಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯಸಾಫ್ಟ್ ಸ್ಕಿಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರ ಯೋಜನೆಗಳು ಮತ್ತುಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ಉಚಿತವಾಗಿ ನೀಡಲಾಗುವುದು.
ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ದೂರವಾಣಿ ಸಂಖ್ಯೆ 8970145354,9483485489, 9482188780 ಗೆ ಸಂಪರ್ಕಿಸಬಹುದು.