Land Old Pahani ನಿಮ್ಮ ಜಮೀನಿನ 20 ವರ್ಷ ಹಳೆಯ ಪಹಣಿ ಮೊಬೈಲ್ ನಲ್ಲೇ ಚೆಕ್ ಮಾಡಿ

Written by Admin

Published on:

Spread the love

Land Old Pahani  ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ 20 ವರ್ಷ ಹಳೆಯ ಪಹಣಿಗಳನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಹಳೆಯ ಪಹಣಿ ಎಲ್ಲಿ ಸಿಗುತ್ತವೆ? ಹಳೆ ಪಹಣಿ ನೋಡಲು ರೈತರು ಯಾವುದಾದರೂ ದಾಖಲೆ ಸಲ್ಲಿಸಬೇಕಾ? ಇಲ್ಲ, ಯಾವುದೇ ದಾಖಲೆಯಿಲ್ಲದೆ ಕೇವಲ ನಿಮ್ಮ ಸರ್ವೆ ನಂಬರ್ ನಮೂದಿಸಿ ನಿಮ್ಮ ಹಳೆಯ ಪಹಣಿಗಳನ್ನು ಮೊಬೈಲ್ ನಲ್ಲೇ ನೋಡಬಹುದು ಹಾಗೂ, ಡೌನ್ಲೋಡ್ ಸಹ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Land old pahani

Land Old Pahani  20 ವರ್ಷ ಹಳೆಯ ಪಹಣಿ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ರೈತರು 20 ವರ್ಷಕ್ಕೂ ಹೆಚ್ಚಿನ ಹಳೆಯ ಪಹಣಿಯನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/Service2/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಕಂದಾಯ ಇಲಾಖೆಯ ಭೂಮಿ ಆನ್ಲೈನ್ ಲ್ಯಾಂಡ್ ರಿಕಾರ್ಡ್ ಪೇಜ್ ಕಾಣಿಸುತ್ತದೆ. ಅಲ್ಲಿ ನಿಮಗೆ current year, Old year, MR, Mutation Status, Khata Extract, Survey Document ಹಾಗೂ akarband ಹೀಗೆ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Old Year ಮೇಲೆ ಕ್ಲಿಕ್ ಮಾಡಬೇಕು.

Land Old Pahani ಹಳೆಯ ಪಹಣಿ ಚೆಕ್ ಮಾಡಲು ಏನು ಮಾಡಬೇಕು?

ಹಳೆಯ ಪಹಣಿ ಚೆಕ್ ಮಾಡಲು Old Yearಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಹಳೆಯ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಆ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ Go  ಮೇಲೆ ಕ್ಲಿಕ್ ಮಾಡಬೇಕು. ಸರ್ನೋಕ್ ನಲ್ಲಿ ಸ್ಟಾರ್ * ಆಯ್ಕೆ ಮಾಡಿಕೊಳ್ಳಬೇಕು. ಹಿಸ್ಸಾ ನಂಬರ್ ನಲ್ಲಿ ನಿಮ್ಮ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಿಮಗೆ ಹಿಸ್ಸಾ ನಂಬರ್ ಗೊತ್ತಿಲ್ಲದಿದ್ದರೆ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Period ನಲ್ಲಿ ನೀವು ಯಾವ ವರ್ಷದಿಂದ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಅದನ್ನುಆಯ್ಕೆ ಮಾಡಿಕೊಳ್ಳಬೇಕು. ನಂತರ  Year ನಲ್ಲಿಯೂ ಯಾವ ವರ್ಷದಿಂದ  ಹಳೆಯ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ Fetch details ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ FRUITS ID : ರೈತರ ಹೆಸರಿಗೆ ಫ್ರೂಟ್ಸ್ ಇದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ 2024

ಆಗ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಯಾವ ಯಾವ ಜಮೀನಿನ ಮಾಲಿಕರು ಇದ್ದಾರೆ ಅವರ ಹೆಸರು ಕಾಣಿಸುತ್ತದೆ. ಅದರ ಎದುರುಗಡೆ ಖಾತಾ ನಂಬರ್ ಸಹ ಇರುತ್ತದೆ.  ಅದರ ಮುಂದುಗಡೆ  View ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅದೇ ನಿಮ್ಮ ಪಹಣಿ ಆಗಿರುತ್ತದೆ.

farmers crop
Farmer Crop growing

ಆ ಪಹಣಿಯಲ್ಲಿ ನಿಮ್ಮ ಸರ್ವೆ ನಂಬರ್, ನಿಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ? ಜಮೀನಿನ ಮಾಲಿಕರ ಹೆಸರು ತಂದೆಯ ಹೆಸರು, ಮುಟೇಶನ್ ನಂಬರ್ ಸಹ ಕಾಣಿಸುತ್ತದೆ. ಆ ಪಹಣಿ ನೀವು ಆಯ್ಕೆ ಮಾಡಿದ ವರ್ಷದಿಂದ ಇಲ್ಲಿಯವರೆಗೆ ಯಾರ ಹೆಸರಿಗೆ ಇದೆ ಎಂಬ ಮಾಹಿತಿ ಕಾಣಿಸುತ್ತದೆ.  ಅದರ ಕೆಳಗಡೆ ಮುಂಗಾರು ಹಂಗಾಮಿಗೆ ಯಾವಬೆಳೆ ಬಿತ್ತಲಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ರೈತರ ಜಮೀನಿಗೆ ಸಂಬಂಧಿಸಿದ ಅತೀ ಮಹತ್ವದ ದಾಖಲೆಗಳಲ್ಲಿ ಪಹಣಿಯೂ ಒಂದಾಗಿದೆ. ಇದರಲ್ಲಿ ನಿಮ್ಮ ಹೆಸರು, ತಂದೆಯ ಹೆಸರು ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಂತೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ನಿಮ್ಮ ಜಮೀನಿನಲ್ಲಿ ಏನೈದರೂ ಬದಲಾವಣೆಯಾದರೂ ನಿಮ್ಮ ಪಹಣಿಯಲ್ಲಿ ಗೊತ್ತಾಗುತ್ತದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ರೈತರಿಗೆ ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಭೂಮಿ ಆ್ಯಪ್ ಅಭಿವೃದ್ಧಿಪಡಿಸಿದೆ.

Leave a Comment