Mobile canteen subsidy get : 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ವಯೋಮಿತಿ 20 ರಿಂದ 55 ವರ್ಷದೊಳಗಿರಬೇಕು. 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ 2 ಲಕ್ಷ ರೂ.ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ 1.50 ಲಕ್ಷ ರೂ.ಮೀರಬಾರದು. ಕಲಬುರಗಿ ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಈಗಾಗಲೇ ಫೆಬ್ರವರಿ 23 ರಿಂದ ಅರ್ಜಿ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿಮಾಡಿ ಅರ್ಜಿಯೊಂದಿಗೆ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದಿರುವ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯದ ಪ್ರಮಾಣಪತ್ರ, ಚಾಲ್ತಿಯಲ್ಲಿರುವ ಖಾಯಂ ಲಘು ವಾಹನ ಚಾಲನಾ ಪರವಾನಗಿ (License) ಪತ್ರ, ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ ಹಾಗೂ ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ / ನಿಗಮ / ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ Mobile canteen subsidy get ಪ್ರಮಾಣಿಕರಿಸಿ, 100 ರೂಪಾಯಿ ಬೆಲೆಯ ಛಾಪಾ ಕಾಗದ (Affidavit) ದಲ್ಲಿ ನಮೂನೆ-3 ಪ್ರಮಾಣಪತ್ರ, ಅರ್ಜಿದಾರನು ಖಾತೆ ಹೊಂದಿರುವ ಬ್ಯಾಂಕ್ ನಿಂದ ಸಾಲ ಮಂಜೂರಾತಿ ದೃಢೀಕರಣ ಪತ್ರ ಪಡೆದು ಜೆರಾಕ್ಸ್ ಪ್ರತಿ ಹಾಗೂ ಅರ್ಜಿದಾರನ ವಾಸಸ್ಥಳ ಪ್ರಮಾಣಪತ್ರದ ಜೆರಾಕ್ಸ್ ಪ್ರತಿ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ದ್ವಪ್ರತಿಯಲ್ಲಿ 2026ರ ಮಾರ್ಚ್ 13 ರೊಳಗಾಗಿ ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Mobile canteen subsidy get ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ?
ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿರಬೇಕು. ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಗ್ರಾಮೀಣ ಪ್ರದೇಶದ ಅಭ್ಯ್ರಥಿಗಳು ವಾರ್ಶಿಕ ಆದಾಯ 1.50 ಲಕ್ಷದ ಒಳಗಿರಬೇಕು. ನಗರ ಪ್ರದೇಶದ ಅಭ್ಯರ್ಥಿಗಳ ಕುಟುಂಬದ ವಾರ್ಶಿಕ 2 ಲಕ್ಷ ರೂಪಾಯಿಯೊಳಗೆ ಇರಬೇಕು. ಈ ಹಿಂದೆ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಪಡೆದಿರಬಾರದು. ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಬಳಿ ಆಧಾರ್ ಕಾರ್ಡ್ ಇರಲೇಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಬ್ಯಾಂಕ್ ಖಾತೆ ಆಧಾರ್ ಕಾರ್ಡಿಗೆ ಲಿಂಕ್ ಆಗಿರಬೇಕು.
ಇದನ್ನೂ ಓದಿ Bele hani parihara jama 3 ಲಕ್ಷ ರೈತರಿಗೆ ಒಟ್ಟು 250 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಜಮೆ
Mobile canteen subsidy get ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಬ್ಸಿಡಿ ಹಣ ನೀಡವುದರೊಂದಿಗೆ ಅವರಿಗೆ ಸೂಕ್ತ ತರಬೇತಿಯನ್ನು ಸಹ ನೀಡಲಾಗುವುದು. ಹೌದು, ಫಲಾನುಭವಿಗಳಿಗೆ ಆರು ತಿಂಗಳವರೆಗೆ ತರಬೇತಿ ನೀಡಲಾಗೂವುದು. ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಸಹ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಖರೀದಿಸಲು ಘಟಕದ ವೆಚ್ಚ ಖರೀದಿಗೆ ಶೇ. 70 ರಷ್ಟು ಅಂದರೆ, 5 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.





