Original Land Tippani: ರೈತರು ತಮ್ಮ ಜಮೀನಿನ ಓರಿಜನಲ್ ಮೂಲ ಸರ್ವೆ ಟಿಪ್ಪಣಿ ಪುಸ್ತಕವನ್ನು ಮೊಬೈಲ ನಲ್ಲೇ ಪಡೆಯಬಹುದು.
ಜಮೀನಿನ ಪಹಣಿ (ಆರ್.ಟಿ.ಸಿ), ಆಕಾರಬಂದ್ ನಂತೆ ಈಗ ರೈತರು ಮೂಲ ಸರ್ವೆ ಟಿಪ್ಪಣಿ ಪುಸ್ತಕವನ್ನು ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಏನಿದು ಮೂಲ ಸರ್ವೆ ಟಿಪ್ಪಣಿ ಪುಸ್ತಕ? ಟಿಪ್ಪಣಿ ಪುಸ್ತಕ ಎಲ್ಲಿ ಸಿಗುತ್ತದೆ? ಮೊಬೈಲ್ ನಲ್ಲಿ ಹೇಗೆ ಪಡೆಯಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Original Land Tippani ಮೂಲ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲಿ ಪಡೆಯುವುದು ಹೇಗೆ?
ರೈತರು ತಮ್ಮ ಜಮೀನಿನ ಮೂಲ ಓರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಪಡೆಯಲು ಈ
https://bhoomojini.karnataka.gov.in/Service35/Dashboard.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕಂದಾಯ ಇಲಾಖೆಯ ಸರ್ವೆ ಡಾಕುಮೆಂಟ್ಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನೋಕ್ ಸ್ಟಾರ್ (*) ಹಿಸ್ಸಾ ನಂಬರ್ ನಲ್ಲಿ ಸ್ಟಾರ್ (*) ಆಯ್ಕೆ ಮಾಡಿಕೊಳ್ಳಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು.
ಆಗ ನೀವು ನಮೂದಿಸಿದ ಸರ್ವೆ ನಂಬರ್ ಕಾಣಿಸುತ್ತದೆ. ಅಧರ ಮುಂದೆ ಮೂಲ ಸರ್ವೆ ಟಿಪ್ಪಣಿ ಪುಸ್ತಕ ಅದರ ಮುಂದುಗಡೆ ಎಷ್ಟು ಪೇಜ್ ಇದೆ. ಅದರ ಮುಂದುಗಡೆ View Document ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
Original Land Tippani ಮೂಲ ಸರ್ವೆ ಟಿಪ್ಪಣಿ ಪುಸ್ತಕದಲ್ಲಿ ಏನೇನು ಮಾಹಿತಿ ಇದೆ?
ಆಗ ಇನ್ನೊಂದು ಪೇಜ್ ಕಾಣಿಸುತ್ತದೆ. ಅದೇ ನಿಮ್ಮ ಜಮೀನಿನ ಮೂಲ ಸರ್ವೆ ಟಿಪ್ಪಣಿ ಪುಸ್ತಕ. ಇದು ನಿಮ್ಮ ಜಮೀನಿನ ಓರಿಜಿನಲ್ ಮೂಲ ಸರ್ವೆ ಟಿಪ್ಪಣಿ ಪುಸ್ತಕ ಆಗಿರುತ್ತದೆ. ಅಲ್ಲಿ ನೀವು ನಮೂದಿಸಿ ಸರ್ವೆ ನಂಬರ್ ಕಾಣಿಸುತ್ತದೆ. ಅದರ ಅಕ್ಕ ಪಕ್ಕದಲ್ಲಿ ಯಾವ ಯಾವ ಸರ್ವೆ ನಂಬರ್ ಗಳು ಇವೆ ಎಂಬ ಮ್ಯಾಪ್ ಕಾಣಿಸುತ್ತದೆ.
ಇದನ್ನೂ ಓದಿ : FRUITS ID : ರೈತರ ಹೆಸರಿಗೆ ಫ್ರೂಟ್ಸ್ ಇದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ 2024
ನಿಮ್ಮ ಜಮೀನಿನ ಮೂಲ ಸರ್ವೆ ಟಿಪ್ಪಣಿ ಪುಸ್ತಕ ನಿಮಗೆ ಬೇಕಾದರೆ ನಿಮ್ಮ ಹತ್ತಿರದ ಕಂದಾಯ ಇಲಾಖೆಯಲ್ಲಿ ನಿಗದಿತ ಶುಲ್ಕ ಪಾವತಿಸಿ ಪಡೆದುಕೊಳ್ಳಬಹುದು. ಈಗ ತಂತ್ರಜ್ಞಾನ ಬೆಳೆದಂತೆ ರೈತರು ತಮ್ಮ ದಾಖಲೆಗಳನ್ನು ಮೊಬೈಲ್ ನಲ್ಲೇ ಪಡೆದುಕೊಳ್ಳಬಹುದು.
ರೈತರ ಜಮೀನಿನ ದಾಖಲೆಗಳನ್ನು ಈಗ ಪಡೆಯಲು ತಹಶೀಲ್ದಾರ್ ಕಚೇರಿಗಳಿಗೆ ಹೋಗಬೇಕಿಲ್ಲ. ಅಲ್ಲಿಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ನಿಮ್ಮಹತ್ತಿರದ ನಾಡ ಕಚೇರಿ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಪಡೆದುಕೊಳ್ಳಬಹುದು. ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಕಂದಾಯ ಇಲಾಖೆಯ ದಾಖಲೆಗಳನ್ನು ಚೆಕ್ ಮಾಡಿಕೊಳ್ಳಬಹುದು. ನಿಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬಹುದು. ದಾಖಲೆ ಪರಿಶೀಲಿಸಿಸಲು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ನೀವು ನಿಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬಹುದು.
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಟಿಪ್ಪಣಿ ಪುಸ್ತಕದಂತೆ ಆಕಾರಬಂದ್, ಖಾತಾ ನಂಬರ್, ಪಹಣಿ (ಆರ್.ಟಿ.ಸಿ), ಮುಟೇಶನ್ ಚೆಕ್ ಮಾಡಬಹುದು. ಇದರೊಂದಿಗೆ ಮೇಲಿನ ದಾಖಲೆಗಳನ್ನು ಪಡೆಯಲು ಮೊಬೈಲ್ ನಲ್ಲಿ ಶುಲ್ಕ ಪಾವತಿಸಿ ಮೊಬೈಲ್ ನಲ್ಲಿ ದಾಖಲೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ರಾಜ್ಯದ ರೈತರು ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಈಗ ಸುಲಭವಾಗಿ ಪಡೆದುಕೊಳ್ಳಲು ಕಂದಾಯ ಇಲಾಖೆಯು ಭೂಮಿ ಎಂಬ ಆ್ಯಪ್ ಅಭಿವೃದ್ಧಿಪಡಿಸಿದೆ. ಈ ಆ್ಯಪ್ ನಲ್ಲಿ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನುಪಡೆದುಕೊಳ್ಳಬಹುದು.