Pahani aadhar link : ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷ ಪಹಣಿಗೆ ಆಧಾರ್ ಕಾರ್ಡ್ ನ್ನು ಲಿಂಕ್ ಮಾಡಬಹುದು.
ಹೌದು, ರೈತರು ಮನೆಯಲ್ಲಿಯೇ ಕುಳಿತು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಹೇಗೆ ಮಾಡಬೇಕು? ಲಿಂಕ್ ಮಾಡುವುದರಿಂದ ರೈತರಿಗಾಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.
Pahani aadhar link ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಏಕೆ ಮಾಡಿಸಬೇಕು?
ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಏಕೆ ಮಾಡಿಸಬೇಕೆಂದರೆ ಮುಂದೆ ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ ರೈತರು ಪಹಣಿಗೆ ಆಧಾರ್ ಕಾರ್ಡಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಬೆಳೆ ವಿಮೆ ಹಣ ಪಡೆಯಲು, ಬೆಳೆ ಹಾನಿ ಪರಿಹಾರ ಪಡೆಯಲು ಹಾಗೂ ಜಮೀನಿನ ದಾಖಲೆ ಬದಲಾಯಿಸಲು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಇನ್ನೂ ಮುಂದೆ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕಾದರೆ ಪಹಣಿಗೆ (ಉತಾರ್) ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸಬೇಕು. ಈ ಕುರಿತು ರಾಜ್ಯ ಸರ್ಕಾರವು ಇತ್ತೀಚೆಗೆ ಆದೇಶ ಹೊರಡಿಸಿದೆ.
Pahani aadhar link ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
ರೈತರು ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಈ
https://landrecords.karnataka.gov.in/service4
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ನಿಮ್ಮ ಆಧಾರ್ ಕಾರ್ಡ್ ಗೆ ಜೋಡಣೆ ಆಗಿರುವ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಬಳಿಯಿರುವ ಮೊಬೈಲ್ ನಂಬಿಗೆ ಓಟಿಪಿ ಬರುತ್ತದೆ. ಆಗ ನೀವು ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ಬರೆದು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಭೂಮಿ ನಾಗರಿಕ ಸೇವೆಗಳು ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ನಂತರ ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇದೆ ಬಾಕ್ಸ್ ಆಯ್ಕೆ ಮಾಡಿ ಅಲ್ಲಿ ಕಾಣುವ Verify ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.ಅಲ್ಲಿ ಒಕೆ ಮೇಲೆ ಕ್ಲಿಕ್ ಮಾಡಿದ ನಂತರ ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳನ್ನು ಯುಐಡಿಎಐನೊಂದಿಗೆ ಇಕೆವೈಸಿ ದೃಢೀಕರಣಕ್ಕೆ ಬಾಕ್ಸ್ ಆಯ್ಕೆಮಾಡಿಕೊಂಡು ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಟಿಪಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ಇದನ್ನೂಓದಿ : Check FID Number ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ಇಲ್ಲೇ ಚೆಕ್ ಮಾಡಿ 2024
ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಊರು, ತಾಲೂಕು ಹಾಗೂ ಜಿಲ್ಲೆ ಕಾಣಿಸುತ್ತದೆ.ಇದರೊಂದಿಗೆ ನಿಮ್ಮ ಊರು ವಿಳಾಸ ಹಾಗೂ ಫೋಟೋ ಸಹ ಕಾಣಿಸುತ್ತದೆ.
ಅಲ್ಲಿ ಕಾಣುವ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಬೇಕು ಆಗ ನಿಮ್ಮ ಆಧಾರ್ ಕಾರ್ಡಿಗೆ ಯಾವ ಯಾವ ಪಹಣಿ ಲಿಂಕ್ ಆಗಿದೆ ಆ ಸರ್ವೆ ನಂಬರ್ ಗಳು ಕಾಣಿಸುತ್ತವೆ.ಒಂದು ವೇಳೆ ಪಹಣಿ ಲಿಂಕ್ ಆಗದಿದ್ದರೆ ಭೂಮಿ ಲಿಂಕ್ ಡಿಟೇಲ್ ನಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಸರ್ವೆ ನಂಬರ್ ನಮೂದಿಸಿ ಲಿಂಕ್ ಮಾಡಬೇಕು.
Pahani aadhar link ಆಧಾರ್ ಕಾರ್ಡ್ ಗೆ ಪಹಣಿ ಏಕೆ ಲಿಂಕ್ ಮಾಡಿಸಬೇಕು?
ರೈತರು ತಮ್ಮ ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ನಿಮ್ಮ ಜಮೀನಿನ ಮೇಲೆ ಯಾವುದೇ ವ್ಯಕ್ತಿ ದುರುಪಯೋಗ ಪಡೆದುಕೊಳ್ಳುವುದಿಲ್ಲ. ನಿಮ್ಮ ಜಮೀನಿಗೆ ಸಂಬಂಧಿಸಿದಂತೆ ಏನೇ ಚೇಂಜ್ ಮಾಡಿದರೂ ನಿಮ್ಮ ಮೊಬೈಲಿಗೆ ಸಂದೇಶ ಬರುತ್ತದೆ. ಇದರೊಂದಿಗೆ ಓಟಿಪಿ ಕೇಳಲಾಗುತ್ತದೆ. ಹಾಗಾಗಿ ನಿಮ್ಮ ಸಹಕಾರವಿಲ್ಲದ ಮಧ್ಯವರ್ತಿಗಳು ನಿಮ್ಮ ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡುವುದಿಲ್ಲ. ಹಾಗಾಗಿ ರೈತರು ಕೂಡಲೇ ಪಹಣಿಗಳಿಗೆ ಆಧಾರ್ ಕಾರ್ಡ್ ನ್ನು ಲಿಂಕ್ ಮಾಡಿಸಿಕೊಳ್ಭಬೇಕು.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸಂಪರ್ಕಿಸಲು ಕೋರಲಾಗಿದೆ.