pan aadhaar link status ಮೊಬೈಲ್ ನಲ್ಲೇ ಚೆಕ್ ಮಾಡಿ 2024

Written by Admin

Published on:

Spread the love

pan aadhaar link status : ಸಾರ್ವಜನಿಕರು ಈಗ ತಮ್ಮ ಪ್ಯಾನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದ್ರಿ, ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ನೀವು ಕೇವಲ ಒಂದೇ ನಿಮಿಷದಲ್ಲಿ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಆಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

pan aadhaarcard link status

ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಗ್ ಸ್ಟೇಟಸ್ ಚೆಕ್ ಮಾಡಲು ಯಾರ ಸಹಾಯವೂ ಬೇಕಿಲ್ಲ.  ಈ ಲೇಖನದಲ್ಲಿ ತಿಳಿಸಿದ  ಸಿಂಪರ್ ಸ್ಟೇಪ್  ಮೂಲಕ ಮೊಬೈಲ್ ನಲ್ಲೆ ಚೇಕ್ ಮಾಡಬಹುದು.

ಪ್ಯಾನ್ ಕಾರ್ಡ್ ದೊಂದಿಗೆ ಯಾರ ಯಾರ ಆಧಾರ್ ಕಾರ್ಡ್ ಲಿಂಕ್ ಆಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಈಗಲೇ ಚೆಕ್ ಮಾಡಿಕೊಳ್ಳಿ.

pan aadhaar link status ಪ್ಯಾನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್  ಹೀಗೆ ಚೆಕ್ ಮಾಡಿ

ನಿಮ್ಮ ಪ್ಯಾನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://eportal.incometax.gov.in/iec/foservices/#/pre-login/link-aadhaar-status       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ Link Aadhaar status  ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಪ್ಯಾನ್ ಕಾರ್ಡ್ ಹಾಕಬೇಕು. ಅದರ ಕೆಳಗಡೆ ಆಧಾರ್ ನಂಬರ್ ನಮೂದಿಸಬೇಕು. ನಂತರ View link aadhaar status  ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬ ಮೆಸೆಜ್ ಕಾಣಿಸುತ್ತದೆ.

ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಗ್ ಆಗಿದ್ದರೆ Your pan  is already linked to given aadhar ಎಂಬ ಮೆಸೆಜ್ ಕಾಣಿಸುತ್ತದೆ.

ಒಂದು ವೇಳೆ ಮೇಲಿನ ಲಿಂಕ್ ಓಪನ್ ಆಗದಿದ್ದರೆ  ಈ

https://www.incometax.gov.in/iec/foportal/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇ ಫಿಲ್ಲಿಂಗ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಂಬರ್ ನಮೂದಿಸಿ ವೀವ್ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.

ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಮರೆಯಬೇಡಿ. ನಿಮ್ಮ ಪ್ಯಾನ್ ಕಾರ್ಡ್ ಮಾನ್ಯವಾಗಿರುವುದು ಅವಶ್ಯಕವಾಗಿದೆ.

pan aadhaar link status ಪ್ಯಾನ್ ಕಾರ್ಡ್ ನೊಂದಗೆ ಆಧಾರ್ ಲಿಂಕ್ ಏಕೆ ಮಾಡಿಸಬೇಕು?

ಪ್ಯಾನ್ ಕಾರ್ಡ್ ಇಂದಿನ ದಿನಗಳಲ್ಲಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬ್ಯಾಂಕಿನ ಪ್ರತಿಯೊಂದು ವ್ಯವಹಾರಕ್ಕೆ ಇದು ಮುಖ್ಯವಾಗಿದೆ. ಆನ್ಲೈನ್ ವಹಿವಾಟುಗಳಿಗಾಗಿ ಮಾಡಿದಿ ಕೆವೈಸಿಯವರೆಗೆ ಪ್ರತಿಯೊಂದು ಹಣಕಾಸಿನ ಕೆಲಸ್ಕಕೆ ಪ್ಯಾನ್ ಕಡ್ಡಾಯವಾಗಿದೆ.

ಇದನ್ನೂ ಓದಿ : Land detail ನಿಮ್ಮ ಅಕ್ಕಪಕ್ಕದ ಜಮೀನು ಯಾರ ಹೆಸರಿಗಿದೆ? ಇಲ್ಲೇ ಚೆಕ್ ಮಾಡಿ 2024

ಹೊಸ ಪ್ಯಾನ್ ಗೆ ಅರ್ಜಿ ಸಲ್ಲಿಸುವಾಗ ಹಾಗೂ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವಾಗ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ.  ಸರ್ಕಾರ ನಿಗದಿಪಡಿಸಿದ ಗಡುವಿನ ಒಳಗೆ ಲಿಂಕ್ ಮಾಡದಿದ್ದರೆ ಆ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ.

Leave a Comment