Pm kisan ರೈತರಿಗೆ ಗುಡ್ ನ್ಯೂಸ್ ಜೂನ್ 18 ರಂದು ಈ ಪಟ್ಟಿಯಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆ

Written by Admin

Published on:

Spread the love

Pm kisan : ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರಿಗೆ ಕೇಂದ್ರ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಹೌದು, ರೈತ ಮಿತ್ರರೆ  ಇದೇ ತಿಂಗಳ ಜೂನ್ 18 ರಂದು ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆ ಮಾಡಲಾಗುವುದು.

ನರೇಂದ್ರ ಮೋದಿಯವರು ಮೂರನೇಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ  17ನೇ ಕಂತಿನ ಯೋಜನೆಗೆ ಚಾಲನೆ ನೀಡಲಿದ್ದಾರೆ.  ಯಾವ ಸಮಯದಲ್ಲಿ ಯಾವ ರಾಜ್ಯದಿಂದ ಪಿಎಂ ಕಿಸಾನ್ ಹಣ ಬಿಡುಗಡೆ ಮಾಡಲಿದ್ದಾರೆ. ಯಾವ ಯಾವ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Pm kisan

Pm kisan ಯೋಜನೆಯ 17 ನೇ ಕಂತಿನ ಹಣವನ್ನು ವಾರಣಾಸಿಯಿಂದ ದೇಶದ 9.3 ಕೋಟಿ ರೈತರಿಗೆ ಸುಮಾರು 20 ಸಾವಿರ ಕೋಟಿ ರೂಪಾಯಿನ್ನು ರೈತರ ಖಾತೆಗೆ ಜಮೆ ಮಾಡಲಿದ್ದಾರೆ.  ಅಂದು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಪ್ರತಿಯೊಬ್ಬ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ ಡಿಬಿಟಿ ಮೂಲಕ ಜಮೆಯಾಗಲಿದೆ.

ಫೆಬ್ರವರಿ 28 ರಂದು ಪಿಎಂ ಕಿಸಾನ್ ಯೋಜನೆಯ 16ನೇ ಕಂತು ಜಮೆ ಮಾಡಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುವ ಈ ಯೋಜನೆಯ ಹಣ ಈಗ ಜೂನ್ ತಿಂಗಳ18 ರಂದು ಫಲಾನುಭವಿಗಳೆಲ್ಲರ ಖಾತೆಗೆ ಜಮೆಯಾಗಲಿದೆ.

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಪಡೆಯಲು ರೈತರಿಗೆ ಈ ಹಣ ಸಹಾಯವಾಗಲಿದೆ. ಹಾಗಾಗಿ ರೈತರು ಪಿಎಂ ಕಿಸಾನ್ ಯೋಜನೆಯ ಹಣವನ್ನು ಸದುಪಯೋಗಪಡೆದುಕೊಳ್ಳಬಹುದು.

Pm kisan ಯೋಜನೆಯನ್ನು 2019 ರ ಫೆಬ್ರವರಿ ತಿಂಗಳಲ್ಲಿ ಆರಂಭಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ 16 ಕಂತುಗಳ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ. ಈಗ 17ನೇ ಕಂತುಜೂನ್ ತಿಂಗಳ 18 ರಂದು ಜಮೆಯಾಗಲಿದೆ.  ಹೀಗಾಗೆ ಒಟ್ಟು 17ನೇ ಕಂತು ಸೇರಿ ಇಲ್ಲಿಯವರೆಗೆ ರೈತರ ಖಾತೆಗೆ ಒಟ್ಟು 34 ಸಾವಿರ ರೂಪಾಯಿ ಜಮೆಯಾಗಂತಾಗುತ್ತದೆ.

Pm kisan ಯಾವ ಯಾವ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ?

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ  ಹಣವನ್ನು ಈ ಕೆಳಗಹಿನ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಜಮೆಯಾಗಲಿದೆ.  ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಜಿಲ್ಲೆ ಆಯ್ಕೆ ಮಾಡಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ಇರಲೇಬೇಕು. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿಕೊಂಡು ಮುಂದಿನ ಪೇಜ್ ನಂಬರ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಬಹುದು.

pm kisan farmer

Pm kisan ಪಟ್ಟಿಯಲ್ಲಿದ್ದರೂ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲವೇ?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದರೂ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲವೇ? ನಿಮ್ಮ ಹೆಸರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿಗೆ ನೀಡಿ ಪಹಣಿಯ ಸರ್ವೆ ನಂಬರ್ ನಲ್ಲಿ ಒಂದೇ ರೀತಿಯಾಗಿರಬೇಕು.

ಇದನ್ನೂ ಓದಿ Bhagyalakshmi status ಭಾಗ್ಯಲಕ್ಷ್ಮೀ ಯೋಜನೆಯಡಿ ನಿಮ್ಮ ಮಗಳ ಹೆಸರಿಗೆಷ್ಟು ಹಣ ಜಮೆ ಇಲ್ಲೇ ಚೆಕ್ ಮಾಡಿ 2024

ಹೆಸರು ಅಥವಾ ತಂದೆಯ ಹೆಸರು ತಾಳೆಯಾಗದಿದ್ದರೆ ನಿಮಗೆ ಹಣ ಜಮೆಯಾಗುವುದಿಲ್ಲ.

Pm kisan ಇಕೆವೈಸಿ ಮಾಡಿಸದಿದ್ದರೂ ನಿಮಗೆ ಹಣ ಜಮೆಯಾಗಲ್ಲ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಇಕೆವೈಸಿ ಮಾಡಿಸಿಲ್ಲವಾದರೂ ಹಣ ರೈತರ ಖಾತೆಗೆ ಜಮೆಯಾಗುವುದಿಲ್ಲ. ಇಕೆವೈಸಿ ಮಾಡಿಸುವುದು ಕಡ್ಯಾಯವಾಗಿದೆ. ಯಾವ ರೈತರು ಇಕೆವೈಸಿ ಮಾಡಿಸಿಲ್ಲವೋ ಕೂಡಲೇ ತಮ್ಮ ಹತ್ತಿರದ  ರೈತ ಸಂಪರ್ಕ ಕೇಂದ್ರ ಅಥವಾ  ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗಿದೆ.

Pm kisan ಇಕೆವೈಸಿ ಅಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ನಿಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಓಪನ್ ಆಗುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ.

Leave a Comment