Pm kisan 18th installment list : ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದೆ. ಹೌದು, ರೈತ ಮಿತ್ರರೇ ಈಗಲೇ ನಿಮ್ಮ ಹೆಸರು ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ.
Pm kisan 18th installment list ಪಿಎಂ ಕಿಸಾನ್ 18ನೇ ಕಂತಿನ ಪಟ್ಟಿಯಲ್ಲಿರುವ ರೈತರ ಹೆಸರು ಮೊದಲು ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ರೈತರು ಇಲ್ಲಿ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಜಿಲ್ಲೆ ಆಯ್ಕೆ ಮಾಡಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ಎ ಅಕ್ಷರದಿಂದ ಹೆಸರುಗಳ ಪಟ್ಟಿ ಕಾಣಿಸುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನುನೋಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಬಹುದು.
ಪಿಎಂ ಕಿಸಾನ್ 18ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿದ್ದರೂ ಈ ಕೆಳಗಿನ ಕಾರಣಗಳಿಂದ ಹಣ ಜಮಯಾಗುವುದಿಲ್ಲ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಎಲ್ಲಾ ಅರ್ಹತೆ ಹೊಂದಿದ್ದರೂ ಯಾವ ಯಾವ ಕಾರಣದಿಂದ ಅವರಿಗೆ ಹಣ ಜಮೆಯಾಗುವುದಿಲ್ಲಇಲ್ಲಿದೆ ನೋಡಿ ಮಾಹಿತಿ.
Pm kisan 18th installment list ಪಿಎಂ ಕಿಸಾನ್ ಯೋಜನೆಯ ಲಾಭ ಸಿಗಲು ಇಕೆವೈಸಿ ಮಾಡಿಸುವುದು ಕಡ್ಡಾಯ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಲು ರೈತರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.ಯಾವ ಯಾವ ರೈತರು ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರು ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬಹುದು. ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ : Adharcard Pahani link ಪಹಣಿಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಸರ್ಕಾರಿ ಸೌಲಭ್ಯ – ಮೊಬೈಲ್ ನಲ್ಲಿ ಹೀಗೆ ಲಿಂಕ್ ಮಾಡಿ 2024
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿದ ನಂತರ ಅವರ ಎಲ್ಲ ದಾಖಲೆಗಳಲ್ಲಿ ತಮ್ಮ ಹೆಸರು ಒಂದೇ ರೀತಿಯಲ್ಲಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಹೆಸರು ವ್ಯತ್ಯಾ,ಸವಾಗಿದ್ದರೆ ಕೂಡಲೇ ಸರಿಪಡಿಸಿಕೊಳ್ಳಬೇಕು.
Pm kisan 18th installment list ಏನಿದು ಪಿಎಂ ಕಿಸಾನ್ ಯೋಜನೆ?
ಪಿಎಂ ಕಿಸಾನ್ ಯೋಜನೆಯನ್ನು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದಕ್ಕಾಗಿ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನುಮೂರು ಕಂತುಗಳಲ್ಲಿ ಹಣ ಬಿಡುಗಡೆ ಜಮೆ ಮಾಡಲಾಗಿದೆ. ರೈತರಿಗೆ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿಯಂತೆ ಒಟ್ಟು ಒಂದು ವರ್ಷದಲ್ಲಿ 6 ಸಾವಿರ ರೂಪಾಯಿ ಜಮೆ ಮಾಡಲಾಗುವುದು.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಈಗಾಗಲೇ ದೇಶಾದ್ಯಂತ 9 ಕೋಟಿಗೂ ಹೆಚ್ಚು ರೈತರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಈ ಯೋಜನೆಯು ಅತೀ ಮಹತ್ವದ್ದಾಗಿದೆ..
Pm kisan 18th installment list ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ?
ಪಿಎಂ ಕಿಸಾನ್ ಯೋಜನೆಯ ದೇಶದ ರೈತರಿಗೆ ಇಲ್ಲಿಯವರೆಗೆ ಅವರ ಖಾತೆಗೆ 17 ಕಂತುಗಳು ಜಮೆಯಾಗಿವೆ. ಒಟ್ಟು 17 ಕಂತುಗಳಿಂದ 34 ಸಾವಿರ ರೂಪಾಯಿ ಅವರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆ. ಯಾರು ಆರಂಭದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೋ ಅವರಿಗೆ 17 ಕಂತುಗಳು ಜಮೆಯಾಗಿವೆ.