Pm kisan beneficiary list released: ಪಿಎಂ ಕಿಸಾನ್ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ 2024

Written by Admin

Published on:

Spread the love

Pm kisan beneficiary list released : ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದೆ.

ಹೌದು, ಫಲಾನುಭವಿಗಳು ತಮ್ಮ ಹೆಸರುಗಳನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು,  ತಮಗೆಲ್ಲಾ ಗೊತ್ತಿದ್ದ ಹಾಗೆ ಮುಂದಿನ ವಾರ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ  ಯಾರು ಯಾರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿದೆ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಬಹುದು. ಹಾಗಾದರೆ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Pm kisan beneficairy list

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರಿಗೆ ಈಗಾಗಲೇ ಫೆಬ್ರವರಿ ತಿಂಗಳಲ್ಲಿ 16ನೇ ಕಂತು ಜಮೆ ಮಾಡಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆಈ ಹಣ ಜಮೆ ಮಾಡಲಾಗುತ್ತಿದೆ. ಹಾಗಾಗಿ ಜೂನ್ ತಿಂಗಳ ಮೊದಲ ವಾರದಲ್ಲಿ  ಹಣ ಜಮೆಯಾಗುವ ಸಾಧ್ಯತೆಯಿದೆ.

ಕಳೆದ ಐದಾರು ತಿಂಗಳುಗಳಿಂದ ಇಕೆವೈಸಿ ಮಾಡಿಸುವುದು ಕಡ್ಡಾಯವೆಂದು ಕೃಷಿ ಇಲಾಖೆ ಪತ್ರಿಕೆ ಪ್ರಕಟಣೆಗಳ ಮೂಲಕ ಹಲವಾರು ಬಾರಿ ಮನವಿ ಮಾಡಿತ್ತು. ಕಾರ್ಯಕ್ರಮಗಳಲ್ಲಿಯೂ ಸಹ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ರೈತರಲ್ಲಿ ಮನವಿ ಮಾಡಲಾಗಿತ್ತು. ಇದರಿಂದಾಗಿ ಬಹುತೇಕ ರೈತರು ಇಕೆವೈಸಿ ಮಾಡಿಸಿದ್ದಾರೆ. ಆದರೂ ಇನ್ನೂ ಹಲವಾರು ರೈತರು ಇಕೆವೈಸಿ ಮಾಡಿಸಿಲ್ಲ. ಮುಂದಿನ ಕಂತು ಜಮೆಯಾಗಬೇಕಾದರೆ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.

Pm kisan beneficiary list released ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಫಲಾನುಭವಿಗಳ ಹೆಸರು ಚೆಕ್ ಮಾಡಲು ಈ ಲಿಂಕ್

https://pmkisan.gov.in/Rpt_BeneficiaryStatus_pub.aspx

ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನೀವು Get Report ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ Insurance ನಿಮ್ಮೂರಿನಲ್ಲಿ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಜಮೆ? ಇಲ್ಲೇ ಚೆಕ್ ಮಾಡಿ 2024

ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ನೀವು ಆಯ್ಕೆ ಮಾಡಿಕೊಂಡ ಗ್ರಾಮದಲ್ಲಿ ಯಾವ ಯಾವ ರೈತರು ನೋಂದಣಿ ಮಾಡಿಸಿದ್ದಾರೆ ಅವರ ಹೆಸರು ಕಾಣಿಸುತ್ತದೆ.  ಆದರೆ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಎಲ್ಲಾ ರೈತರ ಖಾತೆಗೆ ಹಣ ಜಮೆಯಾಗುವುದಿಲ್ಲ.  ಫಲಾನುಭವಿಗಳು ಇಕೆವೈಸಿ ಮಾಡಿಸಿರಬೇಕು. ಆಗ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿದೆ. ನಿಮ್ಮ ಹೆಸರು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

pm kisan farmer

Pm kisan beneficiary list released ಮೊಬೈಲ್ ನಲ್ಲೇ ಚೆಕ್ ಮಾಡಿ ಇಕೆವೈಸಿ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ತಮ್ಮಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಏಕೆಂದರೆ ನೀವು ಇಕೆವೈಸಿ ಮಾಡಿಸಿದರೆ ಮಾತ್ರ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ. ಹಾಗಾದರೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕು. ನೀವು ಇಕೆವೈಸಿ ಮಾಡಿಸಿದ್ದರೆ ನಿಮ್ಮ ಇಕೆವೈಸಿ ಸಕ್ಸೆಸಫುಲಿ ಆಗಿದೆ ಎಂಬ ಮೆಸೆಜ್ ಕಾಣಿಸುತ್ತದೆ. ಇಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ಓಟಿಪಿ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬಹುದು.

Pm kisan beneficiary list released ಇಕೆವೈಸಿ ಮಾಡಿಸಲು ಯಾವ ಯಾವ ದಾಖಲೆಗಳು ಬೇಕು?

ಇಕೆವೈಸಿ ಮಾಡಿಸಲು ರೈತರ ಜಮೀನಿನ ದಾಖಲೆಗಳು , ಬ್ಯಾಂಕ್ ಪಾಸ್ ಬುಕ್ ಹಾಗೂ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಆಸಕ್ತ ರೈತರು ಕೂಡಲೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗಿದೆ.

Leave a Comment