Pm kisan date announced ಫೆ. 24 ರಂದು ಈ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ

Written by Admin

Published on:

Spread the love

Pm kisan date announced :  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ 19ನೇ ಕಂತಿನ ಹಣವನ್ನು ಫೆಬ್ರವರಿ 24 ರಂದು ಜಮೆ ಮಾಡಲಾಗುವುದು.

ಈ ಸಲ ಎಲ್ಲಾ ರೈತರ ಖಾತೆಗೆ ಜಮೆಯಾಗುತ್ತೋ ಇಲ್ಲವೋ ಎಂಬ ಸಂಶಯ ರೈತರಲ್ಲಿದೆ. ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಕೆಳಗೆ ನೀಡಲಾದ ಫಲಾನುಭವಿಗಳ ಪಟ್ಟಿಯಲ್ಲಿದ್ದವರಿಗೆಮಾತ್ರ ಜಮೆಯಾಗಲಿದೆ. ಹಾಗಾದರೆ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಸಹ ಇಲ್ಲೇ ಚೆಕ್ ಮಾಡಬಹುದು.

Pm kisan date announced ಪಿಎಂ ಕಿಸಾನ್ ದಿನಾಂಕ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ 19ನೇ ಕಂತಿನ 20 ಸಾವಿರ ಕೋಟಿ ರೂಪಾಯಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 24 ರಂದು ಬಿಡುಗಡೆ ಮಾಡಲಿದ್ದಾರೆ. ಬಿಹಾರ್ ರಾಜ್ಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು. ದೇಶದ 9.4 ಕೋಟಿಗೂ ಹೆಚ್ಚಿನ ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ. ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಮೂಲಕ ಹಣ ಜಮೆ ಮಾಡಲಾಗುವುದು.

Pm kisan date announced

2019 ರ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಗೆಚಾಲನೆ ನೀಡಿತ್ತು. ವಾರ್ಷಿಕವಾಗಿ ಮೂರುಸಮಾನ ಕಂತಿನಲ್ಲಿ ಒಟ್ಟು 6 ಸಾವಿರ ರೂಪಾಯಿ ಹಣ ರೈತರಿಗೆ ಸಿಗಲಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಪೋಬರ್ 5 ರಂದು ಬಿಡುಗಡೆಯಾಗಿತ್ತು. ಈಗ 19ನೇ ಕಂತಿನ ಹಣ ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ.

Pm kisan date announced ಇಕೆವೈಸಿ ಆದ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 

ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್  ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.  ರೈತರು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.

Pm kisan date announced ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಬೇಕಾಗುವ ಅರ್ಹತೆಗಳು ಯಾವುವು?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇರಬೇಕು. ಹೌದು,  ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತಿ ಅಥವಾ ಪತ್ನಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.

ಇದನ್ನೂ ಓದಿ Ekyc list ಇಕೆವೈಸಿ ಆಗದಿರುವ ರೈತರ ಪಟ್ಟಿ ಬಿಡುಗಡೆ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ 2025

ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.

Pm kisan date announced ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.

Pm kisan date announced

ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.

Leave a Comment