Pm kisan eligibility : ಇನ್ನೂ ಮುಂದೆ ಪಿಎಂ ಕಿಸಾನ್ ಹಣ 18ನೇ ಕಂತಿನ ಹಣ ಯಾವ ಯಾವ ರೈತರಿಗೆ ಜಮೆಯಾಗುತ್ತದೆ ಎಂಬ ಪಟ್ಟಿ ಬಿಡುಗಡೆಯಾಗಿದೆ.
ಹೌದು, 18ನೇ ಕಂತಿನ ಹಣ ಜಮೆಗಾಗಿ ಕಾಯುತ್ತಿರುವ ರೈತರು ಈಗಲೇ ತಮ್ಮ ಹೆಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಪಿಎಂ ಕಿಸಾನ್ ಯೋಜನೆಗೆ ಯಾರು ಯಾರು ನೋಂದಣಿ ಮಾಡಿಸಿದ್ದಾರೋ ಅವರಿಗೆಲ್ಲರಿಗೂ ಹಣ ಜಮಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ.ಈಗ ಕೆಲವು ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಯಾರ ಹೆಸರು ರದ್ದುಗೊಳಿಸಲಾಗಿದೆ ಇನ್ನೂ ಕೆಲವರ ಹೆಸರು ಉಳಿಸಲಾಗಿದೆ. ಹಾಗಾಗಿ ಯಾರ ಯಾರ ಹೆಸರು ಪಟ್ಟಿಯಲ್ಲಿದೆಎ ಎಂಬುದನ್ನು ಇಲ್ಲೇ ಚೆಕ್ ಮಾಡಿಕೊಳ್ಳಬಹುದು.
Pm kisan eligibility ಈ ಕೆಳಗಿನ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಸೆಲೆಕ್ಟ್ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು.ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬೇಕು. ಈ ಪಟ್ಟಿಯಲ್ಲಿದ್ದ ಮಾತ್ರಕ್ಕೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ.
Pm kisan eligibility ಪಿಎಂ ಕಿಸಾನ್ ಅರ್ಹತೆಗಳು ಯಾವುವು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಈಗ ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿರಬೇಕು. ಅಂದರೆ ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತ್ರಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : Bara parihara credited ಬರ ಪರಿಹಾರ ಹಣ ಬಿಡುಗಡೆ ಆಧಾರ್ ನಂಬರ್ ಹಾಕಿ ಇಲ್ಲೇ ಚೆಕ್ ಮಾಡಿ
ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.
Pm kisan eligibility ನಿಮ್ಮ ಎಲ್ಲಾ ದಾಖಲೆಯಲ್ಲಿ ನಿಮ್ಮ ಹೆಸರು ಒಂದೇ ರೀತಿಯಾಗಿದೆಯೇ? ಚೆಕ್ ಮಾಡಿ
ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಲ್ಲಿ ರೈತರ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೂ ಮುಂದಿನ ಕಂತು ರೈತರ ಖಾತೆಗೆ ಜಮೆಯಾಗುವುದಿಲ್ಲ.
Pm kisan eligibility ಪಿಎಂ ಕಿಸಾನ್ ಇಕೆವೈಸಿ ಕಡ್ಡಾಯವಾಗಿ ಆಗಿರಬೇಕು?
ಪಿಎಂ ಕಿಸಾನ್ ಯೋಜನೆಯ 18ನೇ ಕಂತು ಪಡೆಯಲು ರೈತರು ಇಕೆವೈಸಿ ಕಡ್ಡಾಯವಾಗಿ ಮಾಡಿಸಿರಬೇಕು. ಇಲ್ಲದಿದ್ದರೆ ಅಂತಹ ರೈತರಿಗೆ ಹಣ ಜಮೆಯಾಗುವುದಿಲ್ಲ. ನಿಮ್ಮದು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಇಲ್ಲೇ ಚೆಕ್ ಮಾಡಿಕೊಳ್ಳಬಹುದು.
ನೀವು ಇಕೆವೈಸಿ ಮಾಡಿಸಿಲ್ಲವಾದಲ್ಲಿ ಆಧಾರ್ ಕಾರ್ಡ್ ನಂಬರ್ ನಮೂದಿಸಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇಕೆವೈಸಿ ಮಾಡಿಕೊಳ್ಳಬಹುದು.