PM kisan farmers list : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಗುಡ್ ನ್ಯೂಸ್.ಹೌದು, ಪಿಎಂ ಕಿಸಾನ್ ಯೋಜನೆಗಾಗಿ ಕಾಯುತ್ತಿರುವ ರೈತರಿಗೆ ಅತೀ ಶೀಘ್ರದಲ್ಲಿ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಜನ್ ತಿಂಗಳ ಮೊದಲ ವಾರದಲ್ಲಿಯೇ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಏಕೆಂದರೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಿಎಂ ಕಿಸಾನ್ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಜಮೆ ಮಾಡಲಾಗಿತ್ತು.
ಹಾಗಾಗಿ ನಾಲ್ಕು ತಿಂಗಳ ಲೆಕ್ಕ ಪ್ರಕಾರ ಜೂನ್ ತಿಂಗಳ ಮೊದಲ ವಾರದಲ್ಲಿಯೇ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂಬುದನ್ನು ರೈತರು ಈಗಲೇ ತಮ್ಮ ಹೆಸರು ಚೆಕ್ ಮಾಡಿಕೊಳ್ಳಬಹುದು.
PM kisan farmers list : ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ರೈತರ ಹೆಸರು ಹೇಗೆ ಚೆಕ್ ಮಾಡಬೇಕು?
ಪಿಎಂ ಕಿಸಾನ್ ಯೋಜನೆಯ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಊರು ಕಾಣಿಸದಿದ್ದರೆ ನಿಮ್ಮ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಲ್ಲಿ ಯಾವ ಯಾವ ರೈತರು ಫಲಾನುಭವಿಗಳಾಗಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.
PM kisan farmers list : ಪಿಎಂ ಕಿಸಾನ್ ಯೋಜನೆ ಯಾವ ಯಾವ ತಿಂಗಳಲ್ಲಿ ಜಮೆಯಾಗುತ್ತದೆ?
ಪಿಎಂ ಕಿಸಾನ್ ಯೋಜನೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಹೌದು ಒಂದು ವರ್ಷದಲ್ಲಿ ಒಟ್ಟು 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆಯಾಗುವುದು.
ಕಳೆದ 16ನೇ ಕಂತು ಫೆಬ್ರವರಿ ತಿಂಗಳಲ್ಲಿ ರೈತರ ಖಾತೆಗೆ ಹಣ ಜಮೆ ಮಾಡಲಾಗಿತ್ತು. ಈ ಆಧಾರದ ಮೇಲೆ ಜೂನ್ ತಿಂಗಳಲ್ಲಿ 17ನೇ ಕಂತಿನ ಹಣ ಜಮೆ ಮಾಡಲಾಗುವುದು. ಸೆಪ್ಟೆಂಬರ್ – ಅಕ್ಟೋಬರ್ ಅವಧಿಯಲ್ಲಿ 18ನೇ ಕಂತು ರೈತರ ಖಾತೆಗೆ ಜಮೆ ಮಾಡಲಾಗುವುದು.
ಇದನ್ನೂ ಓದಿ : Drought compensation ಈ ರೈತರ ಖಾತೆಗೆ ಬರ ಪರಿಹಾರ ಜಮೆ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ 2024
ಪಿಎಂ ಕಿಸಾನ್ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 16 ಕಂತುಗಳು ರೈತರ ಖಾತೆಗೆ ಜಮೆ ಮಾಡಲಾಗಿದೆ.ಒಟ್ಟು36 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡಲಾಗಿದೆ.
PM kisan farmers list : ಪಟ್ಟಿಯಲ್ಲಿದ್ದರೂ ನಿಮಗೆ ಯೋಜನೆಯ ಹಣ ನಿಂತುಹೋಗಿದೆಯೇ?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದು, ಈಗ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆಯೇ? ಏಕೆ ತಡವಾಗಿರಬಹುದು? ಎಂಬ ಚಿಂತೆಯಲ್ಲಿರುವ ರೈತರಿಗೆ ಇಲ್ಲಿದೆ ಮಾಹಿತಿ. ಮೊದಲು ಆಧಾರ್ ಕಾರ್ಡ್, ಜಮೀನಿನ ಪಹಣಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ರೈತರ ಹೆಸರು ತಂದೆಯ ಹೆಸರು ಒಂದೇ ರೀತಿಯಾಗಿರಬೇಕು. ಒಂದಕ್ಷರವೂ ವ್ಯತ್ಯಾಸವಾಗಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗುವುದು. ಇಂತಹ ರೈತರು ಕೂಡಲೇ ತಮ್ಮ ಯಾವ ದಾಖಲೆ ತಪ್ಪಾಗಿದೆಯೋ ಆ ದಾಖಲೆಯನ್ನು ಸರಿಪಡಿಸಿಕೊಳ್ಳಬಹುದು. ಬ್ಯಾಂಕ್ ಪಾಸ್ ಬುಕ್ ಹಾಗೂ ಆಧಾರ್ ಕಾರ್ಡ್ ನ್ನು ಸರಿಪಡಿಸಿಕೊಳ್ಳಬಹುದು. ನಂತರ ಮೇಲೆ ತಿಳಿಸಿದ ದಾಖಲೆಗಳನ್ನು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆ ಸಲ್ಲಿಸಬಹುದು.
ದಾಖಲೆಗಳು ಸರಿಯಿದ್ದರೂ ಹಣ ಜಮೆಯಾಗುತ್ತಿಲ್ಲವೇ? ಹಾಗಾದರೆ ನಿಮ್ಮ ಕುಟುಂಬದಲ್ಲಿ ಪತಿ ಪತ್ನಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಹುದು. ಅಥವಾ ಕುಟುಂಬದಲ್ಲಿಯಾರಾದರೊಬ್ಬರು ಪಿಂಚಣಿ (Pension) ಪಡೆಯುತ್ತಿರಬಹುದು.