Pm kisan fund: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ದಿನವೇ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸೋಮವಾರ ಬೆಳಗ್ಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಬಿಡುಗಡೆಗೆ ಅನುಮೋದನೆ ನೀಡಿದರು. ಸೋಮವಾರ ಬೆಳಗ್ಗೆ ಪಿಎಂ ಕಿಸಾನ್ ಯೋಜನೆಯ ಮೊದಲ ಕಡತಕ್ಕೆ ಸಹಿ ಹಾಕಿದರು.
ಸುಮಾರು 9.3 ಕೋಟಿ ರೈತರಿಗೆ ಅನುಕೂಲವಾಗಲಿರುವ ಸುಮಾರು 20 ಸಾವಿರ ಕೋಟಿ ರೂಪಾಯಿ ಮೊತ್ತದ ಪಿಎಂ ಕಿಸಾನ್ ನಿಧಿಯ 17ನೇ ಕಂತಿನ ಬಿಡುಗಡೆಗೆ ಅನುಮೋದನೆ ನೀಡಿದರು.
ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆಗೆ ಸಹಿ ಹಾಕಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ, ನಮ್ಮದು ಕಿಸಾನ್ ಕಲ್ಯಾಣ (ರೈತ ಕಲ್ಯಾಣ)ಕ್ಕೆ ಸಂಪೂರ್ಣ ಬದ್ದವಾಗಿರುವ ಸರ್ಕಾರ. ಹಾಗಾಗಿ, ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ರೈತರಿಗೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಮಹತ್ವದ ಕೆಲಸ ಮಾಡಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.
Pm kisan fund ಪಿಎಂ ಕಿಸಾನ್ ಹಣ ನಿಮಗೆ ಜಮೆಯಾಗುವುದೇ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಈ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿರುವುದರಿಂದ ರೈತರು ತಮಗೆ ಜಮೆಯಾಗುವುದೋ ಇಲ್ಲವೋ ಎಂಬುದರ ಪಟ್ಟಿಯಲ್ಲಿ ತಮ್ಮ ಹೆಸರು ಚೆಕ್ ಮಾಡಬಹುದು. ಹೌದು, ತಮ್ಮ ಹೆಸರು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಚೆಕ್ ಮಾಡುವ ಪೇಜ್ ನಿಮಗೆ ಕಾಣಿಸುತ್ತದೆ. . ಅಲ್ಲಿ ನಿಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಲ್ಲಿ ಯಾವ ಯಾವ ರೈತರು ಫಲಾನುಭವಿಗಳಾಗಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.
Pm kisan fund ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗಲಿದೆ?
ರೈತ ಬಾಂಧವರಿಗೆಲ್ಲಾ ಗೊತ್ತಿದ್ದ ಹಾಗೆ, ಪಿಎಂ ಕಿಸಾನ್ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಏಪ್ರೀಲ್ ರಿಂದ ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆ ಮಾಡಲಾಗುವುದು. ಅದೇ ರೀತಿ ಆಗಸ್ಟ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ಎರಡನೇ ಕಂತು ಜಮೆ ಮಾಡಲಾಗುವುದು.
ಇದನ್ನೂ ಓದಿ Check crop insurance money ರೈತರ ಈ ಬೆಳೆಗಳಿಗೆ ಇಷ್ಟು ವಿಮೆ ಹಣ ಜಮೆ? ಹೀಗೆ ಚೆಕ್ ಮಾಡಿ 2024
ಹಾಗೂ ಡಿಸೆಂಬರ್ ದಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಮೂರನೇ ಕಂತು ಜಮೆ ಮಾಡಲಾಗುವುದು.
ಇಲ್ಲಿಯವರೆಗೆ ರೈತರ ಖಾತೆಗೆ 16 ಕಂತುಗಳು ಜಮೆ ಯಾಗಿದೆ. 2 ಸಾವಿರ ರೂಪಾಯಿಯಂತೆ ಒಟ್ಟು 32 ಸಾವಿರ ರೂಪಾಯಿ ಪಿಎಂ ಕಿಸಾನ್ ಯೋಜನೆಯಿಂದ ರೈತರ ಖಾತೆಗೆ ಹಣ ಜಮೆಯಾಗಿದೆ.
Pm kisan fund ಪಿಎಂ ಮೋದಿ ಪ್ರಮಾಣ ವಚನ
ಈ ನಿರ್ಧಾರವು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ಮಾತ್ಮಕ ಒಕ್ಕೂಟದ ಚುನಾವಣೆಯ ಗೆಲವಿನ ನಂತರ ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧತೆಯನ್ನು ಸೂಚಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 72 ಸದಸ್ಯರ ಕೇಂದ್ರ ಸಚಿವರ ಸಮ್ಮುಖದಲ್ಲಿ ದಾಖಲೆಯ ಮೂರನೇ ಅವಧಿಗೆ ನರೇಂದ್ರ ಮೋದಿಯವರು ಭಾನುವಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.