PM kisan Helpline number : ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದರೂ ಪಿಎಂ ಕಿಸಾನ್ ಯೋಜನೆಯ ಕಂತುಗಳ ಹಣ ಜಮೆಯಾಗುತ್ತಿಲ್ಲವೇ?
ಇತ್ತೀಚೆಗೆ ನಿಮ್ಮ ಏಕಾಏಕಿ ಪಿಎಂ ಕಿಸಾನ್ ಹಣ ಜಮೆಯಾಗುವುದು ನಿಂತುಹೋಗಿದೆಯೇ? ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ ಎಂಬುದರ ಕುರಿತು ಮಾಹಿತಿ ಕೇಳಬೇಕೆಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.
ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ಇಲ್ಲಿಯವೆಗೆ ಜಮೆಯಾಗಿದೆ?
ಪಿಎಂ ಕಿಸಾನ್ ಯೋಜನೆಯ 16 ಕಂತುಗಳು ಇಲ್ಲಿಯವರೆಗೆ ಜಮೆಯಾಗಿದೆ. ಹೌದು, ಫೆಬ್ರವರಿ 28 ರಂದು ಪಿಎಂ ಕಿಸಾನ್ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ಆಗ ಬಹುತೇಕ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಿತ್ತು. ಆದರೂ ಬಹಳಷ್ಟು ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡುವುದನ್ನು ನಿಲ್ಲಿಸಲಾಗಿದೆ. ಹಾಗಾದರೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ನಿಂತುಹೋಗಿದೆ ಎಂಬುದರ ಕುರಿತು ವಿಚಾರಿಸಬೇಕೇ? ಈ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಿ.
PM kisan Helpline number ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗದ ರೈತರು ಯಾರಿಗೆ ಸಂಪರ್ಕಿಸಬೇಕು?
ಪಿಎಂ ಕಿಸಾನ್ ಯೋಜನೆಯ ಹಣ ಯಾವ ಯಾವ ರೈತರಿಗೆ ಜಮೆಯಾಗಿಲ್ಲವೋ ಅವರು ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು. ಹೌದು, ಯೋಜನೆಯ ಉಚಿತ ಸಹಾಯವಾಣಿ ನಂಬರ್ 155261 ಅಥವಾ 01124300606 ಗೆ ಕರೆ ಮಾಡಬಹುದು.ಈ ನಂಬರಿಗೆ ಕರೆ ಮಾಡಿ ನಿಮಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ ಎಂಬುದನ್ನು ವಿಚಾರಿಸಬಹುದು.
ಪಿಎಂ ಕಿಸಾನ್ ಯೋಜನೆಯ ಅರ್ಹತೆಗಳು
ಪಿಎಂ ಕಿಸಾನ್ ಯೋಜನೆಗೆ ಯಾವ ಯಾವ ರೈತರು ಅರ್ಹತೆ ಪಡೆದಿದ್ದಾರೆ ನಿಮಗೆ ಗೊತ್ತಾ? ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆಯಲು ರೈತರು ಭಾರತದ ನಿವಾಸಿಯಾಗಿರಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಈ ಯೋಜನೆಯ ಲಾಭ ಸಿಗಲಿದೆ. ಕುಟುಂಬದಲ್ಲಿ ಪತಿ ಪತ್ನಿ ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : Gruhalakshmi amount credited: 1.12 ಕೋಟಿ ಮಹಿಳೆಯರಿಗೆ ಹಣ ಜಮೆ
ಕುಟುಂಬದ ಸದಸ್ಯರು ಪಿಂಚಣೆ ಪಡೆಯುವವರಾಗಿರಬಾರದು. ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯಲು 2019 ರ ಮೊದಲು ಜಮೀನು ತಮ್ಮ ಹೆಸರಿಗೆ ಹೊಂದಿರಬೇಕು. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸಿರಬೇಕು. ರೈತರ ಜಮೀನಿನ ದಾಖಲೆ, ಆಧಾರ್ ಕಾರ್ಡ್, ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ತಮ್ಮ ಹೆಸರು ಒಂದೇ ರೀತಿಯಾಗಿರಬೇಕು. ರೈತರ ಹೆಸರು ಸ್ವಲ್ಪ ವ್ಯತ್ಯಾಸವಿದ್ದರೂ ಸಹ ಆ ರೈತರ ಖಾತೆಗೆ ಹಣ ಜಮೆಯಾಗುವುದಿಲ್ಲ.
ಪಿಎಂ ಕಿಸಾನ್ ಯೋಜನೆಗೆ ರೈತರು ಇಕೆವೈಸಿ ಮಾಡಿಸಿದ್ದಾರೋ ಇಲ್ಲವೋ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುವುದು ನಿಂತುಹೋಗಿದೆಯೇ? ಹಾಗಾದರೆ ನಿಮ್ಮ ಇಕೆವೈಸಿ ಒಮ್ಮೆ ಚೆಕ್ ಮಾಡಿ ನೋಡಿ.
ಇಕೆವೈಸಿ ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ತೆರದುಕೊಳ್ಳುತ್ತದೆ. ಇಲ್ಲಿ ನೀವು ನಿಮ್ಮ 12 ಅಂಕಿಗಳ ಆಧಾರ್ ಕಾರ್ಡ್ ಹಾಕಿ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಇಕೆವೈಸಿ ಆಗಿದ್ದರೆ ನಿಮಗೆ EKYC is Already done ಎಂಬ ಮೆಸೆಜ್ ಕಾಣಿಸುತ್ತದೆ. ಅಲ್ಲಿ ಓಕೆ ಮೇಲೆ ಕ್ಲಿಕ್ ಮಾಡಬಹುದು.
ಒಂದು ವೇಳೆ ನಿಮ್ಮ ಇಕೆವೈಸಿ ಆಗದೆ ಇದ್ದರೆ ನಿಮ್ಮ ಮೊಬೈಲ್ ನಂಬರ್ ಕೇಳುತ್ತದೆ. ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ನಂತರ ಅಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸಿಕೊಳ್ಳಬಹುದು.
ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಇಕೆವೈಸಿ ಮಾಡಸಲು ತಾಂತ್ರಿಕ ಸಮಸ್ಯೆಯಾಗುತ್ತಿದ್ದರೆ ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಇಕೆವೈಸಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಪಿಎಂ ಕಿಸಾನ್ ಯೋಜನೆಯ ಮುಖಪುಟ ವೆಬ್ ಪೇಜ್ ಗೆ ಭೇಟಿ ನೀಡಬಹುದು.