PM kisan list released : ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಪಟ್ಟಿ ಬಿಡುಗಡೆಯಾಗಿದೆ. ಹೌದು, ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
PM kisan list released ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರು ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನೀವು ಆಯ್ಕೆ ಮಾಡಿಕೊಂಡ ಊರಿನಲ್ಲಿ ಯಾರು ಯಾರು ಫಲಾನುಭವಿಗಳಾಗಿದ್ದಾರೆ ಅವರ ಹೆಸರು ಕಾಣಿಸುತ್ತದೆ. ಎ ದಿಂದ ಹೆಸರುಗಳು ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿಕೊಂಡು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬಹುದು.
PM kisan list released ಪಿಎಂ ಕಿಸಾನ್ ಯೋಜನೆಯ ಲಾಭ ಸಿಗಲು ಇಕೆವೈಸಿ ಮಾಡಿಸುವುದು ಕಡ್ಡಾಯ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಲು ರೈತರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.ಯಾವ ಯಾವ ರೈತರು ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರು ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬಹುದು. ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.
PM kisan list released ಇಕೆವೈಸಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು.ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ಇಕೆವೈಸಿ ಆಗಿದ್ದರೆ ಇಕೆವೈಸಿ ಇಸ್ ಡನ್ ಸಕ್ಸೆಸಫುಲಿ ಎಂಬ ಸಂದೇಶ ಕಾಣಿಸುತ್ತದೆ.
ಇಕೆವೈಸಿ ಆಗಿಲ್ಲವಾದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು.
PM kisan list released ಪಿಎಂ ಕಿಸಾನ್ ಮುಂದಿನ ಕಂತು ಯಾವಾಗ ಜಮೆಯಾಗಬಹುದು?
ಪಿಎಂ ಕಿಸಾನ್ ಯೋಜನೆಯ 18ನೇ ಕಂತು ಮೇ ತಿಂಗಳ ಅಂತ್ಯದಲ್ಲಿ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ಚುನಾವಣೆ ಮುಗಿದ ನಂತರವೇ ಸರ್ಕಾರದ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಮತ್ತೆ ಬಂದರೆ ಈ ಯೋಜನೆಯನ್ನು ಮುಂದುವರೆಸಬಹುದು. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ ಪಿಎಂ ಕಿಸಾನ್ ಯೋಜನೆಯನ್ನುಮುಂದುವರೆಸಬಹುದು ಅಥವಾ ಸ್ಥಗಿತಗೊಳಿಸಬಹುದು.
ಇದನ್ನೂ ಓದಿ : Check pahani adhar link ಪಹಣಿಗೆ ಆಧಾರ್ ಲಿಂಕ್ ಆಗಿದೆಯೇ ಮೊಬೈಲ್ ನಲ್ಲಿ ಚೆಕ್ ಮಾಡಿ 2024
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ. ಚುನಾವಣೆ ಮುಗಿದ ನಂತರ ಅಧಿಕಾರಕ್ಕೆ ಬರುವ ಪಕ್ಷವು ಯೋಜನೆಯ ಹಣವನ್ನುಹೆಚ್ಚಿಸಬಹುದು. ಅಥವಾ ಇದ್ದುದ್ದನ್ನೇ ಮುಂದುವರೆಸಬಹುದು. ಹಾಗಾಗಿ ಯಾರು ಯಾರು ಫಲಾನುಭವಿಗಳಾಗಿದ್ದೀರೋ ಅವರಿಗೆ ಹಣ ಜಮೆಯಾಗಲಿದೆ.