PM kisan money credit on 28th February : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಅತೀ ಶೀಘ್ರದಲ್ಲಿ ಹಣ ಜಮೆಯಾಗಲಿದೆ.
ಹೌದು, ಇದೇ ತಿಂಗಳು ಫೆಬ್ರವರಿ 28 ರಂದು ಪಿಎಂ ಕಿಸಾನ್ ಯೋಜನೆಯ ಹಣ ರೈತರ ಖಾತೆಗೆ ಜಮೆಯಾಗಲಿದೆ.
ಇದುವರೆಗೆ ಕೇಂದ್ರ ಸರ್ಕಾರ 15 ಕಂತುಗಳನ್ನುರೈತರಿಗೆ ಬಿಡುಗಡೆ ಮಾಡಿದ್ದು, ಇದೀಗ 16 ನೇ ಕಂತಿನ ಹಣ ಇದೇ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುತ್ತದೆ. ಅಂದರೆ ವರ್ಷಕ್ಕೆ 6 ಸಾವಿರ ರೂಪಾಯಿ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು.ತಮಗೆಲ್ಲಾ ಗೊತ್ತಿದ್ದ ಹಾಗೆ ಇಲ್ಲಿಯವರೆಗೆ 15 ಕಂತುಗಳ ರೈತರ ಖಾತೆಗೆ ಹಣ ಜಮೆ ಮಾಡಲಾಗಿದೆ. ಈಗ 16ನೇ ಕಂತಿನ ಹಣ ಜಮೆಯಾಗಲಿದೆ.
ಈ ಹಿಂದೆ ಸರ್ಕಾರ ನವೆಂಬರ್ 15ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿತ್ತು. ಈಗ ಸರ್ಕಾರ ಫೆಬ್ರವರಿ 28 ರಂದು ದೇಶಾದ್ಯಂತ ಎಲ್ಲಾ ರೈತರಿಗೆ 16ನೇ ಕಂತಿನ ಹಣ ಬಿಡುಗಡೆ ಮಾಡಲಿದೆ. ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆಯ ಮೊದಲ ಕಂತು ಏಪ್ರೀಲ್ – ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆಯಾಗದೆ. ಆಗಸ್ಟ್ – ನವೆಂಬರ್ ತಿಂಗಳಲ್ಲಿ ಎರಡನೇ ಕಂತು ಜಮೆಯಾಗಲಿದೆ. ಅದೇ ರೀತಿ ಡಿಸೆಂಬರ್ – ಮಾರ್ಚ್ ತಿಂಗಳ ಮಧ್ಯದಲ್ಲಿ ಮೂರನೇ ಕಂತು ಜಮೆಯಾಗಲಿದೆ.
PM kisan money credit on 28th February : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಯಾರು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ರೈತರು ಭಾರತದ ನಿವಾಸಿಯಾಗಿರಬೇಕು. ರೈತರ ಹೆಸರಿಗೆ 2 ಎಕರೆ ಜಮೀನು ಇರಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ರೈತರು ತಮ್ಮ ಹೆಸರನ್ನು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿರಬೇಕು. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯು ಸರ್ಕಾರಿ ನೌಕರರಾಗಿರಬಾರದು. ಇದರೊಂದಿಗೆ ಆ ಕುಟುಂಬದ ಯಾವ ಸದಸ್ಯರೂ ಸರ್ಕಾರಿ ನೌಕರರಾಗಿರಬಾರದು. ತೆರಿಗೆ ಪಾವತಿಸುವವರಾಗಿರಬಾರದು. ಪಿಂಚಣಿ ಸೌಲಭ್ಯ ಪಡೆಯುವವರಾಗಿಬಾರದು. ಈ ಮೇಲಿನ ಅರ್ಹತೆ ಹೊಂದಿದ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಲಾಭ ಸಿಗಲಿದೆ.
ಪಿಎಂ ಕಿಸಾನ್ ಯೋಜನೆ ಎಂದರೇನು? (What is PM Kisan Scheme)
ಪಿಎಂ ಕಿಸಾನ್ ಯೋಜನೆಯನ್ನು 2018 ರಲ್ಲಿ ಆರಂಭಿಸಲಾಯಿತು. ಬಡ ರೈತರಿಗೆ ಆರ್ಥಿಕವಾಗಿ ಸಹಾಯವಾಗಲೆಂಬ ಉದ್ದೇಶದಿಂದ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲಾಯಿತು.
ಇದನ್ನೂ ಓದಿ : Crop loan waive money: ಸಾಲ ಮನ್ನಾ ಹಣ ಬಿಡುಗಡೆ 2024
ಹೌದು, ಈ ಯೋಜನೆಯು ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿಯೇ ಅತೀ ಪ್ರಸಿದ್ಧಿ ಹೊಂದಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ರೈತರಿಗೆ ಪ್ರತಿ ವರ್ಷ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿಯನ್ನು ರೈತರಿಗೆ ಜಮೆ ಮಾಡಲಾಗುವುದು.
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಇಲ್ಲೇ ಚೆಕ್ ಮಾಡಿ? (Check your PM Kisan EKYC)
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಹೆಸಿರಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಓಟಿಪಿ ಬೇಸಡ್ ಇಕೆವೈಸಿ ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನೀವು ಒಂದು ವೇಳೆ ಇಕೆವೈಸಿ ಮಾಡಿಸಿದ್ದರೆ EKYC is Already Done ಎಂಬ ಮೆಸೆಜ್ ನಿಮಗೆ ಕಾಣಿಸುತ್ತದೆ.
ಇಕೆವೈಸಿ ಮಾಡಿಸದವರು ಏನು ಮಾಡಬೇಕು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳುಇನ್ನೂ ಇಕೆವೈಸಿ ಮಾಡಿಸದಿದ್ದರೆ ಹಾಗೂ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತಿಲ್ಲವಾದರೆ ನೀವು ನಿಮ್ಮ ಹತ್ತಿರದ ಸಿಎಸ್.ಸಿ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು.
ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಬಹುದೇ? (PM kisan Ekyc can we do in mobile)
ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿಯೂ ಇಕೆವೈಸಿ ಮಾಡಿಸಬಹುದು. ಹೌದು, ಇಕೆವೈಸಿ ಮಾಡಿಸಿಲ್ಲವಾದಲ್ಲಿ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಓಟಿಪಿ ಬೇಸಡ್ ಇಕೆವೈಸಿ ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಇಕೆವೈಸಿ ಮಾಡಿಕೊಳ್ಳಬಹುದು.
ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ? (Pm kisa village wise list)
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರು ಗ್ರಾಮವಾರು ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಆಸಕ್ತ ರೈತರು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕದ ರೈತರು ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಜಿಲ್ಲೆಗೆ ಸಂಬಂಧಿಸಿದ್ದೀರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿಯೂ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ಹೆಸರು ಆರ್ಡರ್ ವೈಸ್ ಇರುತ್ತದೆ. ಅಂದರೆ ಎ ದಿಂದ ಆರಂಭವಾಗುತ್ತದೆ. ಹಾಗಾಗಿ ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನುನೋಡಿಕೊಂಡು ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಬಹುದು.
ಯಾವ ಕಂತಿನಲ್ಲಿ ಎಷ್ಟು ರೈತರಿಗೆ ಹಣ ಜಮೆ ಮಾಡಲಾಗಿದೆ?
ಮೊದಲ ಕಂತಿನಲ್ಲಿ 3 ಕೋಟಿಗೂ ಅಧಿಕ ರೈತರ ಖಾತೆಗೆ ಹಣ ಜಮೆ ಮಾಡಲಾಗಿತ್ತು. ಎರಡನೇ ಕಂತಿನಲ್ಲಿ 6 ಕೋಟಿಗೂ ಅದಿಕ ರೈತರ ಖಾತೆಗೆ ಹಣ ಜಮೆ ಮಾಡಲಾಯಿತು. ಮೂರು, ನಾಲ್ಕು ಕಂತಿನಲ್ಲಿ 8 ಕೋಟಿ ಗೂ ಅಧಿಕ ರೈತರ ಖಾತೆಗೆ ಹಣ ಜಮೆ ಮಾಡಲಾಯಿತು. ಅದೇ ರೀತಿ ಐದು, ಆರು ಹಾಗೂ ಏಳನೇ ಕಂತಿನಲ್ಲಿ 10 ಕೋಟಿಗೂ ಅಧಿಕ ರೈತರಿಗೆ ಹಣ ಜಮೆಯಾಗಿತ್ತು. ಎಂಟು, ಒಂಬತ್ತು, ಹತ್ತು ಹನ್ನೊಂದು ಕಂತಿನಲ್ಲಿ 11 ಕೋಟಿಗೂ ಅಧಿಕ ರೈತರಿಗೆ ಹಣ ಜಮೆಯಾಯಿತು. ಆದರೆ ನಂತರ ಇಕೆವೈಸಿ ಕಡ್ಡಾಯಗೊಳಿಸಲಾಯಿತು. ಹಾಗಾಗಿ ಹಲವಾರು ರೈತರುಈ ಯೋಜನೆಯಿಂದ ವಂಚಿತಗೊಂಡರು.
ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನ ಜನರು ನೋಂದಣಿ ಮಾಡಿಸಿಕೊಂಡಿದ್ದರಿಂದ ದಾಖಲೆಗಳನ್ನು ಪರಿಶೀಲಿಸಿ ಹಲವಾರು ರೈತರನ್ನು ಕೈಬಿಡಲಾಯಿತು. 12 ಹಾಗೂ ಹದಿಮೂರನೇ ಕಂತಿನಲ್ಲಿ 8 ಕೋಟಿಗೂ ಅಧಿಕ ರೈತರಿಗೆ ಹಣ ಜಮೆ ಮಾಡಲಾಯಿತು. ಅದೇ ರೀತಿ 15ನೇ ಕಂತಿನಲ್ಲಿ 9 ಕೋಟಿಗೂ ಅಧಿಕ ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು.