Pm kisan new list : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೊಸ ಪಟ್ಟಿಈಗ ಬಿಡುಗಡೆಯಾಗಿದೆ. ಹೌದು, ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಮುಂದಿನ 18 ನೇ ಕಂತಿನ ಹಣ ಜಮೆ ಆಗಲಿದೆ.
ಹಾಗಾದರೆ ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ? ಯಾವಾಗ ಜಮೆಯಾಗಲಿದೆ? ಎಷ್ಟು ಹಣ ಜಮೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Pm kisan new list ಪಿಎಂ ಕಿಸಾನ್ ಯೋಜನೆಯ ಹಣ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ?
ಪಿಎಂ ಕಿಸಾನ್ ಯೋಜನೆಯ ಹಣ ಇಲ್ಲಿಯವರೆಗೆ ಒಟ್ಟು 17 ಕಂತುಗಳು ರೈತರ ಖಾತೆಗೆ ಜಮೆಯಾಗಿದೆ. ಈಗ 18ನೇ ಕಂತಿನ ಹಣ ಜಮೆಯಾಗಲಿದೆ. ಹೌದು, ಸೆಪ್ಟೆಂಬರ್ ತಿಂಗಳಲ್ಲಿ 18ನೇ ಕಂತಿನ ಹಣ ಜಮೆಯಾಗಲಿದೆ.
ಪಿಎಂ ಕಿಸಾನ್ ಯೋಜನೆಗೆ ಯಾರು ಯಾರು ನೋಂದಣಿ ಮಾಡಿಸಿದ್ದಾರೋ ಅವರಿಗೆಲ್ಲರಿಗೂ ಹಣ ಜಮಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ.ಈಗ ಕೆಲವು ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇನ್ನೂ ಕೆಲವು ರೈತರ ಹೆಸರುಗಳನ್ನು ರದ್ದುಗೊಳಿಸಲಾಗಿದೆ. ಹಾಗಾಗಿ ಯಾರ ಯಾರ ಹೆಸರು ಪಟ್ಟಿಯಲ್ಲಿದೆ ಎಂಬುದನ್ನು ಮೊಬೈಲ್ ನಲ್ಲೇ ಮಾಡಬಹುದು.
Pm kisan new list ಪಿಎಂ ಕಿಸಾನ್ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹೊಸ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನಿಮ್ಮ ಹೆಸರು ನೀವು ಚೆಕ್ ಮಾಡಿಕೊಳ್ಳಬಹುದು.
Pm kisan new list ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಬೇಕಾಗುವ ಅರ್ಹತೆಗಳು ಯಾವುವು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇರಬೇಕು. ಹೌದು, ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತಿ ಅಥವಾ ಪತ್ನಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : Village Land map ನಿಮ್ಮೂರಿನ ಎಲ್ಲಾ ಜಮೀನುಗಳ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ 2024
ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.
Pm kisan new list ಪಿಎಂ ಕಿಸಾನ್ ಯೋಜನೆಗೆ ಅರ್ಹತೆಯೊಂದಿಗೆ ಎಲ್ಲಾ ದಾಖಲೆಯಲ್ಲಿ ಹೆಸರು ಒಂದೇ ರೀತಿಯಾಗಿರಬೇಕು
ರೈತರ ಹೆಸರು ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೂ ಸಹ ಮುಂದಿನ 18ನೇ ಕಂತು ರೈತರಿಗೆ ಎಲ್ಲಾ ಅರ್ಹತೆಯಿದ್ದರೂ ಸಹ ಜಮೆಯಾಗುವುದಿಲ್ಲ. .
Pm kisan new list ಪಿಎಂ ಕಿಸಾನ್ ರೈತರ ಇಕೆವೈಸಿ ಕಡ್ಡಾಯವಾಗಿ ಆಗಿರಬೇಕು?
ಪಿಎಂ ಕಿಸಾನ್ ಯೋಜನೆಯ 18ನೇ ಕಂತು ಪಡೆಯಲು ರೈತರು ಇಕೆವೈಸಿ ಕಡ್ಡಾಯವಾಗಿ ಮಾಡಿಸಿರಬೇಕು. ಇಲ್ಲದಿದ್ದರೆ ಅಂತಹ ರೈತರಿಗೆ ಹಣ ಜಮೆಯಾಗುವುದಿಲ್ಲ. ನಿಮ್ಮದು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಇಕೆವೈಸಿ ಚೆಕ್ ಮಾಡಲು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿದಾಗ ಇಕೆವೈಸಿ ಸಕ್ಸೆಸ್ಫಲಿ ಡನ್ ಎಂಬ ಸಂದೇಶ ಕಾಣಿಸುತ್ತದೆ. ಇಕೆವೈಸಿ ಆಗದಿದ್ದರೆ ಕೂಡಲೇ ನಿಮ್ಮ ಹತ್ತಿರದ ಸಿ.ಎಸ್.ಸಿ ಕೇಂದ್ರಗಳಲ್ಲಿ ಮಾಡಿಕೊಳ್ಳಬಹುದು.