Pm kisan scheme : ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಇನ್ನೂ ಮುಂದೆ ಈ ಕೆಳಗಿನ ಪಟ್ಟಿಯಲ್ಲಿರುವ ರೈತರಿಗಷ್ಟೇ ಜಮೆಯಾಗಲಿದೆ.
ಹೌದು, ರೈತ ಬಾಂಧವರೇ 18ನೇ ಕಂತಿನ ಹಣ ಬಿಡುಗಡೆಯಾಗುವುದಕ್ಕಿಂತ ಮುಂಚಿತವಾಗಿ ನೀವು ನಿಮ್ಮ ಹೆಸರು ಈಗಲೇ ಪರಿಶೀಲಿಸಿಕೊಳ್ಳಿ. ಹಾಗೂ ಕೆಳಗಡೆ ನೀಡಲಾದ ಎಲ್ಲಾ ಅರ್ಹತೆ ನೀವು ಹೊಂದಿದ್ದೀರೋ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದರೊಂದಿಗೆ ಏನೇನು ಮಾಹಿತಿ ಇರಬೇಕು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
Pm kisan scheme ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿರುವುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಸೆಲೆಕ್ಟ್ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು.ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬೇಕು.
Pm kisan scheme ಪಿಎಂ ಕಿಸಾನ್ ಪಟ್ಟಿಯಲ್ಲಿ ಹೆಸರಿರುವುದರೊಂದಿಗೆ ಮತ್ತೇ ಯಾವ ಯಾವ ಮಾಹಿತಿ ಇರಬೇಕು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಈಗ ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿರಬೇಕು.ಅಂದರೆ ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತ್ರಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : Bara parihara payment ಇಂದಿನಿಂದ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬರ ಪರಿಹಾರ ಜಮೆ 2024
ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.
Pm kisan scheme ನಿಮ್ಮ ದಾಖಲೆಯಲ್ಲಿ ನಿಮ್ಮಹೆಸರು ಒಂದೇ ರೀತಿಯಾಗಿದೆಯೇ?
ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಲ್ಲಿ ರೈತರ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೂ ಮುಂದಿನ ಕಂತು ರೈತರ ಖಾತೆಗೆ ಜಮೆಯಾಗುವುದಿಲ್ಲ.
Pm kisan scheme ಇಕೆವೈಸಿ ಕಡ್ಡಾಯವಾಗಿ ಆಗಿರಬೇಕು?
ಪಿಎಂ ಕಿಸಾನ್ ಯೋಜನೆಯ 18ನೇ ಕಂತು ಪಡೆಯಲು ರೈತರು ಇಕೆವೈಸಿ ಕಡ್ಡಾಯವಾಗಿ ಮಾಡಿಸಿರಬೇಕು. ಇಲ್ಲದಿದ್ದರೆ ಅಂತಹ ರೈತರಿಗೆ ಹಣ ಜಮೆಯಾಗುವುದಿಲ್ಲ. ನಿಮ್ಮದು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಇಲ್ಲೇ ಚೆಕ್ ಮಾಡಿಕೊಳ್ಳಬಹುದು.
Pm kisan scheme ಇಕೆವೈಸಿ ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಓಟಿಪಿ ಬೇಸಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಒಂದು ಸಂದೇಶ ಕಾಣಿಸುತ್ತದೆ. ನೀವು ಒಂದು ವೇಳೆ ಇಕೆವೈಸಿ ಮಾಡಿಸಿದ್ದರೆ EKYC is Already Done ಎಂಬ ಮೆಸೆಜ್ ಕಾಣಿಸುತ್ತದೆ.
ನೀವು ಇಕೆವೈಸಿ ಮಾಡಿಸಿಲ್ಲವಾದಲ್ಲಿ ಆಧಾರ್ ಕಾರ್ಡ್ ನಂಬರ್ ನಮೂದಿಸಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇಕೆವೈಸಿ ಮಾಡಿಕೊಳ್ಳಬಹುದು.
ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿ ಇಕೆವೈಸಿ ಮಾಡಿಸಿಕೊಳ್ಳಬಹುದು.