Pm kisan status check : ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ದೇಶಾದ್ಯಂತ 9.8 ಕೋಟಿ ರೈತರ ಖಾತೆಗೆ ಒಟ್ಟು 22 ಸಾವಿರ ಕೋಟಿ ರೂಪಾಯಿ ಹಣ ಜಮೆಯಾಗಿದೆ.
ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಮೋದಿ ಇದೇ ಸಂದರ್ಭದಲ್ಲಿ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ಬಿಡುಗಡೆ ಮಾಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕಿಸಾನ್ ಸಮ್ಮಾನ್ ಜಾರಿಗೆ ಬಂದು 6 ವರ್ಷ ಪೂರ್ಣಗೊಂಡಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗಳಿಗೆ 3.5 ಲಕ್ಷ ಕೋಟಿ ರೂಪಾಯಿಗಳನ್ನು ಜಮಾ ಮಾಡಲಾಗಿದೆ ಎಂದಿದ್ದಾರೆ.
Pm kisan status check ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ ನೋಡಿ
ಹೌದು,ರೈತರು ಪಿಎಂ ಕಿಸಾನ್ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ Enter Registration No ನಲ್ಲಿ ರೈತರು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಸಂದೇಶ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.
Pm kisan status check ಬಹುತೇಕ ರೈತರಿಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನೆನಪಿರುವುದಿಲ್ಲ. ಯಾರಿಗೆ ನೋಂದಣಿ ಸಂಖ್ಯೆ ನೆನಪಿಲ್ಲವೋ ಆ ರೈತರು ಅಲ್ಲಿ ಕಾಣುವ Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Aadhaar Number ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ- 2024
ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.
Pm kisan status check ಇಕೆವೈಸಿ ಆದ ರೈತರಿಗೆ ಖಾತೆಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ರೈತರು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.
Pm kisan status check ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
Pm kisan status check ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.