Pmkisan amount release today ಇಂದು ಈ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ 2025

Written by Admin

Published on:

Spread the love

Pmkisan amount release today : ಪಿಎಂ ಕಿಸಾನ್ ಫಲಾನುಭವಿಗಳಿಗೆ ಗುಡ್ ನ್ಯೂಸ್. ಇನ್ನೂ ಕೆಲವೇ ಕ್ಷಣಗಳಲ್ಲಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ ಜಮೆಯಾಗಲಿದೆ ಹೌದು, ಇಂದು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಇಂದು ಬೆಳಗ್ಗೆ 11 ಗಂಟೆಗೆ ರೈತರ ಖಾತೆಗೆ ಜಮೆಯಾಗಲಿದೆ.

ಇದೇ ಫೆಬ್ರವರಿ 24 ರಂದು ಬೆಳಗ್ಗೆ 11 ಗಂಟೆಗೆ ದೇಶದ 9 ಕೋಟಿ ರೈತರ ಖಾತೆಗೆ ಏಕಕಾಲದಲ್ಲಿ ಪಿಎಂ ಕಿಸಾನ್ ಹಣವನ್ನು ಜಮೆ ಮಾಡಲಾಗುವುದು. ಹಾಗಾದರೆ ಯಾವ ಯಾವ ರೈತರ ಖಾತೆಗೆ ಪಿಎಂ ಕಿಸಾನ್ ಹಣವನ್ನು ಜಮೆ ಮಾಡಲಾಗುವುದು. ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯನ್ನು ಇಲ್ಲೇ ಚೆಕ್ ಮಾಡಬಹುದು.

Pmkisan amount release today ತಮಗೆಲ್ಲಾ ಗೊತ್ತಿದ್ದ ಹಾಗೆ ಪಿಎಂ ಕಿಸಾನ್ ಯೋಜನೆಯನ್ನು 2019 ರಲ್ಲಿ ದೇಶದ ಬಡ ರೈತರಿಗಾಗಿ ಜಾರಿಗೆ ತರಲಾಗಿದೆ.  ಇಲ್ಲಿಯವರೆಗೆ ಪಿಎಂ ಕಿಸಾನ್ ಫಲಾನುಭವಿಗಳಿಗೆ 18 ಕಂತುಗಳಲ್ಲಿ ಒಟ್ಟು 36 ಸಾವಿರ ರೂಪಾಯಿ ಜಮೆಯಾಗಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು ಕಳೆದ ಅಕ್ಟೋಬರ್ 5 ರಂದು ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಈಗ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಬಿಹಾರ್ ರಾಜ್ಯದ ಭಾಗಲಪುರದಲ್ಲಿ ನಡೆಯುವ ರೈತರ ಕಾರ್ಯಕ್ರಮದಲ್ಲಿ ಬಿಡುಗಡೆಮಾಡಲಾಗುವುದು.  ದೇಶದ ಪ್ರಧಾನಿ ನರೇಂದ್ರ ಮೋದಿಯವರು ಡಿಬಿಟಿ ಮೂಲಕ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ದೇಶದ 9 ಕೋಟಿಗೂ ಹೆಚ್ಚಿನ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ.

Pmkisan amount release today ಪಿಎಂ ಕಿಸಾನ್ ಯೋಜನೆಯ ಹಣ ಯಾವ ಯಾವ ರೈತರಿಗೆ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಮಾತ್ರಕ್ಕೆ ಹಣ ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಅದಕ್ಕೂ ಈಗ ಕೆಲವು ಶರತ್ತುಗಳನ್ನು ಮಾಡಲಾಗಿದೆ.

ಇದನ್ನೂ ಓದಿ gruhalakshmi amount credit within a week ಒಂದು ವಾರದಲ್ಲಿ ಈ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆ – ಲಕ್ಷ್ಮೀ ಹೆಬ್ಬಾಳಕರ್ 2025

ಹೌದು, ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ಇಕೆವೈಸಿ ಮಾಡಿಸಿರಬೇಕು. ಹೌದು, ಇಕೆವೈಸಿ ಮಾಡಿಸಿದ್ದರೆ ಮಾತ್ರ  ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲಿದೆ. ಒಂದು ವೇಳೆ ನೀವು ಇಕೆವೈಸಿ ಮಾಡಿಸಿಲ್ಲವಾದರೆ ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು. ಇದರೊಂದಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಸೌಲಭ್ಯ ಸಬ್ಸಿಡಿ ಪಡೆಯಲು ಆಧಾರ್ ಸೀಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ನೀವು ಯಾವ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದೀರೋ ಆ ಬ್ಯಾಂಕಿಗೆ ಹೋಗಿ ಆಧಾರ್ ಸೀಡ್ ಮಾಡಿಸಿಕೊಳ್ಳಬೇಕು.

Pmkisan amount release today

Pmkisan amount release today ಇಕೆವೈಸಿ ಆದ ರೈತರಿಗೆ ಖಾತೆಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 

ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್  ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.  ರೈತರು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.

Pmkisan amount release today ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.

ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.

Leave a Comment