PMkisan amount will be released next week : ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 30 ರಂದು ಬಿಡುಗಡೆ ಮಾಡಲಿದ್ದಾರೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ಡಿಜಿಟಲ್ ಮೂಲಕ 9.44 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗೆಗಳಿಗೆ ನೇರವಾಗಿ ತಲಾ 2 ಸಾವಿರ ರೂಪಾಯಿ ಜಮೆಯಾಗಲಿದೆ. ಹೌದು, ಪಿಎಂ ಕಿಸಾನ್ ಜಮೆಗೆ ಕಾಯುತ್ತಿರುವ ರೈತರಿಗೆ ದೀಪಾವಳಿ ಹಬ್ಬಕ್ಕೆ ಮೊದಲು ಅರ್ಹ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
PMkisan amount will be released next week ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆ
ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ವಾರ್ಷಿಕ 6 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡುತ್ತದೆ. ಈ ಮೊತ್ತವನ್ನು ತಲಾ 2 ಸಾವಿರ ರೂಪಾಯಿಯಿಂತೆ ಮೂರು ಸಮಾನ ಕಂತುಗಳಲ್ಲಿ ರೈತರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ. ಇದೀಗ ಬಿಡುಗಡೆಯಾಗುತ್ತಿರುವುದು ಯೋಜನೆಯ 24ನೇ ಕಂತಾಗಿದ್ದು, ಪ್ರತಿಯೊಬ್ಬ ಅರ್ಹ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ.
ಅಕ್ಟೋಬರ್ 30 ರಂದು ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣವು ರೈತರ ಹಿಂಗಾರು ಕೃಷಿ ಚಟುವಟಿಕೆಗಳಿಗೆ ಅತ್ಯಂತ ಸಹಕಾರಿಯಾಗಲಿದೆ. ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಖರೀಗಿಗೆ ಆರ್ಥಿಕ ನೆರವು ಸಿಗಲಿದೆ. ಈಗಾಗಲೇ ಮುಂಗಾರು ಹಂಗಾಮು ಕೈಕೊಟ್ಟಿದ್ದರಿಂದ ನಿರಾಶೆಯಲ್ಲಿದ್ದ ರೈತರಿಗೆ ಇದೊಂದು ಸಮಸ್ಯೆಯಿಂದ ಬಳತ್ತಿರುವ ರೈತರಿಗೆ ಅಲ್ಪ ಸಮಾಧಾನ ಸಿಕ್ಕಂತಾಗುತ್ತದೆ.
PMkisan amount will be released next week ಪಿಎಂ ಕಿಸಾನ್ ಹಣ ಜಮೆಗೆ ಇಕೆವೈಸಿ ಕಡ್ಡಾಯ
ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತರು ಇಕೆವೈಸಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಂದಿನ ಕಂತು ಅಂದರೆ 24ನೇ ಕಂತಿನ ಹಣ ಜಮೆಯಾಗಬೇಕಾದರೆ ಬಯೋಮೆಟ್ರಿಕ್ ಅಥವಾ ಫೇಸ್ ಅಥಂಟಿಕೇಶನ್ ಮೂಲಕ ಇಕೆವೈಸಿ ಮಾಡಿಸುವ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ.
ಒಂದೇ ಕುಟುಂಬದವರು ಪ್ರತ್ಯೇಕ ಆಸ್ತಿ ಹೊಂದಿರುವುದು, ಪತಿ ಪತ್ನಿ, ಪ್ರಕರಣ, ಆದಾಯ ತೆರಿಗೆ ಪಾವತಿ ಒಬ್ಬರ ಹೆಸರಿನಲ್ಲೇ ಹಲವು ಆರ್.ಟಿ.ಸಿ ಜಮೀನುಗಳು ಇರುವುದು. ಪೌತಿ ಖಾತೆ ಹೀಗೆ ಹಲವು ಕಾರಣಗಳಿಂದಾಗಿ ರೈತರ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ. ಇದರೊಂದಿಗೆ ಕೆಲವು ತಾಂತ್ರಿಕ ಕಾರಣಗಳೂ ಸೇರಿಕೊಂಡಿವೆ. ಪಿಎಂ ಕಿಸಾನ್ ಯೋಜನೆಯ ಪರಿಷ್ಕೃತ ಮಾರ್ಗಸೂಚಿ ಅನ್ವಯ ಪ್ರತಿ ವರ್ಷ ಆರ್ಥಿಕ ನೆರವು ಪಡೆಯಲು ಇಕೆವೈಸಿ ಕಡ್ಡಾಯವಾಗಿದೆ.
ಇದನ್ನು ಓದಿ Today onwards five day rain ಇಂದಿನಿಂದ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಇಲ್ಲಿದೆ ಮಾಹಿತಿ
ಬಯೋಮೆಟ್ರಿಕ್ ಅಥವಾ ಫೇಸ್ ಅಥೆಂಟಿಕೇಶನ್ ಮೂಲಕ ಇಕೆವೈಸಿ ಮಾಡಬೇಕು. ರೈತರು ಸಮೀಪದ ಸಾಮಾನ್ಯ ನಾಗರಿಕ ಸೇವಾ ಕೇಂದ್ರಗಳು, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇ ಕೆವೈಸಿ ಮಾಡಿಸಬಹುದು.
PMkisan amount will be released next week ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ನೀವು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು ಆಗ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೋ ಅವರ ಹೆಸರು ಕಾಣಿಸುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭಾಗುತ್ತದೆ ಎಂಬ ಆಧಾರ್ ಮೇಲೆ ಮುಂದಿನ ನಂಬರ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬಹುದು





