Pradhanmantri krishi sinchayi ಯೋಜನೆಯಡಿ ಸಬ್ಸಿಡಿಗೆ ಅರ್ಜಿ ಆಹ್ವಾನ 2023-24

Written by Admin

Published on:

Spread the love

Pradhanmantri krishi sinchayi : 2023-24ನೇ ಸಾಲಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ  ತುಂತುರು ಮತ್ತು ಹನಿ ನೀರಾವರಿಗಾಗಿ ಅರ್ಹರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದಡಿ ತುಂತುರು ಹಾಗೂ ಹನಿ ನೀರಾವರಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ತುಂತುರು ನೀರಾವರಿಯಲ್ಲಿ ರೈತರು ಈ ಮೊದಲು 1 ಹೆಕ್ಟೇರ್ ಪಡೆದುಕೊಂಡವರು 3 ಎಕರೆಗಿಂತ ಹೆಚ್ಚಿನ ಭೂ ಹಿಡುವಳಿ ಹೊಂದಿರುವ ರೈತರು ಉಳಿದ 1 ಹೆಕ್ಟೇರ್ ತುಂತುರು ನೀರಾವರಿಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹನಿ / ತುಂತುರು ನೀರಾವರಿ ಘಟಕಗಳಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ.

Pradhanmantri krishi sinchayi subsidy
Pradhanmantri krishi sinchayi subsidy

ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಂದ ಕೃಷಿ ಯಂತ್ರೋಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಶೇ. 50 ರಷ್ಟು ಸಹಾಯಧನ ನೀಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕೆಂದು ಅವರು ತಿಳಿಸಿದ್ದಾರೆ.

Pradhanmantri krishi sinchayi ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಸಲ್ಲಿಸುವ ರೈತರು ನೀರಾವರಿ ಸೌಲಭ್ಯ ಹೊಂದಿರಬೇಕು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣಿ (ಆರ್.ಟಿ.ಸಿ) ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸಹ ಇರಬೇಕು.

Pradhanmantri krishi sinchayi  ಪಡೆಯಲು ಇರಬೇಕಾದ ಅರ್ಹತೆಗಳು

ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನ ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು. ಹಾಗೂ ಸೂಕ್ಷ್ಮ ನೀರಾವರಿ ಅಳವಡಿಸಿದ ನಂತರ ತೋಟಗಾರಿಕೆ ಬೆಳೆಗಳನ್ನೇ ಬೆಳೆಯಬೇಕು. ಫಲಾನುಭವಿಗಳು ನೀರಾವರಿ ಮೂಲವನ್ನು ಹೊಂದಿರಬೇಕು. ತನ್ನ ಸ್ವಂತ ನೀರಾವರಿ ಮೂಲ ಇಲ್ಲದಿದ್ದಲ್ಲಿ ಬೇರೆ ರೈತರನ್ನು ಈ ಸಂಬಂಧ ಒಪ್ಪಿಗೆ ಪತ್ರ  ಪಡೆದು ಸಲ್ಲಿಸಬೇಕು. ಹಾಗೂ ಸೂಕ್ಷ್ಮ ನೀರಾವರಿಗೆ ಯೋಗ್ಯವಿರುವಂತಹ ನೀರನ್ನು ಹೊಂದಿರಬೇಕು.

farmers crop
Farmer Crop growing

ಇದನ್ನೂ ಓದಿ Crop Insurance money released-2024 ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ

ಸೂಕ್ಷ್ಮ ನೀರಾವರಿ ಘಟಕಗಳು ಕಾರ್ಯನಿರ್ವಹಿಸಲು ಅವಶ್ಯವಿರುವ ವಿದ್ಯುಚ್ಯಕ್ತಿ ಅಥವಾ ಇತರೆ ಶಕ್ತಿ ಮೂಲಗಳನ್ನು ಹೊಂದಿರಬೇಕು. ಹನಿ ಅಥವಾ ತುಂತುರು ನೀರಾವರಿ ಘಟಕಗಲನ್ನು ಇಲಾಖಾ ಅನುಮೋದಿತ ಕಂಪನಿ ಸಂಸ್ಥೆಯವರಿಂದ ಮಾತ್ರ ಅಳವಡಿಸಿಕೊಳ್ಳುವುದು.

Pradhanmantri krishi sinchayi ಸಬ್ಸಿಡಿ ಯಾರಿಗೆ ಎಷ್ಟು ಸಿಗಲಿದೆ ?

ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿದ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ  ಪಂಗಡ ವರ್ಗದ ರೈತರು ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಗುರುತಿನ ಚೀಟಿ, ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಇತ್ತೀಚಿನ ಫೋಟೋ ಇರಬೇಕು.

ಇದನ್ನೂ ಓದಿ Crop Insurance Status 2023-24 ಮೊಬೈಲ್ ನಲ್ಲೇ ಚೆಕ್ ಮಾಡಿ

ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಇತರ ರೈತರಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು.

Drip irrigation subsidy

Pradhanmantri krishi sinchayi  ಯಾವ ರೈತರಿಗೆ ತುಂತುರು ಹನಿ ನೀರಾವರಿ ಸೌಲಭ್ಯ ನೀಡಲಾಗುವುದು ?

ಫ್ರೂಟ್ಸ್ ಐಡಿ ಹೊಂದಿರುವ ರೈತರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದರೊಂದಿಗೆ ಯಾರು ಮೊದಲು ಅರ್ಜಿ ಸಲ್ಲಿಸುತ್ತಾರೆ ಅವರಿಗೆ ಸೌಲಭ್ಯ ನೀಡಲಾಗುವುದು. ಹಿರಿತನದ ಆಧಾರದ ಮೇಲೆ ಸೌಲಭ್ಯ ನೀಡಲಾಗುವುದು. ಈ ಮೊದಲು ಸೌಲಭ್ಯ ಪಡೆದಿರಬಾರದು. ಅಂತಹ ರೈತರು ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಲಾಗುವುದು.

ತೋಟಗಾರಿಕೆ ಇಲಾಖೆಯಡಿಯಲ್ಲಿ ಸಿಗುವ ಸೌಲಭ್ಯಗಳಿಗೆ ತಂತುರು ನೀರಾವರಿ ಹಾಗೂ ಹನಿ ನೀರಾವರಿ ಲಿಂಕ್ ಕ್ಲಿಕ್ ಮಾಡಿ.

Leave a Comment