Rain alert ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ವಾರದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನ ತಾಪ ಹೆಚ್ಚಾಗಿ ರಾಜ್ಯದಲ್ಲಿ ಜನ ಜಾನುವಾರುಗಳು ತತ್ತರಿಸಿ ಹೋಗುತ್ತಿವೆ. ಕುಡಿಯುವ ನೀರಿಗೆ ಹಾಹಾಕಾರ ಕಾಣಿಸಿಕೊಂಡಿರುವ ಸಂದರ್ಭದಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಮುಂದಿನ 24 ಗಂಟೆಯಲ್ಲಿ ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಲಿದೆ. ಮಾರ್ಚ್ 20 ರಿಂದ ಮಾರ್ಚ್ 24 ರವರೆಗೆ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರೀಲ್ ನಲ್ಲಿಯೂ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮೇ ಅಂತ್ಯದ ವೇಳೆಗೆ ಎಲ್.ನೀನೋ ಪ್ರಭಾವ ಕಡಿಮೆಯಾಗಲಿದ್ದು, ಮುಂಬರುವ ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
Rain alert ಯಾವ ದಿನ ಎಲ್ಲಿ ಮಳೆಯಾಗಲಿದೆ?
ಮಾರ್ಚ್ 18 ರಂದು ಉತ್ತರ ಒಳನಾಡಿನ ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲಿ ಮಳೆಯಾಗಲಿದೆ.
ಮಾರ್ಚ್ 21 ರಂದು ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯಲ್ಲಿ ಮಳೆಯಾಗಲಿದೆ.
ಮಾರ್ಚ್ 20 ರಿಂದ 24 ರವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ( Rain alert )ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂಓದಿ : Mutation check here ಜಮೀನನ ಮುಟೇಶನ್ ಮೊಬೈಲ್ ನಲ್ಲೇ ನೋಡಿ 2024
ಮಾರ್ಚ್ ರಂದು ಬೆಂಗಳೂರು ಚಾಮರಾಜನಗರ ಸೇರಿದಂತೆ ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾದರೆ ಮಾರ್ಚ್ 22 ರ ಬಳಿಕ ಕರಾವಳಿ ಜಿಲ್ಲೆಗಳಲ್ಲಯೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮಾರಿತಿ ನೀಡಿದ್ದಾರೆ.
Rain Alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಮಾಹಿತಿ ಬೇಕೆ? ಈ ನಂಬರಿಗೆ ಕರೆ ಮಾಡಿ
ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಕೇಳಲು ಸಾರ್ವಜನಿಕರು 92433 45433 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, ರೈತರು ಈ ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನ ಸುತ್ತಮುತ್ತಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ. ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.
2-3 ಡಿಗ್ರಿ ಗರಿಷ್ಠ ಉಷ್ಣಾಂಶ ಹೆಚ್ಚಳ
ಬಾಗಲಕೋಟೆ, ಕೊಪ್ಪಳ ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2ರಿಂದ 3 ಡಗ್ರಿ ಸೆಲ್ಸಿಯಸ್ಸ್ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಲಿದೆ. ಭಾನುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಪ್ಪಳದಲ್ಲಿ ಅತೀ ಹೆಚ್ಚು 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
Rain alert ಬೀದರ್ ಚಿಕ್ಕಮಗಳೂರಿನಲ್ಲಿ ಮಳೆ
ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಭಾನುವಾರ ಮಳೆಯಾಗಿದ್ದು, ಬಿಸಿಲ ಧಗೆಯಿಂದ ತತ್ತರಿಸಿದ ಜನರಿಗೆ ಮಳೆ ತಂಪೆರೆಯಿತು.ಚಿಕ್ಕಮಗಳೂರು ತಾಲೂಕಿನ ಬಸವರಹಳ್ಳಿ, ಐದಳ್ಳಿ, ಮಾಕೋಡು, ಹಣಸೇಹಳ್ಳಿ ಗ್ರಾಮಗಳ ಸುತ್ತಮುತ್ತ ಭಾನುವಾರ ಮಳೆ ಸುರಿಯಿತು.
ಬೀದರ್ ನಗರ, ಬೀದರ್ ಜಿಲ್ಲೆಯ ಔರಾದ್ ಹಾಗೂ ಭಾಲ್ಕಿ ತಾಲೂಕಿನ ಹಲವೆಡೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಗಾಳಿ, ಗುಡುಗಿನೊಂದಿಗೆ ಸುಮಾರು ಒಂದು ಗಂಟೆ ಮಳೆ ಸುರಿಯಿತು. ಔರಾದ್ ನಲ್ಲಿ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಬೀದರ್ ನಗರದಲ್ಲಿ ರಸ್ತೆಗಳ ಮೇಲೆ ಚರಂಡಿ ನೀರು ಹರಿದು ಜನಸಾಮಾನ್ಯರ ಓಡಾಟಕ್ಕೆ ತೊಂದರೆಯಾಯಿತು.