rain alert 8 days : ಕರ್ನಾಟಕದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಆಗಸ್ಟ್ 2 ರಿಂದ 8 ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
rain alert 8 days ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?
ಬೆಳಗಾವಿ, ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 2 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಪಡುಯಿ ಜಿಲ್ಲೆಗಳಲ್ಲಿ ಅಲ್ಲಲಲ್ಲಿ ಭಾರಿ ಮಳೆ ಹಾಗೂ ಕೆಲವೆಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಆಗಸ್ಟ್ 2 ರಿಂದ 8 ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಾಗೂ ಕೆಲವು ಕಡೆ ನಿರಂತರ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 2 ರಂದು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ನಿರಂತರ ಗಾಳಿಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಆರಿ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 3 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಬಾಗಲಕೋಟೆ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ನಿರಂತರ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಆಗಸ್ಟ್ 4 ರಿಂದ 8 ರವರೆಗೆ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ, ಕೊಪ್ಪಳ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಉತ್ತಮ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ತುಮಕೂರು , ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಆಗಸ್ಟ್ 3 ರಿಂದ 8 ರವರೆಗೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಹಾಸನ, ಬಳ್ಳಾರಿ ಜಿಲ್ಲೆಯಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.
ಆಗಸ್ಟ್ 2 ರಿಂದ 3 ರವರೆಗೆ ಕರಾವಳಿ ಹಾಗೂ ಸಮುದ್ರದ ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿ ಅಲ್ಲಿಲ್ಲಿ 60.ಕಿ.ಮೀ ವೇಗದದವರೆಗೂ ಏರಿಕೆಯಾಗುವ ಸಾಧ್ಯತೆಯಿದೆ ಮೂನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
rain alert 8 days ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
rain alert 8 days ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Crop insurance calculation check now ಬೆಳೆ ವಿಮೆ ಹೆಕ್ಟೇರಿಗೆ ಎಷ್ಟು ಕಟ್ಟಿದರೆ ಎಷ್ಟು ಜಮೆಯಾಗುತ್ತದೆ ? ಇಲ್ಲೇ ಚೆಕ್ ಮಾಡಿ- 2026
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





