Raita Solar Shakti Mela : ರೈತರು ಕೃಷಿ ಚುಟವಟಿಕೆಗಾಗಿ ಸೌರ ಪಂಪ್ ಸೆಟ್ ಅಳವಡಿಕೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಈವರೆಗೆ ನೀಡಲಾಗುತ್ತಿದ್ದ ಶೇ. 30 ರ ಷ್ಟು ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.
ಹೌದು, ಏನಿದು Raita Solar Shakti Melaಇದರಿಂದ ರೈತರಿಗಾಗುವ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆ ಮಾಡಿ ಕೃಷಿ ಪಂಪ್ ಸೆಟ್ ಗಳಿಗೆ ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ಉದ್ದೇಶದಿಂದ ಮಾರ್ಚ್ 9 ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ರೈತ ಸೌರಶಕ್ತಿ ಮೇಳ ಆಯೋಜಿಸಲಾಗಿದೆ.
ಈ ಬಗ್ಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ , ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್ ಸೆಟ್ ಬಳಕೆಯೇ ಪರಿಹಾರ, ಹಾಗಾಗಿ ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ರೈತ ಸೌರ ಶಕ್ತಿ ಮೇಳ ಆಯೋಜಿಸಲಾಗಿದೆ ಎಂದರು.
ನವೀನ ಮಾದರಿಯ ಸೌರ ಪಂಪ್ ಸೆಟ್ ಗಳ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಗೊಂದಲ ಪರಿಹರಿಸಲು ಈ ಮೇಳ ಅತ್ಯುತ್ತಮ ವೇದಿಕೆಯಾಗಿದೆ. ಸೌರ ಪಂಪ್ ಸೆಟ್ ಸಂಪೂರ್ಣ ಮಾಹಿತಿ ಪಡೆದ ರೈತರು, ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಬಹುದು ಮತ್ತು ರೈತರು ಸೌರ ಪಂಪ್ ಸೆಟ್ ಅಳವಡಿಕೆ ಉತ್ತೇಜಿಸಲು ಈವರೆಗೆ ನೀಡಲಾಗುತ್ತಿದ್ದ ಶೇ. 30 ರಷ್ಟು ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಳ ಮಾಡಲಾಗಿದೆ. ಕುಸುಮ್ ಬಿ ಯೋಜನೆಯಡಿ ಪಂಪ್, ಮೀಟರ್ ಪೈಪ್ ಗಳನ್ನು ಸರ್ಕಾರವೇ ಒದಗಿಸಲಿದೆ ಎಂದು ಹೇಳಿದರು.
ಇದನ್ನೂ ಓದಿ : Annabhagya yojaneya status – 2024 ಮೊಬೈಲ್ ನಲ್ಲೇ ಚೆಕ್ ಮಾಡಿ
ಸೌರಶಕ್ತಿ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ಕುಸುಮ್ ಬಿ. ಯೋಜನೆಯ ಅನುಷ್ಠಾನಕ್ಕೆಒತ್ತು ನೀಡುತ್ತಿದೆ. ನೂತನ ಮಾದರಿಯ ಸೌರ ಪಂಪ್ ಸೆಟ್ ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್ ಸೆಟ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರೈತರು ತಮ್ಮ ಜಮೀನುಗಳಲ್ಲಿ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದರು.
Raita Solar Shakti Mela ಸಿದ್ದರಾಮಯ್ಯರಿಂದ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 9 ರ ಸಂಜೆ 4 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ಕುಸುಮ್ ಸಿ ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳಲ್ಲಿರುವ ವಿವಿಧ ವೋಲ್ಟೇಜ್ ವರ್ಗಗಳ ಹೊಸ ಸಬ್ ಸ್ಟೇಶನ್ ಗಳಿಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಜೆ ಹಾಜರಿದ್ದರು.
Mela ಸೌರಶಕ್ತಿ ಮೇಳದಲ್ಲಿ ಏನೇನಿರಲಿದೆ?
ರಾಜ್ಯದ ನಾನಾ ಭಾಗಗಳಿಂದ ಬರುವ ರೈತರಿಗೆ ಸೌರ ಪಂಪ್ ಸೆಟ್ಗಳ ಬಗ್ಗೆ ಮಾಹಿತಿ ನೀಡಲು ಮೇಳದಲ್ಲಿ ವ್ಯವಸ್ಥೆ ವಿವಿಧ ಸೌರ ವಿದ್ಯುತ್ ಉತ್ಪನ್ನಗಳ ಮಳಿಗೆಗಳು ಇರಲಿವೆ.
ಸೌರ ಪಂಪ್ ಸೆಟ್ ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನುರೈತರು ನೇರವಾಗಿ ನೋಡುವ ಅವಕಾಶ ಸಿಗಲಿದೆ.
ಇದನ್ನೂ ಓದಿ : Pradhanmantri krishi sinchayi ಯೋಜನೆಯಡಿ ಸಬ್ಸಿಡಿಗೆ ಅರ್ಜಿ ಆಹ್ವಾನ 2023-24
ಸೋಲಾರ್ ಪಂಪ್ ಸೆಟ್ ಅಳವಡಿಸಿಕೊಳ್ಳುವ ರೈತರಿಗಾಗಿಯೇ ಆನ್ಲೈನ್ ಪೋರ್ಟಲ್ ವಿನ್ಯಾಸ.
ಮೇಳದಲ್ಲಿಸೌರ ಮಿತ್ರ ಆ್ಯಪ್ ಬಿಡುಗಡೆ ಮಾಡಲಾಗುತ್ತಿದೆ. ಆ್ಯಪ್ ಮೂಲಕವೂ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ರೈತರಿಗಾಗಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸೌರ ಪಂಪ್ ಸೆಟ್ ಗಳ ಉತ್ಪಾದಕರು, ಮಾರಾಟಗಾರರು, ಬ್ಯಾಂಕ್ ಅಧಿಕಾರಿಗಳು, ಕೃ ಷಿ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡು ರೈತರಿಗೆ ಮಾಹಿತಿ ಒದಗಿಸಲಿದ್ದಾರೆ.
ರಾಜ್ಯದಲ್ಲಿ 34 ಲಕ್ಷ ಕೃಷಿ ಪಂಪ್ ಸೆಟ್ ಗಳಿವೆ. ಈ ವರ್ಷ 40 ಸಾವಿರ ಪಂಪ್ ಸೆಟ್ ಗುರಿ ಇಟ್ಟುಕೊಂಡಿದ್ದು, ಪ್ರತಿ ವರ್ಷ ಸೋಲಾರ್ ಪಂಪ್ ಸೆಟ್ ಗಳ ಸಂಖ್ಯೆ ಹೆಚ್ಚಿಸಿ ವಿದ್ಯುತ್ ಹೊರೆ ತಪ್ಪಿಸೋದು ನಿಮ್ಮ ಗುರಿಯಾಗಿದೆ ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕುಸುಮ್ ಬಿ ವೆಬ್ಸೈಟ್ ಗೆ ಸಂಪರ್ಕಿಸಬಹುದು.