Red gram purchase date extended ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಮೇ 31ರ ವರೆಗೆ ಕಾಲಾವಕಾಶ

Written by Admin

Updated on:

Spread the love

Red gram purchase date extended : ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಗೆ ಮೇ 31 ರವರೆಗೆ ಕಾಲಾವಕಾಶ ನೀಡಲಾಗಿದೆ.

ಹೌದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ತೊಗರಿ ಖರೀದಿಗೆ ಈಗಾಗಲೆ ನೋಂದಣಿ ಮಾಡಿಕೊಂಡು ಮಾರಾಟ ಮಾಡದೆ ಇರುವ 15,067  ರೈತರಿಂದ ಭೌತಿಕ ತೊಗರಿ ಖರೀದಿ ಮಾಡಲು ಕಾಲಾವಧಿಯನ್ನು ಮೇ 1 ರಿಂದ 31ರ ವರೆಗೆ ಅಂತಿಮವಾಗಿ ವಿಸ್ತರಿಸಿದ್ದು, ರೈತರು ಲಾಭ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ಬತೊಗರಿಗೆ 7,550 ರೂಪಾಯಿ ನಿಗದಿಪಡಿಸಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ 450 ರೂಪಾಯಿ ಸೇರಿ ಒಟ್ಟು ಪ್ರತಿ ಕ್ವಿಂಟಾಲ್‌ಗೆ 8,000 ರೂಪಾಯಿ ದರದಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ಮತ್ತು ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಲ್ ಎಫಎಕ್ಯೂ ಗುಣಮಟ್ಟದ ತೊಗರಿಯನ್ನು ಖರೀದಿಸಲಾಗುತ್ತಿದೆ.

Red gram purchase date extended

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ  ಮೂಲಕ ಜಿಲ್ಲೆಯಲ್ಲಿ ಒಟ್ಟು 189 ಖರೀದಿ ಕೇಂದ್ರಗಳನ್ನು ತೆರೆದು ರೈತರಿಂದ ಎಫ್.ಎ.ಕ್ಯೂ  ಗುಣಮಟ್ಟದ ತೊಗರಿಯನ್ನು ಖರೀದಿ ಮಾಡಲಾಗುತ್ತಿದೆ ಎಂದು ಡಿ.ಸಿ. ತಿಳಿಸಿದ್ದಾರೆ.

ಇದನ್ನೂ ಓದಿ Gruhalakshmi pending amount release ಈ ವಾರದಲ್ಲಿ ಗೃಹಲಕ್ಷ್ಮೀ ಪೆಂಡಿಂಗ್ ಹಣ ಹಣ ಜಮೆ 2025

ಇನ್ನು ಇದುವರೆಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಸಂಸ್ಥೆಯವರು 33,518 ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯವರು 14,730 ರೈತರು ನೊಂದಣಿ ಕೈಗೊಂಡಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟಾರೆ 48,248 ರೈತರು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 33,181  ರೈತರಿಂದ 4,98,303 ಕ್ವಿಂಟಾಲ್ ತೊಗರಿಯನ್ನು ಖರೀದಿಸಲಾಗಿರುತ್ತದೆ. ನೋಂದಣಿ ಮಾಡಿಕೊಂಡು ಮಾರಾಟ ಮಾಡದೆ ಬಾಕಿ ಉಳಿದುಕೊಂಡ 15,067 ರೈತರಿಂದ ಭೌತಿಕ ತೊಗರಿ ಖರೀದಿಗೆ ಕಾಲಾವಧಿಯನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ.

ಕಳೆದ ಸಾಲಿನಲ್ಲಿ ಹಾಗೂ ಹಾಗೂ ಪ್ರಸಕ್ತ ವರ್ಷ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ.

ಹೌದು, ಚಿತ್ರದುರ್ಗ , ಕೋಲಾರ ಹಾಗೂ ಇತರ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ. ಯಾವ ಜಿಲ್ಲೆಯ ಎಷ್ಟು ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

Red gram purchase date extended ಕೋಲಾರ ಜಿಲ್ಲೆಯಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ 5.78 ಕೋಟಿ ಜಮೆ

ಕೋಲಾರ ಜಿಲ್ಲೆಯಲ್ಲಿ ಮಾರ್ಚ್ ಹಾಗೂ ಮೇ ತಿಂಗಳಲ್ಲಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ತೋಟಗಾರಿಕೆ ಬೆಳೆ ಹಾನಿಗೆ ಹಾನಿ ಸಂಬಂಧ ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆನಡೆಸಿದ್ದರು. ಅದರಂತೆ ಜಿಲ್ಲೆಯಲ್ಲಿ ಒಟ್ಟು 4956 ಹೆಕ್ಟೇರ್ ಪ್ರದೇಶದಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಮಾವು, ಸೀಬೆ, ಪಪ್ಪಾಯ, ಗೋಡಂಬಿ ಹಾಗೂ ಇತರೆ ಹಣ್ಣುಗಳು ಮತ್ತು 672 ಹೆಕ್ಟೇರ್ ಪ್ರದೇಶದಲ್ಲಿ ವಾರ್ಷಿಕ ತೋಟಗಾರಿಕೆ ಬೆಳೆಗಳಾದ ಟೋಮ್ಯಾಟೋ, ಕಲ್ಲಂಗಡಿ, ಬಾಳೆ, ಎಲೆಕೋಸು, ಬೀಟ್ ರೂಟ್, ಕ್ಯಾಪ್ಸಿಕಂ, ಹಸಿರು ಮೆಣಸಿನಕಾಯಿ ಹಾಗೂ ಇತರೆ ತರಕಾರಿ  ಹಾಗೂ  ಹೂವಿನ ಬೆಳೆಗಳ ನಷ್ಟ ವರದಿಯನ್ನು ಸಂಬಂಧಿಸಿದ ತಹಶೀಲ್ದಾರ ಕಚೇರಿಗೆ ಸಲ್ಲಿಸಲಾಗಿತ್ತು.  ಈ ರೈತರ ವಿವರಗಳನ್ನುಗ್ರಾಮ ಲೆಕ್ಕಿಗರ ಲಾಗಿನ್ ಮೂಲಕ ಪರಿಹಾರ ತಂತ್ರಾಂಶದಲ್ಲಿಮಾಹಿತಿ ಅಪ್ಲೋಡ್ಮಾಡಲಾಗಿತ್ತು.

ಸರ್ಕಾರದಿಂದ ಜಿಲ್ಲೆಗೆ ಮೊದಲನೇ ಕಂತಿನ 5.78 ಕೋಟಿರ ರೂಪಾಯಿ ಪರಿಹಾರ ಹಣ ಬಿಡುಗಡೆಯಾಗಿದೆ. ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರಿಗೆ 22500 ರೂಪಾಯಿ, ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 17000 ರೂಪಾಯಿ ಯನ್ನು ಮದಲ ಕಂತಿನಲ್ಲಿ ಒಟ್ಟು 4264 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Red gram purchase date extended ನಿಮಗೆಷ್ಟು ಬೆಳೆ ಹಾನಿ ಪರಿಹಾರ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ಹಾನಿಯಾದ ರೈತರು ತಮಗೆಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಅಲ್ಲಿ ರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.ಮಾಡಿಕೊಳ್ಳಬೇಕು. ಸೆಲೆಕ್ಟ್ ಕಾಲಾಮಿಟಿಟೈಪ್ ನಲ್ಲಿ ಫ್ಲಡ್ ಹಾಗೂಸ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ  ಸಾಕು, ನಿಮಗೆಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

Leave a Comment