Six days rain alert from today : ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 23 ರಿಂದ 28 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕರ್ನಾಟಕದ ಮಲೆನಾಡು, ಬೆಂಗಳೂರು, ಹಳೆ ಮೈಸೂರು ಹಾಗೂ ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಯಾವ ಯಾವ ದಿನ ಮಳೆಯಾಗಲಿದೆ ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ನವೆಂಬರ್ 23 ರಂದು ಸೋಮವಾರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಚಿಕ್ಕಮಗಳೂರು,ಚಿತ್ರದುರ್ಗ ಉತ್ತರ ಕನ್ನಡ, ಉಡುಪಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ.
Six days rain alert from today ನವೆಂಬರ್ 24 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನ ರಲಿದೆ.
ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕಲಬುರಗಿ, ಯಾದಗಿರಿ, ಬೀದರ್, ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ ಕೊಪ್ಪಳ, ಹಾವೇರಿ ಜಿಲ್ಲೆಗಳಲ್ ಬಿಸಿಲಿನ ವಾತಾವರಣ ಇರಲಿದೆ.
Six days rain alert from today ನವೆಂಬರ್ 25 ರಂದು ಕೊಡಗು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಘು ಗುಡುಗು ಸಹಿತ ಲಘು ಮಳೆಯಾಗಲಿದೆ.
ನವೆಂಬರ್ 26 ರಂದು ಚಿಕ್ಕಮಗಳೂರು, ಮಂಡ್ಯ, ಮೈಸೂರು, ಹಾಸನ, ಕೊಡಗು ಜಿಲ್ಲೆಯ ಒಂದೆರಡು ಕಡೆ ಲಘು ಮಳೆಯಾಗುವ ಸಾಧ್ಯತೆಯಿದೆ.
Six days rain alert from today ನವೆಂಬರ್ 27 ರಂದು ಚಿಕ್ಕಮಗಳೂರು, ಹಾಸನ, ಉಡುಪಿ, ಕೊಡಗು, ಮಂಡ್ಯ, ಮೈಸೂರು ದಕ್ಷಿಣ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.
ನವೆಂಬರ್ 28 ರಂದು ಮೈಸೂರು, ಉಡುಪಿ, ಕೊಡಗು, ಮಂಡ್ಯ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Six days rain alert from today ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
Six days rain alert from today ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Free goat training and 20 chicks distribution ಉಚಿತವಾಗಿ ಕುರಿ ಮೇಕೆ ಸಾಕಾಣಿಕೆಗೆ ಅರ್ಜಿ ಆಹ್ವಾನ ಉಚಿತವಾಗಿ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





