State Budget 2024 – 2025 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇಂದಿನ ಬಜೆಟ್ ನಲ್ಲಿ ದೇಶದ ಬೆನ್ನೆಲಬು ರೈತರ ಪರವಾಗಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ. ಹಾಗಾದರೆ ಕೃಷಿ ಕ್ಷೇತ್ರಕ್ಕೆ ಏನೇನು ಕೊಡುಗೆ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗುವುದು.
State Budget 2024 – 2025 ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ
ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1 ಲಕ್ಷ 81 ಸಾವಿರ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.

State Budget 2024 – 2025 ಕೃಷಿ ಭಾಗ್ಯ ಯೋಜನೆ
ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಸಹಾಯಧನನೀಡಲಾಗುವುದು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000, ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.
ಇದನ್ನೂ ಓದಿ : Gruhalakshmi money credited ಈ ಮಹಿಳೆಯರ ಖಾತೆಗೆ ಜಮೆಯಾಯಿತು ಗೃಹಲಕ್ಷ್ಮೀ ಹಣ 2025
ಅನುಗ್ರಹ ಯೋಜನೆಯಡಿ ರೈತರ ಜಾನುವಾರುಗಳಾದ ಹಸು, ಎಮ್ಮೆ ಮತ್ತು ಎತ್ತುಗಳು ಆಕಸ್ಮಿಕವಾಗಿ ಮೃತಪಟ್ಟರೆ 15 ಸಾವಿರ ರೂಪಾಯಿ, ನೀಡಲಾಗುವುದು. ಕುರಿ ೇಕೆ ಸಾವನ್ನಪ್ಪಿದ್ದರೆ 7500 ರೂಪಾಯಿ ನೀಡಲಾಗುವುದು. 3ರಿಂದ 6 ತಿಂಗಳ ಕುರಿ ಮೇಕೆ ಸಾವನ್ನಪ್ಪಿದ್ದರೆ 5 ಸಾವಿರ ರೂಪಾಯಿ ನೀಡಲಾಗುವುದು ಎಂದು ಬಜೆಟ್ ನಲ್ಲಿ ಘೋಶಣೆ ಮಾಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಶೇ 50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ ಸಹಾಯಧನ ನೀಡಲಾಗುವುದು.
ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್ʼ ಅನ್ನು ಸ್ಥಾಪಿಸಲಾಗುವುದು.
State Budget 2024 – 2025 ರೈತರ ಜಾನುವಾರುಗಳ ಆಕಸ್ಮಿಕ ಸಾವು; ಪರಿಹಾರದ ಮೊತ್ತ ಹೆಚ್ಚಳ
ಜಾನುವಾರುಗಳ ಆಕಸ್ಮಿಕ ಸಾವಿನಿಂದ ರೈತರು ಅನುಭವಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿಗೆ ತರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಜಾನುವಾರುಗಳು ಆಕಸ್ಮಿಕ ಸಾವಿನಿಂದ ರೈತರು ಅನುಭವಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ .
2025-26ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಈಗಾಗಲೇ ಅನುಗ್ರಹ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10 ಸಾವಿರದಿಂದ 15 ಸಾವಿರ ರೂ. ಗಳಿಗೆ, ಕುರಿ-ಮೇಕೆಗಳಿಗೆ ನೀಡುತ್ತಿರುವ 5 ಸಾವಿರ ರೂ.ಗಳಿಂದ 7500 ರೂ. ಹಾಗೂ 3 ರಿಂದ 6 ತಿಂಗಳ ಕುರಿ, ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3500ರೂ. ಗಳಿಂದ 5000ರೂ. ಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ನೂತನ 50 ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು ಎಂದರು.
State Budget 2024 – 2025 ನೂರು ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಿಸಲಾಗುವುದು. ರಾಜ್ಯದ ಹೆಮ್ಮೆಯ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರ್ ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 2 ಕೋಟಿ ರೂ. ಒದಗಿಸಲಾಗುವುದು. ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದರು.





