Status ಬೆಳೆ ವಿಮೆ ಬೆಳೆ ಹಾನಿ ಪಿಎಂ ಕಿಸಾನ್ ಸ್ಟೇಟಸ್ ಹೀಗೆ ಚೆಕ್ ಮಾಡಿ 2024

Written by Admin

Updated on:

Spread the love

Status : ಬೆಳೆ ವಿಮೆ, ಬೆಳೆ ಹಾನಿ ಹಾಗೂ ಪಿಎಂ ಕಿಸಾನ್ ಸ್ಟೇಟಸ್ ನ್ನು ರೈತರು ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ  ಚೆಕ್ ಮಾಡಬಹುದು.

ಹೌದು, ರೈತ ಮಿತ್ರರೆ, ನೀವು ಯಾರ ಸಹಾಯವೂ ಇಲ್ಲದೆ ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಬೆಳೆ ವಿಮೆ, ಬೆಳೆ ಹಾನಿ ಪಾಗೂ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಯಾವ ದಾಖಲೆ ಬೇಕು?  ಕೇವಲ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ಕಾರ್ಡ್ ಇದ್ದರೆ ಸಾಕು, ನೀವು ಕುಳಿತಲ್ಲಿಯೇ ಎಲ್ಲಾ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

Status

ಆರಂಭದಲ್ಲಿ ಬೆಳೆ ವಿಮೆ ಸ್ಟೇಟಸನ್ನು ಮೊಬೈಲ್ ನಲ್ಲಿಚೆಕ್ ಮಾಡುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಸಲಾಗುವುದು.

Status ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 2023-24ನೇ ಸಾಲಿನ ಮುಂಗಾರು, ಹಿಂಗಾರು  ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರು ತಮ್ಮ ಅರ್ಜಿಯ ಸ್ಟೇಟಸನ್ನು ಅಥವಾ ಜಮೆಯ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೀವು ಮುಂಗಾರು ಹಂಗಾಮಿನ ಸ್ಟೇಟಸ್ ಚೆಕ್ ಮಾಡುವುದಾದರೆ ಖಾರಿಫ್ ಆಯ್ಕೆ ಮಾಡಿಕೊಳ್ಳಬೇಕು. ಹಿಂಗಾರು ಬೆಳೆಯ ಸ್ಟೇಟಸ್ ಚೆಕ್ ಮಾಡುವುದಾದರೆ ರಾಬಿ ಆಯ್ಕೆ ಮಾಡಿಕೊಂಡು ಮುಂದೆ ಗೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಫಾರ್ಮರ್ಸ್ ಕೆಳಗಡೆ ಕಾಣುವ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : land transfer ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ 2024

ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಬಹುದು.

Status ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಕಳೆದ ಮೂರು ವರ್ಷದಲ್ಲಿ ಬೆಳೆ ಹಾನಿ ಪರಿಹಾರ ಯಾವ ಯಾವ ರೈತರಿಗೆ ಎಷ್ಟೆಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಫ್ಲಡ್ ಹಾಗೂ ಕಳೆದ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಸಂಖ್ಯೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ನ್ನು ನಮೂದಿಸಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಯಾವ ಬೆಳೆಗೆ ಯಾವ ಸರ್ವೆ ನಂಬರಿಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

status check

Status ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಸಹ ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಬಹುದು. ಹೌದು, ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಪೇಜ್ ಓಪನ್ ಆಗುತ್ತದೆ. . ಅಲ್ಲಿ ನಿಮಗೆ Know Your status ಮೇಲೆ ಕ್ಲಿಕ್ ಮಾಡಬೇಕು. ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ನಿಮ್ಮ ರೆಜಿಸ್ಟ್ರೇಶನ್ ನಂಬರ್ ನಮೂದಿಸಿಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ನಿಮಗೆ Know Your registration ನಂಬರ್ ಮೇಲೆ ಕ್ಲಿಕ್  ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.

ಅಲ್ಲಿ ನಿಮ್ಮ ಮೊಬೈಲ್ ನಂಬರ್   ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ನಿಮ್ಮ ಪಿಎಂ ಕಿಸಾನ್ ನೋಂದಣಿ ಸಂಖ್ಯೆಯನ್ನು ಪಡೆದುಕೊಳ್ಳಬಹುದು. ಆ ನೋಂದಣಿ ಸಂಖ್ಯೆಯಿಂದ ಸ್ಟೇಟಸ್ ಚೆಕ್ ಮಾಡಬಹುದು.

Leave a Comment