Subsidy ಗಂಗಾ ಕಲ್ಯಾಣ ಯೋಜನೆ, ಕಾರ್, ಆಟೋ ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Admin

Published on:

Spread the love

Subsidy : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರ್, ಆಟೋ, ಗೂಡ್ಸ್ ವಾಹನ ಖರೀದಿಗೆ ಹಾಗೂ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ನೇರ ಸಾಲ ಸಬ್ಸಿಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Subsidy ಯಾವ ಯಾವ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಬಹುದು?

ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಹಾಯಧನ ಯೋಜನೆ, ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)  ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು.

Subsidy ಯಾರು ಯಾರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ?

ಪ್ರವರ್ಗ-1ರ 6 (ಎ) ಯಿಂದ 6 (ಎಕೆ) ವರೆಗೆ ಬರುವ ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ಗ್ರಾಮ ಒನ್ / ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ದಲ್ಲಿ ಆನ್ಲೈನ್ ಮೂಲಕ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ https://ambigaradevelopment.karnataka.gov.in

ವೆಬ್ಸೈಟ್ ನ್ನು ಸಂಪರ್ಕಿಸಬಹುದು. ನಿಗಮದ ದೂರವಾಣಿ ಸಂಖ್ಯೆ 080 22864099 ಅಥವಾ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು.

ಅರ್ಜಿದಾರರು https://sevasindhu.karnataka.gov.in

ಸೇವಾ ಸಿಂಧು ಪೋರ್ಟಲ್ ಮೂಲಕ, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಆಗಸ್ಟ್31 ರೊಳಗೆ ಅರ್ಜಿ ಸಲ್ಲಿಸಬೇಕು.

Subsidy ಅರ್ಜಿದಾರರಿಗೆ ಇರಬೇಕಾದ ಅರ್ಹತೆ ದಾಖಲೆಗಳು?

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.

Subsidy

ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ಮತ್ತು ನಿರ್ದೇಶಕ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಬಸುವವರು ಸಹ ಆನ್ಲೈನ್ ನಲ್ಲಿಅರ್ಜಿ ಸಲ್ಲಿಸಬೇಕು.

ಒಂದು ಕುಟುಂಬದ ಒಬ್ಬರಿಗೆ ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನೂ ಓದಿ Aadhaar seeding ಮಾಡಿಸಿದರೆ ಮಾತ್ರ ಪಿಎಂ ಕಿಸಾನ್ ಹಣ ಜಮೆ ಇಲ್ಲಿ ಆಧಾರ್ ಸೀಡಿ ಮಾಡಿಸಿ 2024

ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Subsidy ಗಂಗಾ ಕಲ್ಯಾಣ ಯೋಜನೆಗೆ ಬೇಕಾಗುವ ಅರ್ಹತೆಗಳು

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 2 ಹಾಗೂ ಗರಿಷ್ಠ 5 ಎಕರೆ ಜಮೀನಿರಬೇಕು. ಅತೀ ಸಣ್ಣ ಸಣ್ಣ ರೈತರಾಗಿರಬೇಕು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ತುಮಕೂರು ಜಿಲ್ಲೆಗಳ ರೈತರಿಗೆ 4.25 ಲಕ್ಷ ಸಬ್ಸಿಡಿ ನೀಡಲಾಗುವುದು. ಉಳಿದ ಜಿಲ್ಲೆಯ ರೈತರಿಗೆ 3.25 ಲಕ್ಷ ಸಬ್ಸಿಡಿ ನೀಡಲಾಗುವುದು.

ಸ್ವಾವಲಂಬಿ ಸಾರಥಿಗೆ ಬೇಕಾಗುವ ಅರ್ಹತೆಗಳು

ಅರ್ಜಿದಾರರು ಲಘುವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಸ್ವಯಂ ಟ್ಯಾಕ್ಸಿ ಚಾಲನೆ ಉದ್ದೇಶಕ್ಕೆ ನೋಂದಾಯಿಸಬೇಕು. ಟ್ಯಾಕ್ಸಿ, ಟಾಟಾ ಎಸಿ ಗೂಡ್ಸ್ ವಾಹನ ಖರೀದಿಗೆ 1 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.

Leave a Comment