Subsidy for Krishi Honda ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಹಾವೇರಿ ಜಿಲ್ಲಾದ್ಯಂತ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕೆ ಮತ್ತು ರೈತರ ಜೀವನಮಟ್ಟ ಸುಧಾರಿಸುವುದರೊಂದಿಗೆ, ಬರ ಉಪ ಶಮನದ ಗುರಿ ಹೊಂದಿರುವ ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನಕ್ಕಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಯೋಜನೆಯನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಮಳೆ ನೀರು, ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆಗಾಗಿ ಈ ಯೋಜನೆ ಅಡಿ ಬದು ನಿರ್ಮಾಣ, ಕೃಷಿ ಹೊಂಡ, ತಂತಿ ಬೇಲಿ, ಪಾಲಿಥಿನ್ ಹೊದಿಕೆ, ಡೀಸೆಲ್ ಪಂಪ್ ಸೆಟ್ ಹಾಗೂ ತುಂತುರು ನೀರಾವರಿ ಘಟಕಗಳನ್ನು ರೈತರು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಈ ಘಟಕಗಳಿಗೆ ಸಹಾಯಧನ ಲಭ್ಯವಿರುತ್ತದೆ.
ಆಸಕ್ತ ರೈತ ಬಾಂಧವರು ಸೆಪ್ಟೆಂಬರ್ 5 ರ 2024 ರೊಳಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : Land Mutation history ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಇಲ್ಲೇ ಚೆಕ್ ಮಾಡಿ 2024
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subsidy for Krishi Honda ಕೃಷಿ ಭಾಗ್ಯ ಯೋಜನೆಯ ಉದ್ದೇಶ
ಮಳೆ ನೀರಿನ ಸಂಗ್ರಹ ಸಮರ್ಪಕವಾಗಿ ಮಾಡುವುದು. ಶೇಖರಣೆಯಾದ ನೀರನ್ನು ಉಪಯುಕ್ತವಾಗಿ ಬಳಕೆ ಮಾಡಿ ಕೃಷಿ ಉತ್ಪಾದಕೆಯನ್ನು ಉತ್ತಮ ಪಡಿಸಿ ಆದಾಯ ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜನ ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
Subsidy for Krishi Honda ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಏನೇನು ನೀಡಲಾಗುವುದು?
ಮಳೆ ನೀರಿನ ಸಮರ್ಥ ಬಳಕೆ ಮತ್ತು ಸಂರಕ್ಷಿತ ನೀರಾವರಿಗೆ ತನ್ಮೂಲಕ ಸುಧಾರಿತ ಬೆಳೆ ಉತ್ಪಾದನಾ ಪದ್ದತಿ ಅಳವಡಿಸಲು ರೈತರನ್ನು ಪ್ರೋತ್ಸಾಹಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಪ್ಯಾಕೇಜ್ ರೂಪದಲ್ಲಿ ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಪಂಪ್ ಸೆಟ್, ಲಘು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲು ನೆರಳು ಪರದೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.
Subsidy for Krishi Honda ಕೃಷಿ ಭಾಗ್ಯ ಯೋಜನೆಯಡಿ ನೀಡಲಾಗುವ ಸಬ್ಸಿಡಿಗಳ ಮಾಹಿತಿ
ಕೃಷಿ ಭಾಗ್ಯ ಯೋಜನೆಯಡಿಯಲ್ಲಿಕೃಷಿ ಹೊಂಡ ಹಾಗೂ ಇತರ ಘಟಕಗಳ ಅನುಷ್ಠಾನಕ್ಕೆ ಸಬ್ಸಿಡಿ ನೀಡಲಾಗುವುದು. ಹೌದು, ಕೃಷಿ ಹೊಂಡ ನಿರ್ಮಾಣಕ್ಕೆ ಸಾಮಾನ್ಯ ಜನರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು.
ಇದನ್ನೂ ಓದಿ : Check pahani adhar link ಪಹಣಿಗೆ ಆಧಾರ್ ಲಿಂಕ್ ಆಗಿದೆಯೇ ಮೊಬೈಲ್ ನಲ್ಲಿ ಚೆಕ್ ಮಾಡಿ 2024
ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ / ಪರ್ಯಾ ಮಾದರಿಗಳಿಗೆ ಗರಿಷ್ಠ 50 ಸಾವಿರರೂಪಾಯಿ ನೀಡಲಾಗುವುದು. ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ ಸೆಟ್ 3 ರಿಂದ 5 ಹೆಚ್ ಪಿ ಗೆ ಸಾಮಾನ್ಯ ಜನರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ. ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ (ತುಂತುರು ಅಥವಾ ಹನಿ ನೀರಾವರಿ)ಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಕೃಷಿ ಹೊಂಡದಸುತತ್ಲೂ ನೆರಳು ಪರದೆ ನಿರ್ಮಿಸಲು ಶೇ. 50 ರಷ್ಟು ಸಹಾಯಧನ ನೀಡಲಾಗುವುದು.