Taxi car purchase subsidy ಸ್ವಾವಲಂಬಿ ಸಾರಥಿ ಯೋಜನೆ ಅಡಿ ಕಾರ್ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Admin

Published on:

Spread the love

Taxi car purchase subsidy : ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ, ಟಾಟಾ ಎಸಿ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು  ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅರಿವು ಶೈಕ್ಷಣಿಕ ಸಾಲ ಯೋಜನೆ (ಫ್ರೆಶ್ ಸ್ಟುಡೆಂಟ್ಸ್), ಅರಿವು ಶೈಕ್ಷಣಿಕ ಸಾಲ ಯೋಜನೆ (ರಿನಿವಲ್), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು (ಫ್ರೆಶ್ ಸ್ಟುಡಂಟ್ಸ್), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

Taxi car purchase subsidy

ಸರ್ಕಾರದ ಆದೇಶ ಸಂಖ್ಯೆ ಸಕಇ 225 ಬಿಸಿಎ 2000, ದಿನಾಂಕ 30.03.2002ರ ಆದೇಶದಲ್ಲಿನ ಪ್ರವರ್ಗ-1ರ 6(ಚಿ) ಯಿಂದ 6(ಚಿಞ) ವರೆಗೆ ಬರುವ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗೆ ಸೇರಿದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ 2025ರ ಜುಲೈ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ

https://ambigaradevelopment.karnataka.gov.in/

080-22864099 ಅಥವಾ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ  ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635ಗೆ  ಸಂಪರ್ಕಿಸಲು ಕೋರಲಾಗಿದೆ.

Taxi car purchase subsidy ವಿವಿಧ ಯೋಜನೆಯಡಿ ಸಾಲಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2(ಎ)ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ How to get E swathu ಗ್ರಾಮೀಣ ಕೃಷಿಯೇತರ ಆಸ್ತಿಗೆ ಇ-ಸ್ವತ್ತು ಕಡ್ಡಾಯ: ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ 2025

ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಯಡಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್

http://sevasindhu.karnataka.gov.in

ಮುಖಾಂತರ, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ  ಹಾಗೂ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಅರ್ಹ ಫಲಾನುಭವಿಗಳು   hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom  ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ 2025ರ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ

. www.kmmd.karnataka.gov.in

ವೆಬ್‌ಸೈಟ್‌ನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832, 8050770004, 8050770005, ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ  ವ್ಯವಸ್ಥಾಪಕರ ಕಚೇರಿಯನ್ನು,. ದೂರವಾಣಿ ಸಂಖ್ಯೆ: 08472-278635 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment