Today onwards five day rain ಇಂದಿನಿಂದ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಇಲ್ಲಿದೆ ಮಾಹಿತಿ

Written by Admin

Published on:

Spread the love

Today onwards five day rain : ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Today onwards five day rain ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ 

ಹೌದು, ಅಕ್ಟೋಬರ್ 23 ರಿಂದ 25 ರವರೆಗೆ  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಹಾವೇರಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಿಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಬಾಗಲಕೋಟೆ ಜಿಲ್ಲೆಗಳಲ್ಲಿ ಬಹುತೇಕ ಒಣ ಹವೆ ಇರಲಿದೆ.

ಕೊಡಗು ಮೈಸುರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅಕ್ಟೋಬರ್ 23 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅಕ್ಟೋಬರ್ 24 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಅಕ್ಟೋಬರ್ 25 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,  ಹಾಸನ, ಕೊಡಗು, ಚಿಕ್ಕಮಗಳೂರು, ರಾಮನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Today onwards five day rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

Today onwards five day rain ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : Crop insurance calculation check now ಬೆಳೆ ವಿಮೆ ಹೆಕ್ಟೇರಿಗೆ ಎಷ್ಟು ಕಟ್ಟಿದರೆ ಎಷ್ಟು ಜಮೆಯಾಗುತ್ತದೆ ? ಇಲ್ಲೇ ಚೆಕ್ ಮಾಡಿ- 2026

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

Leave a Comment