ಇಂದು ಪಿಎಂ ಕಿಸಾನ್ ಹಣ ಬಿಡುಗಡೆ 2024- ನಿಮ್ಮ ಹೆಸರು ಚೆಕ್ ಮಾಡಿ

Written by Admin

Published on:

Spread the love

pmkisan 16th installment released ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್. ಇಂದು ದೇಶದ ಎಲ್ಲಾ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬಿಡುಗಡೆ ಆಗಲಿದೆ.

ಇದೇನಪಾ……ಕಳೆದ ಎರಡು ತಿಂಗಳ ಹಿಂದೆ ಪಿಎಂ ಕಿಸಾನ್ ಹಣ ಜಮೆಯಾಗಿತ್ತು. ಮೂರೇ ತಿಂಗಳಲ್ಲಿ ಇನ್ನೊಂದು ಕಂತು ಹೇಗೆ ಜಮೆಯಾಗುತ್ತದೆ? ಪ್ರತಿ ನಾಲ್ಕು ತಿಂಗಳಿಗೆ ಪಿಎಂ ಕಿಸಾನ್ ಕಂತಿನ ಹಣ ಜಮೆಯಾಗುತ್ತಿತ್ತು. ಆದರೆ ಈ ಸಲ ಮೂರೇ ತಿಂಗಳಲ್ಲಿ ಹೇಗೆ ಜಮೆಯಾಗುತ್ತದೆ? ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಏಪ್ರೀಲ್ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಮಾರ್ಚ್ ತಿಂಗಳಲ್ಲಿ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗುವುದು. ಇದರೊಂದಿಗೆ ಪಿಎಂ ಕಿಸಾನ್ ಯೋಜನೆ ಆರಂಭವಾಗಿ ಐದು ವರ್ಷ ಪೂರ್ಣಗೊಳ್ಳುತ್ತದೆ. ಇದರೊಂದಿಗೆ ಸರ್ಕಾರದ ಅವಧಿ ಮುಗಿದ ನಂತರ ಹಾಗೂ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಕೇಂದ್ರ ಸರ್ಕಾರದ ಯಾವ ಯೋಜನೆಗಳಿಂದ ಹಣ ಬಿಡುಗಡೆ ಮಾಡಲಾಗುವುದಿಲ್ಲ. ಹಾಗಾಗಿ ಒಂದು ತಿಂಗಳ ಮೊದಲೇ ಈ 16ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ರೈತರಿಗಂತು ಇದು ಸಂತಸದ ಸಂಗತಿಯಾಗಿದೆ.

ಲೋಕಸಭಾ ಚುನಾವಣೆ ಮುಗಿದ ನಂತರ ಮಂಡನೆಯಾಗುವ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನೆಯ ಹಣವನ್ನು ಹೆಚ್ಚಿಸಲಾಗುವುದು ಎಂಬ ವರದಿ ಕೇಳಿ ಬರುತ್ತಿದೆ. ಆದರೆ ಚುನಾವಣೆಯ ನಂತರ ಈ ಯೋಜನೆಯ ಕುರಿತು ಹೇಳಲಾಗುವುದು.

ಇಂದು ಪಿಎಂ ಕಿಸಾನ್ ಯೋಜನೆಯ ಪಿಎಂ ಕಿಸಾನ್ ಹಣ ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದು ಫೆಬ್ರವರಿ 28 ರಂದು ರೈತರ ಖಾತೆಗೆ ಏಕಕಾಲದಲ್ಲಿ ಜಮೆ ಮಾಡಲಾಗುವುದು.  ಹೌದು, ಕಳೆದ ಮೂರು ತಿಂಗಳಿಂದ ಕಾಯುತ್ತಿರುವ ರೈತರಿಗೆ ಇದು ಭರ್ಜರಿ ಗುಡ್ ನ್ಯೂಸ್ ಆಗಲಿದೆ.

ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ ಆಗಲಿದೆ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರಿಗೆಲ್ಲರಿಗೂ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಬೇಕು. ಹೌದು ಪಿಎಂ ಕಿಸಾನ್ ಯೋಜನೆಗೆ  ಅರ್ಹತೆ ಪಡೆದ ರೈತರೆಲ್ಲರಿಗೂ 16ನೇ ಕಂತು ಪಿಎಂ ಕಿಸಾನ್ ಹಣ ಬಿಡುಗಡೆ ಆಗಲಿದೆ. ಇದರೊಂದಿಗೆ ಇಕೆವೈಸಿ ಯಾರು ಯಾರು ಮಾಡಿಸಿದ್ದಾರೋ ಆ ರೈತರಿಗೆಲ್ಲರಿಗೂ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.

ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.

ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ. ಎ ದಿಂದ ಹೆಸರು ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ಕೆಳಗೆ ನೀಡಲಾದ ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರನ್ನು ಸುಲಭವಾಗಿ ಚೆಕ್ ಮಾಡಬಹುದು.

ಪಿಎಂ ಕಿಸಾನ್ ಹಣ ಬಿಡುಗಡೆ
ಇಂದು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿದ್ದ ಪಿಎಂ ಕಿಸಾನ್ ಹಣ ಬಿಡುಗಡೆ ಆಗುವುದೇ?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಎಲ್ಲಾ ರೈತರಿಗೆ 16 ನೇ ಕಂತಿನ ಹಣ ಜಮೆಯಾಗುತ್ತದೆ ಎಂಬುದು ಸುಳ್ಳು.  ಏಕೆಂದರೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆಲ್ಲರಿಗೂ ಇಕೆವೈಸಿ ಮಾಡಿಸುವುದು ಕಡ್ಡಾಯವೆಂದು ಸೂಚಿಸಲಾಗಿತ್ತು. ಯಾವ ಯಾವ ರೈತರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದ್ದಾರೋ ಆ ರೈತರಿಗೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತಿನ ಪಿಎಂ ಕಿಸಾನ್ ಹಣ ಬಿಡುಗಡೆ . ಇಕೆವೈಸಿ ಮಾಡಿಸದೆ ಇರುವ ರೈತರಿಗೆ ಇನ್ನೂ ಕಾಲಾವಕಾಶವಿದೆ. ಹಾಗಾಗಿ ಕೂಡಲೇ  ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ನಿಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಇಕೆವೈಸಿ ಆಗಿದ್ದರೆ EKYC done successfully ಎಂಬ ಮೆಸೆಜ್ ಕಾಣಿಸುತ್ತದೆ.

ಅನರ್ಹ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡ ನಂತರ ಬಿಡುಗಡೆಯಾದ ಅನರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಅನರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಬಹುದು.

ಇಂದು ಪಿಎಂ ಕಿಸಾನ್ ಹಣ ಬಿಡುಗಡೆ 2024- ನಿಮ್ಮ ಹೆಸರು ಚೆಕ್ ಮಾಡಿ
Farmer Crop growing

ಮೇಲಿನ ಲಿಂಕ್ ಕ್ಲಿಕ್ ಮಾಡಿದ ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ  ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು.  ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ Submit ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ನಿಮಗೆ summary  payment status, Aadhaar authentication status ಹಾಗೂ  online Registration status  ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು Aadhaar Authentication status ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ Grahalakshmi Scheme status 2024 ಮೊಬೈಲ್ ನಲ್ಲೇ ಚೆಕ್ ಮಾಡಿ

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತೆ . ಅಲ್ಲಿಯೂ ನಿಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Total ineligible  ಕಾಲಂ ಕೆಳಗಡೆ ಅನರ್ಹ ರೈತರ   ಹೆಸರುಗಳು ಕಾಣಿಸುತ್ತವೆ.  ಅಲ್ಲಿ ಎ ದಿಂದ ಅಕ್ಷರಗಳು ಆರಂಭವಾಗಿರುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೋ ಇಲ್ಲ ವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಅಲ್ಲಿ ನಿಮ್ಮ ಹೆಸರು ಇದ್ದರೆ ನೀವು ಯೋಜನೆಗೆ ಅನರ್ಹರಾಗಿರುತ್ತೀರೆಂದರ್ಥ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬೇಕು.

Leave a Comment